Champions Trophy 2025: ಭಾರತ ತಂಡ ದುಬೈಗೆ ಹೊರಡುವ ದಿನಾಂಕ ಫಿಕ್ಸ್
ಫೆಬ್ರವರಿ 19 ರಿಂದ ಪ್ರಾರಂಭವಾಗುವ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಫೆಬ್ರವರಿ 20 ರಿಂದ ಐಸಿಸಿ ಮೆಗಾ ಟೂರ್ನಿಯಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಮುಂಬರುವ ಈ ಟೂರ್ನಿಗೆ ಭಾರತ ತಂಡ ಪ್ರಯಾಣಿಸುವ ಬಗ್ಗೆ ಇದೀಗ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ.
ರೋಹಿತ್ ಶರ್ಮಾ ಪಡೆ ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ಟೂರ್ನಿಯ ಮೊದಲ ಪಂದ್ಯವನ್ನು ಆಡಲಿದೆ. ಇದಾದ ಬಳಿಕ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಟೀಮ್ ಇಂಡಿಯಾ ದುರಿಸಲಿದ್ದಾರೆ. ಈ ಬ್ಲಾಕ್‌ಬಸ್ಟರ್ ಪಂದ್ಯ ಫೆಬ್ರವರಿ 23 ರಂದು ನಡೆಯಲಿದೆ. ಗುಂಪಿನ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಮಾರ್ಚ್ 2 ರಂದು ನ್ಯೂಜಿಲೆಂಡ್ ತಂಡವನ್ನು ಬಾರಿ ಎದುರಿಸಲಿದೆ. ಟೀಮ್ ಇಂಡಿಯಾ ಸೆಮಿಫೈನಲ್ ಅಥವಾ ಫೈನಲ್‌ಗೆ ಅರ್ಹತೆ ಪಡೆದರೆ, ಈ ಪಂದ್ಯಗಳು ದುಬೈನಲ್ಲಿ ಮಾತ್ರ ನಡೆಯಲಿವೆ.

ವರದಿಗಳ ಪ್ರಕಾರ, ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿ ಫೆಬ್ರವರಿ 12 ರಂದು ಮುಗಿಯಲಿದೆ. ಇದಾದ ನಂತರ ಫೆಬ್ರವರಿ 15 ರಂದು ಟೀಮ್ ಇಂಡಿಯಾ ದುಬೈಗೆ ಹೊರಡುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ನಿರ್ಗಮನ ವೇಳಾಪಟ್ಟಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹೊರ ಬೀಳಲಿದೆ.
ಟೀಮ್ ಇಂಡಿಯಾ ತನ್ನ ಅಭಿಯಾನವನ್ನು ಪ್ರಾರಂಭಿಸುವ ಮೊದಲು ಅಭ್ಯಾಸ ಪಂದ್ಯಗಳನ್ನು ಆಡುವ ಸಾಧ್ಯತೆಯಿಲ್ಲ. ಆದರೆ ಹೆಚ್ಚಿನ ತಂಡಗಳು ತಮ್ಮ ಪಂದ್ಯಗಳಿಗಾಗಿ ಪಾಕಿಸ್ತಾನದಲ್ಲಿ ಇರುವುದರಿಂದ ಪಂದ್ಯಗಳನ್ನು ಏರ್ಪಡಿಸುವುದು ಕಷ್ಟಕರವಾಗಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಅಭಿಯಾನವನ್ನು ಪ್ರಾರಂಭಿಸುವ ಮೊದಲು ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ.
ಚಾಂಪಿಯನ್ಸ್ ಟ್ರೋಫಿಗೆ ಮೊದಲು ಪಾಕಿಸ್ತಾನದಲ್ಲಿ ಉದ್ಘಾಟನಾ ಸಮಾರಂಭ, ನಾಯಕರ ಫೋಟೋಶೂಟ್ ಮತ್ತು ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಲಾಗಿದೆ. ಇದರೊಂದಿಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಉದ್ಘಾಟನಾ ಸಮಾರಂಭಕ್ಕಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವ ಗೊಂದಲಗಳಿಗೆ ತೆರೆ ಬಿದ್ದಿದೆ. ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ)ಯ ಮೂಲವೊಂದು ಮಾಹಿತಿಯನ್ನು ನೀಡಿದೆ. ಬಿಡುವಿಲ್ಲದ ಪ್ರಯಾಣದ ವೇಳಾಪಟ್ಟಿಯಿಂದಾಗಿ ತಂಡಗಳ ಅಲಭ್ಯತೆಯಿಂದಾಗಿ ಟೂರ್ನಿಗೆ ಮುಂಚಿತವಾಗಿ ನಾಯಕರ ಪತ್ರಿಕಾಗೋಷ್ಠಿಯನ್ನು ರದ್ದುಗೊಳಿಸಲಾಗಿದೆ.
ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ಕುಲದೀಪ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications