2017ರ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿದ್ದ ಎಷ್ಟು ಆಟಗಾರರು ಈಗ ತಂಡದಲಿದ್ದಾರೆ?
2025ರ ಚಾಂಪಿಯನ್ಸ್ ಟ್ರೋಫಿಗೆ ಕ್ಷಣಗಣನೆ ಆರಂಭವಾಗಿದೆ. ಈ ಮೆಗಾ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಪ್ರಶಸ್ತಿಗಾಗಿ ಕಾದಾಟವನ್ನು ನಡೆಸಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿದೆ.
ಈ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ತಂಡದಲ್ಲಿ ಹಲವರು ಈಗಾಗಲೇ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯವನ್ನು ಆಡಿದ ಅನುಭವ ಹೊಂದಿರುತ್ತಾರೆ. ಈ ತಂಡದಲ್ಲಿರುವ ಮೂವರು ಆಟಗಾರರು ಈಗಾಗಲೇ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಇನ್ನು 2017ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧವೂ ಆಡಿದ ಅನುಭವಿಗಳು ತಂಡದಲ್ಲಿದ್ದಾರೆ. ಹಾಗಿದ್ದರೆ ಎಷ್ಟು ಆಟಗಾರರು ಈ ಹಿಂದಿನ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ್ದರು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

2107ರಲ್ಲಿ ಭಾರತಕ್ಕೆ ಸೋಲು
2017ರಲ್ಲಿ ನಡೆದಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಿದ್ದವು. ಈ ವೇಳೆ ಮೊದಲು ಬ್ಯಾಟ್ ಮಾಡಿದ್ದ ಪಾಕ್ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 338 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ್ದ ಭಾರತ 30.3 ಓವರ್‌ಗಳಲ್ಲಿ 158 ರನ್‌ಗಳಿಗೆ ಆಲೌಟ್ ಆಯಿತು. ಪಾಕ್ ಈ ಪಂದ್ಯವನ್ನು 180 ರನ್‌ಗಳಿಂದ ಸುಲಭವಾಗಿ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ಆಡಿದ ನಾಲ್ವರು ಆಟಗಾರರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಈ ತಂಡದಲ್ಲಿದ್ದಾರೆ ಫೈನಲ್ ಆಡಿದ ಅನುಭವಿಗಳು
2017ರ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಆಡಿದ ಆಟಗಾರರ ಪಟ್ಟಿಯನ್ನು ನೋಡಿದಾಗ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಹಾ, ಹಾರ್ದಿಕ್ ಪಾಂಡ್ಯ ಅವರ ಹೆಸರುಗಳು ಕಾಣಿಸಿಕೊಳ್ಳುತ್ತವೆ. ಆಗ ವಿರಾಟ್ ಕೊಹ್ಲಿ ಕ್ಯಾಪ್ಟನ್ ಆಗಿದ್ದರು. ಇದಾದ ಬಳಿಕವೇ ವಿರಾಟ್ ನಾಯಕತ್ವವನ್ನು ತ್ಯಜಿಸಿದ್ದರು. ಈ ಟೂರ್ನಿಯಲ್ಲಿ ಈ ನಾಲ್ವರು ಆಟಗಾರರು ಸ್ಥಿರ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು. ಆದರೆ ಕೊನೆಯ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು.

ಟೀಮ್ ಇಂಡಿಯಾ ಸದ್ಯ ಭರ್ಜರಿ ಫಾರ್ಮ್‌ನಲ್ಲಿದೆ. ಈ ತಂಡದ ಸ್ಟಾರ ಆಟಗಾರ ವಿರಾಟ್ ಕೊಹ್ಲಿ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇವರು ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದು ಶತಕ ಹಾಗೂ ಒಂದು ಅರ್ಧಶತಕ ಬಾರಿಸಿದ್ದು, ಗರಿಷ್ಠ ರನ್ ಸಾಧಕರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ರವೀಂದ್ರ ಜಡೇಜಾ ಹಾಗೂ ಹಾರ್ದಿಕ್ ಪಾಂಡ್ಯ ತಮ್ಮ ಆಲ್‌ರೌಂಡರ್ ಆಟದಿಂದ ತಂಡದ ಗೆಲುವಿನಲ್ಲಿ ಮಿಂಚುತ್ತಿದ್ದಾರೆ. ರೋಹಿತ್ ಶರ್ಮಾ ಹೆಗಲ ಮೇಲೆ ಕ್ಯಾಪ್ಟನ್ ಎಂಬ ಒತ್ತಡವಿದ್ದು, ಇದನ್ನು ಮೆಟ್ಟಿನಿಂತು ಆರಂಭದಲ್ಲಿ ನೈಜ್ಯ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾಗುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications