Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Champions Trophy: ಸೆಮಿಸ್‌ನಲ್ಲಿ ಆಫ್ರಿಕಾಗೆ ಸೋಲು; ಭಾರತ-ನ್ಯೂಜಿಲೆಂಡ್ ಫೈನಲ್ ಫೈಟ್

ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂಜಿಲೆಂಡ್ ಚಾಂಪಿಯನ್ಸ್ ಟ್ರೋಫಿ 2025 ರ ಎರಡನೇ ಸೆಮಿಫೈನಲ್ ಪಂದ್ಯವನ್ನು ಗೆದ್ದಿದೆ. ಕಿವೀಸ್ ಪಡೆ ಮಾರ್ಚ್ 9 ರಂದು ದುಬೈನಲ್ಲಿ ಭಾರತ ವಿರುದ್ಧ ಫೈನಲ್ ಪಂದ್ಯವನ್ನು ಆಡಲಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 6 ವಿಕೆಟ್‌ಗೆ 362 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ತಂಡವು 50 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 312 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು.

ದಕ್ಷಿಣ ಆಫ್ರಿಕಾ ಪರ ಡೇವಿಡ್ ಮಿಲ್ಲರ್ ಕೊನೆಯ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಆದರೆ ದಕ್ಷಿಣ ಆಫ್ರಿಕಾ ತಂಡವು ಪಂದ್ಯವನ್ನು ಗೆಲ್ಲಲು ಸಾಕಾಗಲಿಲ್ಲ. ಕೊನೆಯ ಎಸೆತದಲ್ಲಿ ಎರಡು ರನ್ ಗಳಿಸುವ ಮೂಲಕ ಮಿಲ್ಲರ್ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಅವರು 67 ಎಸೆತಗಳಲ್ಲಿ 100 ರನ್ ಗಳಿಸಿದ ನಂತರ ಅವರು ಅಜೇಯರಾಗಿ ಉಳಿದರು.

Champions Trophy 2025 final match between India and New Zealand

ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ರಚಿನ್ ರವೀಂದ್ರ ಮತ್ತು ಕೇನ್ ವಿಲಿಯಮ್ಸನ್ ತಂಡಕ್ಕೆ ಉತ್ತಮ ಆರಂಭ ನೀಡಿದರು. ಇಬ್ಬರೂ ಬ್ಯಾಟರ್‌ಗಳು ‌ಅದ್ಭುತ ಶತಕಗಳನ್ನು ಬಾರಿಸಿ ಮಿಂಚಿದರು. ರವೀಂದ್ರ 101 ಎಸೆತಗಳಲ್ಲಿ 108 ರನ್ ಗಳಿಸಿದರೆ, ವಿಲಿಯಮ್ಸನ್ 102 ರನ್ ಗಳಿಸಿ ಔಟಾದರು. ಇದಾದ ನಂತರ, ಗ್ಲೆನ್ ಫಿಲಿಪ್ಸ್ ಮತ್ತು ಡ್ಯಾರಿಲ್ ಮಿಚೆಲ್ ಕೂಡ ವೇಗವಾಗಿ ತಲಾ 49 ರನ್ ಗಳಿಸಿದರು. ಮಿಚೆಲ್ 37 ಎಸೆತಗಳಲ್ಲಿ 49 ರನ್ ಗಳಿಸದರೆ, ಫಿಲಿಪ್ಸ್ ಕೇವಲ 27 ಎಸೆತಗಳಲ್ಲಿ 49 ರನ್ ಚಚ್ಚಿದರು.

ಅದ್ಭುತ ಬ್ಯಾಟಿಂಗ್‌ನಿಂದಾಗಿ ನ್ಯೂಜಿಲೆಂಡ್ ತಂಡ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟ್‌ರ ನಷ್ಟಕ್ಕೆ 362 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿತು. ಇದು ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ದಾಖಲಾದ ಅತ್ಯಧಿಕ ಮೊತ್ತವಾಗಿತ್ತು. ಕಿವೀಸ್ ಪಡೆ ನೀಡಿದ 363 ರನ್‌ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್‌ನಲ್ಲಿ ಮಂಕಾಯಿತು.

ನ್ಯೂಜಿಲೆಂಡ್ ದಾಖಲೆಯ ಬ್ಯಾಟಿಂಗ್ ನಂತರ, ಬೌಲಿಂಗ್‌ನಲ್ಲಿಯೂ ಪ್ರಾಬಲ್ಯ ಸಾಧಿಸಿತು. ನಾಯಕ ಮಿಚೆಲ್ ಸ್ಯಾಂಟ್ನರ್ ದಕ್ಷಿಣ ಆಫ್ರಿಕಾವನ್ನು ಕಟ್ಟಿ ಹಾಕಿದರು. ಟೆಂಬಾ ಬವುಮಾ (56), ರಾಸ್ಸಿ ವ್ಯಾನ್ ಡೆರ್ ಡಸೆನ್ (69) ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ಔಟ್ ಮಾಡುವ ಮೂಲಕ ಮಿಚೆಲ್ ಸ್ಯಾಂಟ್ನರ್ ಗೆಲುವಿನ ಹೀರೋ ಎನಿಸಿಕೊಂಡರು. ಬ್ರೇಸ್‌ವೆಲ್ ಮತ್ತು ಮ್ಯಾಟ್ ಹೆನ್ರಿ ತಲಾ 1 ವಿಕೆಟ್ ಪಡೆದರೆ, ಗ್ಲೆನ್ ಫಿಲಿಪ್ಸ್ ಅದ್ಭುತ ಬ್ಯಾಟಿಂಗ್ ನಡೆಸಿ 2 ವಿಕೆಟ್ ಪಡೆದರು.

ದಾಖಲೆಯ ಶತಕ

ದಕ್ಷಿಣ ಆಫ್ರಿಕಾ ಪರ ನಾಯಕ ಟೆಂಬಾ ಬವುಮಾ ಮತ್ತು ರಾಸ್ಸಿ ವ್ಯಾನ್ ಡೆರ್ ಡಸೆನ್ ಉತ್ತಮ ಆರಂಭವನ್ನು ನೀಡಿದರು. ಇಬ್ಬರೂ ಅರ್ಧಶತಕ ಗಳಿಸಿದರು. ಆದರೆ ಅವರು ಔಟಾದ ತಕ್ಷಣ, ಕ್ಲಾಸೆನ್ ಮತ್ತು ಮಾರ್ಕ್ರಾಮ್‌ ತಂಡಕ್ಕೆ ಆಸರೆಯಾಗಲಿಲ್ಲ. ಇದಾದ ಬಳಿಕ ಡೇವಿಡ್ ಮಿಲ್ಲರ್ ಸ್ಪೋಟಕ ಬ್ಯಾಟಿಂಗ್ ಮಾಡಿದರು. ಒಂದು ತುದಿಯಿಂದ ವಿಕೆಟ್‌ಗಳು ಬೀಳುತ್ತಿದ್ದರೂ ಮಿಲ್ಲರ್ ಕಿವೀಸ್ ಬೌಲರ್‌ಗಳ ಬೆವರಿಳಿಸಿದರು. ಅವರು ಕೇವಲ 67 ಎಸೆತಗಳಲ್ಲಿ ಶತಕ ಪೂರೈಸಿದರು. ಇದು ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಅತ್ಯಂತ ವೇಗದ ಶತಕವಾಗಿದೆ. ಈ ದಾಖಲೆಯು 2002 ರಲ್ಲಿ 77 ಎಸೆತಗಳಲ್ಲಿ ಶತಕ ಗಳಿಸಿದ ಭಾರತದ ಮಾಜಿ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು.

Story first published: Wednesday, March 5, 2025, 23:49 [IST]
Other articles published on Mar 5, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+