Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Champions Trophy: ಟ್ರೋಫಿ ಗೆಲ್ಲುವ ಆಸೀಸ್ ಕನಸಿಗೆ ಪೆಟ್ಟು; ತಂಡದಿಂದ ಮಿಚೆಲ್ ಮಾರ್ಷ್ ಔಟ್

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಆರಂಭಕ್ಕೆ ಕೇವಲ 19 ದಿನಗಳು ಮಾತ್ರ ಬಾಕಿ ಉಳಿದಿವೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ದೊಡ್ಡ ಹಿನ್ನಡೆ ಅನುಭವಿಸಿದೆ. ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರು ಕೆಳ ಬೆನ್ನು ನೋವು ಮತ್ತು ಬಿಗಿತದಿಂದಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಫೆಬ್ರವರಿ 19 ರಿಂದ ಪಾಕಿಸ್ತಾನ ಮತ್ತು ಯುಎಇಯಲ್ಲಿ ಚಾಂಪಿಯನ್ಸ್ ಟ್ರೋಫಿ ಪ್ರಾರಂಭವಾಗಲಿದೆ.

ಚಾಂಪಿಯನ್ಸ್ ಟ್ರೋಫಿ ತಂಡದಿಂದ ಮಿಚೆಲ್ ಮಾರ್ಷ್ ಹೊರಗುಳಿದಿರುವ ಬಗ್ಗೆ ಶುಕ್ರವಾರ ಕ್ರಿಕೆಟ್ ಆಸ್ಟ್ರೇಲಿಯಾ ಮಾಹಿತಿ ಹಂಚಿಕೊಂಡಿದೆ. ರಾಷ್ಟ್ರೀಯ ಆಯ್ಕೆ ಸಮಿತಿ ಮತ್ತು ಆಸ್ಟ್ರೇಲಿಯಾದ ಪುರುಷರ ವೈದ್ಯಕೀಯ ತಂಡವು ಮಿಚೆಲ್ ಮಾರ್ಷ್ ಅವರನ್ನು ಗಾಯದ ಕಾರಣದಿಂದಾಗಿ ಟೂರ್ನಿಯಿಂದ ಹೊರಗಿಟ್ಟಿದೆ.ಮಾರ್ಷ್ ಇನ್ನೂ ಸಂಪೂರ್ಣವಾಗಿ ಪುನರ್ವಸತಿ ಪಡೆದಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ.

Champions Trophy 2025 Mitchell Marsh out of Australia squad

ಇತ್ತೀಚಿನ ವಾರಗಳಲ್ಲಿ ಮಿಚೆಲ್ ಮಾರ್ಷ್ ಅವರ ಕೆಳ ಬೆನ್ನು ನೋವು ಹೆಚ್ಚಾಗಿದೆ. ಈ ಕಾರಣದಿಂದಾಗಿ ಮಾರ್ಷ್‌ನ ಪುನರ್ವಸತಿ ಅವಧಿಯನ್ನು ವಿಸ್ತರಿಸಲು ರಾಷ್ಟ್ರೀಯ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.

ಚಾಂಪಿಯನ್ಸ್ ಟ್ರೋಫಿಗಾಗಿ 15 ಜನರ ತಂಡದಲ್ಲಿ ಆಯ್ಕೆಯಾದ ಮಾರ್ಷ್‌ಗೆ ಬದಲಿ ಆಟಗಾರನನ್ನು ಹುಡುಕಲು ರಾಷ್ಟ್ರೀಯ ಆಯ್ಕೆ ಸಮಿತಿಯು ಶೀಘ್ರದಲ್ಲೇ ಕಾರ್ಯ ಕೈಗೊಳ್ಳವುದು ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ. ಆಲ್‌ರೌಂಡರ್‌ಗಳಾದ ಆರನ್ ಹಾರ್ಡಿ, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಈ ಮೂವರಲ್ಲಿ ಒಬ್ಬರು ಮಾರ್ಷ್ ಸ್ಥಾನಕ್ಕೆ ಆಯ್ಕೆಯಾಗಲಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೆ ಪ್ರಕಟಿಸಿರುವ ತಂಡಗಳಲ್ಲಿ ಬದಲಾವಣೆಗಳನ್ನು ಮಾಡಲು ಐಸಿಸಿ ಫೆಬ್ರವರಿ 12 ಅಂತಿಮ ದಿನ ಎಂದು ಐಸಿಸಿ ಗಡುವು ನೀಡಿದೆ.

ಮುಂದಿನ ನಾಯಕ ಯಾರು?

ಆಸ್ಟ್ರೇಲಿಯಾದ ನಿಯಮಿತ ನಾಯಕ ಪ್ಯಾಟ್ ಕಮ್ಮಿನ್ಸ್ ಪಾದದ ಗಾಯದಿಂದಾಗಿ ಏಕದಿನ ಮತ್ತು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಮಾರ್ಷ್ ಅವರನ್ನು ಚಾಂಪಿಯನ್ಸ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕನಾಗಿ ನಿರೀಕ್ಷಿಸಲಾಗಿತ್ತು. ಇದೀಗ ಐಸಿಸಿ ಮೆಗಾ ಟೂರ್ನಿಯಲ್ಲಿ ಕಮ್ಮಿನ್ಸ್ ಭಾಗವಹಿಸುವ ಬಗ್ಗೆ ಅನಿಶ್ಚಿತತೆ ಇರುವುದರಿಂದ, ಪ್ರಸ್ತುತ ಟೆಸ್ಟ್ ತಂಡವನ್ನು ಮುನ್ನಡೆಸುತ್ತಿರುವ ಸ್ಟೀವ್ ಸ್ಮಿತ್ ಏಕದಿನ ತಂಡದ ನಾಯಕನಾಗಿ ಅಧಿಕಾರ ವಹಿಸಿಕೊಳ್ಳಬಹುದು.

ಆಸ್ಟ್ರೇಲಿಯಾ ತಂಡ ತನ್ನ ಚಾಂಪಿಯನ್ಸ್ ಟ್ರೋಫಿ 2025ರ ಅಭಿಯಾನವನ್ನು ಫೆಬ್ರವರಿ 22 ರಂದು ಲಾಹೋರ್‌ನ ಗಡಾಫಿ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದೊಂದಿಗೆ ಪ್ರಾರಂಭಿಸಲಿದೆ. ಆಸ್ಟ್ರೇಲಿಯಾ 2006 ಮತ್ತು 2009ರಲ್ಲಿ ಎರಡು ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ವಶಪಡಿಸಿಕೊಂಡಿದೆ.

ಆಸ್ಟ್ರೇಲಿಯಾ ತಂಡ

ಪ್ಯಾಟ್ ಕಮ್ಮಿನ್ಸ್ (ನಾಯಕ), ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಆರನ್ ಹಾರ್ಡಿ, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಎಸ್ ಸ್ಟಾರ್ಟೋನಿ , ಆಡಮ್ ಝಂಪಾ.

Story first published: Friday, January 31, 2025, 15:08 [IST]
Other articles published on Jan 31, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+