Champions Trophy 2025: ಪಾಕಿಸ್ತಾನಕ್ಕೆ ಟೀಮ್ ಇಂಡಿಯಾ ಬರಲಿದೆ; ಪಿಸಿಬಿ ಮುಖ್ಯಸ್ಥ
ಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಜಯ್ ಶಾ ಅವರನ್ನು ಬೆಂಬಲಿಸದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗ ಮೊದಲ ಬಾರಿಗೆ ಮೌನ ಮುರಿದಿದೆ. ಅಲ್ಲದೆ, ಮುಂಬರುವ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಗ್ಗೆ ಕೂಡ ಮಾಹಿತಿ ನೀಡಿದೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ, ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ನೇಮಕಗೊಂಡಿರುವ ಬಗ್ಗೆ ಪಾಕಿಸ್ತಾನ ಚಿಂತಿಸುವುದಿಲ್ಲ. ಶಾ ಈ ಹುದ್ದೆಗೆ ನೇಮಕಗೊಳ್ಳುವ ಬಗ್ಗೆ ಯಾವುದೇ ವಿರೋಧವಿಲ್ಲ. ನಾವು ಜಯ್ ಶಾ ಅವರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದಾರೆ.

ಬಿಗ್ ಅಪ್ಡೇಟ್
2024ರ ಡಿಸೆಂಬರ್ 1 ರಂದು ಐಸಿಸಿ ಅಧ್ಯಕ್ಷರಾಗಿ ತಮ್ಮ ಪಾತ್ರವನ್ನು ವಹಿಸಿಕೊಳ್ಳಲು ಜಯ್ ಶಾ ತಯಾರಿ ನಡೆಸುತ್ತಿದ್ದಾರೆ. ಇದೇ ವೇಳೆ ಮುಂದಿನ ವರ್ಷ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜನೆ ಮಾಡುವುದಲ್ಲೆ ಪಾಕಿಸ್ತಾನ ಸಜ್ಜಾಗುತ್ತಿದೆ. ಪಿಸಿಬಿ ಬಿಸಿಸಿಐ ಜತೆ ಹಾಗೂ ಟೂರ್ನಿಯಲ್ಲಿ ಭಾಗವಹಿಸುವ ತಂಡಗಳ ಮಂಡಳಿಗಳೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ. ಚಾಂಪಿಯನ್ಸ್ ಟ್ರೋಫಿ ಆಡಲು ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರಲಿದೆ ಎಂದು ನಖ್ವಿ ಖಚಿತಪಡಿಸಿದ್ದಾರೆ.
ಬಿಸಿಸಿಐ ಮೌನ?
ಚಾಂಪಿಯನ್ಸ್ ಟ್ರೋಫಿ ಟೂರ್ನಿಗಾಗಿ ಆಡಲು ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಬಿಸಿಸಿಐ ನೀಡಿಲ್ಲ. ಆದರೆ ಈ ಹಿಂದೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಭಾರತ ಸರ್ಕಾರ ಪಾಕಿಸ್ತಾನದಲ್ಲಿ ಆಡಲು ಅವಕಾಶ ನೀಡಿದಾಗ ಮಾತ್ರ ಟೀಮ್ ಇಂಡಿಯಾ ಹೋಗಲಿದೆ ಎಂದು ಹೇಳಿದ್ದರು.
ಇತ್ತೀಚೆಗೆ ಗೃಹ ಸಚಿವ ಅಮಿತ್ ಶಾ ಅವರು ಕೂಡ ಈ ವಿಚಾರವಾಗಿ ಮಾತನಾಡಿದ್ದರು. 'ಪಾಕಿಸ್ತಾನ ಇರುವವರೆಗೂ ಭಯೋತ್ಪಾದನೆಯನ್ನು ಉತ್ತೇಜಿಸುತ್ತಲೇ ಇರುತ್ತದೆ. ಅಲ್ಲಿಯವರೆಗೆ ಟೀಮ್ ಇಂಡಿಯಾ ಯಾವುದೇ ಸಂದರ್ಭದಲ್ಲೂ ಪಾಕಿಸ್ತಾನದಲ್ಲಿ ಆಡುವುದಿಲ್ಲ ಸ್ಪಷ್ಟ ಉತ್ತರ ಕೊಟ್ಟಿದ್ದರು.
2025ರ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿರುವ ಈ ಐಸಿಸಿ ಟೂರ್ನಮೆಂಟ್‌ಗಾಗಿ ಭಾರತವು ಪಾಕಿಸ್ತಾನಕ್ಕೆ ಹೋಗುತ್ತದೆಯೇ ಅಥವಾ ಇಲ್ಲವೇ ಎಂಬುದು ಈಗ ಅಭಿಮಾನಗಳಲ್ಲಿ ಕುತೂಹಲ ಮೂಡಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications