Champions Trophy 2025: ಎಲ್ಲಾ ಖರ್ಚುಗಳನ್ನು ಭರಿಸಲಿದ್ದೇವೆ; ಪಾಕಿಸ್ತಾನದ ಆಫರ್‌ಗೆ ಒಪ್ಕೋಳ್ಳುತ್ತಾ ಟೀಮ್ ಇಂಡಿಯಾ?
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಆತಿಥ್ಯವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಲಾಗಿದೆ. ಮುಂದಿನ ವರ್ಷ ನಡೆಯಲಿರುವ ಈ ಟೂರ್ನಿಯ ತಯಾರಿಯಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಿರತವಾಗಿದೆ.
ಒಂದೆಡೆ ಈ ಟೂರ್ನಿಯನ್ನು ಆಯೋಜಿಸಲು ಪಿಸಿಬಿ ಸಿದ್ಧವಾಗಿದ್ದರೆ, ಮತ್ತೊಂದೆಡೆ ಭಾರತ ಪಾಕಿಸ್ತಾನಕ್ಕೆ ಹೋಗುವ ವಿಚಾರ ಇನ್ನೂ ಬಗೆಹರಿದಿಲ್ಲ. ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ಹೋಗಲಿದೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಆದರೆ, ಟೀಮ್ ಇಂಡಿಯಾ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಭಾರತ ತಂಡ ಪಾಕಿಸ್ತಾನಕ್ಕೆ ಕಳುಹಿಸಲು ಬಿಸಿಸಿಐಗೆ ಪಿಸಿಬಿ ವಿಶೇಷ ಆಫರ್ ನೀಡಿದೆ.

ಪಿಸಿಬಿ ಆಫರ್
ಮೂಲಗಳ ಪ್ರಕಾರ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಪಿಸಿಬಿ ಬಿಸಿಸಿಐಗೆ ಪತ್ರ ಬರೆದಿದೆ. ಭದ್ರತಾ ಕಾರಣಗಳಿಂದಾಗಿ ಭಾರತವು ಪಾಕಿಸ್ತಾನದಲ್ಲಿ ಉಳಿಯಲು ಬಯಸದಿದ್ದರೆ, ಪಂದ್ಯಗಳ ನಡುವೆ ಚಂಡೀಗಢ ಅಥವಾ ನವದೆಹಲಿಗೆ ಮರಳಲು ಪಿಸಿಬಿ ಪತ್ರದಲ್ಲಿ ಪ್ರಸ್ತಾಪ ಮಾಡಿದೆ. ಇತ್ತೀಚೆಗಷ್ಟೇ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಪಾಕಿಸ್ತಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ. ಇತಂಹ ಸಂದರ್ಭದಲ್ಲಿ ಬಿಸಿಸಿಐ ಮನವೊಲಿಸಲು ಪಿಸಿಬಿ ಮುಂದಾಗಿದೆ.
ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ಆಯೋಜಿಸಲು ಪಿಸಿಬಿ ನಿರ್ಧರಿಸಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಮೂರು ಗುಂಪು-ಹಂತದ ಪಂದ್ಯಗಳನ್ನು ಆಡಲಿದೆ. 2025ರ
ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ಟೀಮ್ ಇಂಡಿಯಾ ತನ್ನ ಅಭಿಯಾನ ಆರಂಭಿಸಲಿದೆ. ಫೆಬ್ರವರಿ 23 ರಂದು ಹೈವೋಲ್ಟೇಕ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮಖಿಯಾಗಲಿವೆ. ಇದಾದ ಬಳಿಕ ಮಾರ್ಚ್ 2 ರಂದು ನ್ಯೂಜಿಲೆಂಡ್ ವಿರುದ್ಧ ಭಾರತ ತನ್ನ ಕೊನೆ ಗುಂಪು ಹಂತದ ಪಂದ್ಯವನ್ನು ಆಡಲಿದೆ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವುದು ಇನ್ನೂ ನಿರ್ಧಾರವಾಗಿಲ್ಲ.
ಉಭಯ ದೇಶಗಳ ನಡುವಿನ ರಾಜಕೀಯ ಸಂಬಂಧಗಳು ಹದಗೆಟ್ಟಿರುವ ಕಾರಣ ಭಾರತ ಕೇಂದ್ರ ಸರ್ಕಾರ 2008ರ ಜುಲೈ ತಿಂಗಳಿಂದ ಪಾಕಿಸ್ತಾನಕ್ಕೆ ತನ್ನ ತಂಡವನ್ನು ಕಳುಹಿಸಿಲ್ಲ. ಇದಾದ ಬಳಿಕ ಪಾಕಿಸ್ತಾನ ಮೂರು ಬಾರಿ ಭಾರತಕ್ಕೆ ಬಂದಿದೆ. 2012ರಲ್ಲಿ ಪಾಕಿಸ್ತಾನವು ಮೂರು ಪಂದ್ಯಗಳ ಟಿ20 ಸರಣಿ ಮತ್ತು ಮೂರು ಏಕದಿನ ಪಂದ್ಯಗಳನ್ನು ಆಡಲು ಭಾರತಕ್ಕೆ ಪ್ರವಾಸ ಕೈಗೊಂಡಿತ್ತು. ನಂತರ 2016ರಲ್ಲಿ ಪಾಕಿಸ್ತಾನ ತಂಡ ಟಿ20 ವಿಶ್ವಕಪ್ ಆಡಲು ಭಾರತಕ್ಕೆ ಬಂದಿತ್ತು.
2023ರಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿಯೂ ಪಾಕಿಸ್ತಾನ ತಂಡ ಭಾರತದಲ್ಲಿತ್ತು. ಆದರೆ, ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲಿದೆಯೇ ಎಂಬುದು ಕುತೂಹಲ ಮೂಡಿಸಿದೆ. ಪಾಕಿಸ್ತಾನಕ್ಕೆ ಭಾರತ ತಂಡವನ್ನು ಕಳುಹಿಸುವ ನಿರ್ಧಾರ ಕೇಂದ್ರ ಸರ್ಕಾರ ಮಾಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications