CT 2025: ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ವೇಳಾಪಟ್ಟಿ; ಭಾರತದ ಎದುರಾಳಿ ಆಸೀಸ್
ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಲೀಗ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ 44 ರನ್‌ಗಳಿಂದ ಸೋಲಿಸಿತು. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಸತತ ಮೂರನೇ ಜಯ ಸಾಧಿಸಿದೆ. ಚಾಂಪಿಯನ್ಸ್ ಟ್ರೋಫಿಯ ಪ್ರಸ್ತುತ ಆವೃತ್ತಿಯಲ್ಲಿ ಮೂರು ಪಂದ್ಯಗಳನ್ನು ಗೆದ್ದ ಏಕೈಕ ದೇಶ ಭಾರತ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಅಲ್ಲದೆ, ನ್ಯೂಜಿಲೆಂಡ್ ಮೊದಲ ಬಾರಿಗೆ ಸೋಲನ್ನು ಎದುರಿಸಬೇಕಾಯಿತು. ಎರಡೂ ತಂಡಗಳು ಈಗಾಗಲೇ ಸೆಮಿಫೈನಲ್ ತಲುಪಿದ್ದವು. ಈಗ ಚಾಂಪಿಯನ್ಸ್ ಟ್ರೋಫಿಯ ಅಂತಿಮ-4ರ ವೇಳಾಪಟ್ಟಿ ಹೀಗಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಈಗಾಗಲೇ ಎ ಗುಂಪಿನಿಂದ ಸೆಮಿಫೈನಲ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಆತಿಥೇಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಎ ಗುಂಪಿನಿಂದ ಹೊರಬಿದ್ದಿವೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳು ಬಿ ಗುಂಪಿನಿಂದ ಸೆಮಿಫೈನಲ್ ತಲುಪಿವೆ. ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ತಂಡಗಳು ಸೋತು ಹೊರಗುಳಿದಿವೆ.

ಸೆಮಿಫೈನಲ್ ಹೇಗೆ?
ಚಾಂಪಿಯನ್ಸ್ ಟ್ರೋಫಿಯ ನಿಯಮಗಳ ಪ್ರಕಾರ, ಎ ಗುಂಪಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡವು ಮೊದಲ ಸೆಮಿಫೈನಲ್‌ನಲ್ಲಿ ಬಿ ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ತಂಡವನ್ನು ಎದುರಿಸಲಿದೆ. ಎರಡನೇ ಸೆಮಿಫೈನಲ್‌ನಲ್ಲಿ ಎ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡವು ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲರುವ ತಂಡವನ್ನು ಎದುರಿಸಲಿದೆ.
ಭಾರತ 'ಎ' ಗುಂಪಿನಲ್ಲಿ 3 ಪಂದ್ಯಗಳಲ್ಲಿ 6 ಅಂಕಗಳನ್ನು ಗಳಿಸುವ ಮೂಲಕ ಮೊದಲ ಸ್ಥಾನದಲ್ಲಿದೆ. ಟೀಮ್ ಇಂಡಿಯಾದ ನಿವ್ವಳ ರನ್ ರೇಟ್ +0.715 ಆಗಿದೆ. ನ್ಯೂಜಿಲೆಂಡ್ 3 ಪಂದ್ಯಗಳಲ್ಲಿ 4 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಕಿವೀಸ್ ಪಡೆಯ ನಿವ್ವಳ ರನ್ ದರ +0.267 ಆಗಿದೆ. ಬಾಂಗ್ಲಾದೇಶ ಮತ್ತು ಆತಿಥೇಯ ಪಾಕಿಸ್ತಾನ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದ್ದು, ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನ ಪಡೆದಿವೆ.
ಬಿ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ 3 ಪಂದ್ಯಗಳಿಂದ 5 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದರೆ, ಆಸ್ಟ್ರೇಲಿಯಾ 3 ಪಂದ್ಯಗಳಿಂದ 4 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. 3 ಪಂದ್ಯಗಳಿಂದ 3 ಅಂಕಗಳೊಂದಿಗೆ ಅಫ್ಘಾನಿಸ್ತಾನ ಮೂರನೇ ಸ್ಥಾನ ಮತ್ತು ಇಂಗ್ಲೆಂಡ್ ನಾಲ್ಕನೇ ಸ್ಥಾನ ಗಳಿಸಿದೆ. ಚಾಂಪಿಯನ್ಸ್ ಟ್ರೋಫಯಲ್ಲಿ ಇಂಗ್ಲೆಂಡ್ ತಂಡ ಗೆಲುವಿನ ಖಾತೆ ತೆರೆಯಲಿಲ್ಲ.
ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದರಿಂದಾಗಿ ಎರಡೂ ತಂಡಗಳು ತಲಾ 1 ಅಂಕಗಳನ್ನು ಪಡೆದಿದ್ದವು. ಅಫ್ಘಾನಿಸ್ತಾನ ಮತ್ತು ಆಸ್ಟ್ರೇಲಿಯಾ ಪಂದ್ಯದಲ್ಲೂ ಇದೇ ಘಟನೆ ನಡೆಯಿತು. ಮಳೆಯಿಂದಾಗಿ ಪಂದ್ಯ ರದ್ದಾಗಿದಾಗ, ಎರಡೂ ತಂಡಗಳ ಖಾತೆಗೆ ತಲಾ 1 ಅಂಕ ಸೇರ್ಪಡೆಯಾಯಿತು. ಅಂತಿಮವಾಗಿ ಬಿ ಗುಂಪಿನಿಂದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳ ಸೆಮಿಫೈನಲ್ ತಲುಪಿದ್ದವು.
ವೇಳಾಪಟ್ಟಿ
ಮೊದಲ ಸೆಮಿಫೈನಲ್ ಪಂದ್ಯ: ಭಾರತ vs ಆಸ್ಟ್ರೇಲಿಯಾ- ಮಾರ್ಚ್ 4, ಮಧ್ಯಾಹ್ನ 2:30 ಗಂಟೆ, ದುಬೈ ,
ಎರಡನೇ ಸೆಮಿಫೈನಲ್ ಪಂದ್ಯ: ನ್ಯೂಜಿಲೆಂಡ್ vs ದಕ್ಷಿಣ ಆಫ್ರಿಕಾ- ಮಾರ್ಚ್ 5, ಮಧ್ಯಾಹ್ನ 2:30 ಗಂಟೆ, ಲಾಹೋರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications