Champions Trophy 2025: ಇಂಗ್ಲೆಂಡ್ ನಂತರ ಅಫ್ಘಾನಿಸ್ತಾನ ವಿರುದ್ಧ ಆಡಲು ದಕ್ಷಿಣ ಆಫ್ರಿಕಾ ಹಿಂದೇಟು
ಮೊದಲ ಬಾರಿಗೆ ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯಲ್ಲಿ ಆಡಲು ಸಜ್ಜಾಗುತ್ತಿದೆ. ಅಫ್ಘಾನಿಸ್ತಾನ ತಂಡದ ವಿರುದ್ಧದ ಪಂದ್ಯಗಳನ್ನು ಬಹಿಷ್ಕರಿಸುವ ಕೂಗುಗಳು ಕೇಳಿಬರುತ್ತಿವೆ. ಅಫ್ಘಾನಿಸ್ತಾನ ವಿರುದ್ಧದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ಬಹಿಷ್ಕರಿಸುವಂತೆ ದಕ್ಷಿಣ ಆಫ್ರಿಕಾದ ಕ್ರೀಡಾ ಸಚಿವ ಗೇಟನ್ ಮೆಕೆಂಜಿ ತಮ್ಮ ತಂಡವನ್ನು ಒತ್ತಾಯಿಸಿದ್ದಾರೆ. ಇತ್ತೀಚೆಗೆ ಅಫ್ಘಾನಿಸ್ತಾನ ವಿರುದ್ಧ ಆಡದಂತೆ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೂ ಅಲ್ಲಿನ ರಾಜಕೀಯ ನಾಯಕರು ಸೂಚಿಸಿದ್ದಾರೆ. ಇದರೊಂದಿಗೆ ವಿಶ್ವ ಕ್ರಿಕೆಟ್‌ನಲ್ಲಿ ಅಫ್ಘಾನಿಸ್ತಾನ ತಂಡಕ್ಕೆ ಹಿನ್ನಡೆಯಾಗಿದೆ.
ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರವು ಮಹಿಳಾ ಕ್ರೀಡೆಗಳನ್ನು ನಿಷೇಧಿಸಿದೆ. ಇದು ಕ್ರೀಡೆಯಲ್ಲಿ ಸಮಾನತೆಯ ಐಸಿಸಿ ತತ್ವಕ್ಕೆ ವಿರುದ್ಧವಾಗಿದೆ. ಹೀಗಾಗಿ ಗೇಟನ್ ಮೆಕೆಂಜಿ ತಮ್ಮ ತಂಡಕ್ಕೆ ಅಫ್ಘಾನಿಸ್ತಾನ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವಂತೆ ಕರೆ ನೀಡಿದ್ದಾರೆ.

ಗೇಟನ್ ಮೆಕೆಂಜಿ ಹೇಳಿದ್ದೇನು?
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಕ್ರೀಡೆಯಲ್ಲಿ ಸಮಾನತೆಯ ತತ್ವವನ್ನು ಒಪ್ಪಿಕೊಂಡಿದೆ. ಐಸಿಸಿಯ ಸದಸ್ಯ ರಾಷ್ಟ್ರಗಳು ಪುರುಷ ಮತ್ತು ಮಹಿಳಾ ಆಟಗಾರರನ್ನು ಅಭಿವೃದ್ಧಿಪಡಿಸಬೇಕು. ಆದರೆ ಅಫ್ಘಾನಿಸ್ತಾನದ ವಿಷಯದಲ್ಲಿ ಇದು ಅಲ್ಲ. ಇದು ಕ್ರೀಡೆಯ ಆಡಳಿತದಲ್ಲಿ ರಾಜಕೀಯ ಹಸ್ತಕ್ಷೇಪವನ್ನು ಸಹಿಸುತ್ತಿದೆ ಎಂಬುದನ್ನು ತೋರಿಸುತ್ತದೆ. ಅಫ್ಘಾನಿಸ್ತಾನ ವಿರುದ್ಧದ ಕ್ರಿಕೆಟ್ ಪಂದ್ಯಗಳನ್ನು ದಕ್ಷಿಣ ಆಫ್ರಿಕಾ ಗೌರವಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಕ್ರೀಡಾ ಸಚಿವನಾಗಿ ನಾನು ಅಂತಿಮ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಗೇಟನ್ ಮೆಕೆಂಜಿ ಹೇಳಿದ್ದಾರೆ.
ಫೆಬ್ರವರಿ 21 ರಂದು ಪಾಕಿಸ್ತಾನದ ಕರಾಚಿಯಲ್ಲಿ ಅಫ್ಘಾನಿಸ್ತಾನದ ವಿರುದ್ಧ ಗ್ರೂಪ್ ಬಿ ಪಂದ್ಯದೊಂದಿಗೆ ದಕ್ಷಿಣ ಆಫ್ರಿಕಾ ತನ್ನ ಚಾಂಪಿಯನ್ಸ್ ಟ್ರೋಫಿ 2025ರ ಅಭಿಯಾನವನ್ನು ಪ್ರಾರಂಭಿಸಲಿದೆ. ಉಭಯ ತಂಡಗಳು ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದೊಂದಿಗೆ ಬಿ ಗುಂಪಿನಲ್ಲಿವೆ. ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳಿವೆ.
ಅಫ್ಘಾನಿಸ್ತಾನದಲ್ಲಿ ಮಹಿಳೆಯರ ಹಕ್ಕುಗಳ ಮೇಲಿನ ತಾಲಿಬಾನ್ ಆಡಳಿತ ದೌರ್ಜನ್ಯವೆಸಗುತ್ತಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ 160ಕ್ಕೂ ಹೆಚ್ಚು ಬ್ರಿಟಿಷ್ ರಾಜಕೀಯ ನಾಯಕರು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಗೆ (ಇಸಿಬಿ) ಪತ್ರ ಬರೆಯುವ ಮೂಲಕ ಅಫ್ಘಾನಿಸ್ತಾನ ವಿರುದ್ಧ ಆಡದಂತೆ ಮನವಿ ಮಾಡಿದ್ದಾರೆ. ಆದರೆ, ಇಸಿಬಿ ಅಧ್ಯಕ್ಷರು ಈ ಮನವಿಯನ್ನು ತಿರಸ್ಕರಿಸಿದ್ದಾರೆ. ಆದರೆ ಯುಕೆ ಪ್ರಧಾನಿ ಐಸಿಸಿ ತನ್ನ ನಿಯಮಗಳನ್ನು ಅನುಸರಿಸುವಂತೆ ಅಫ್ಘಾನಿಸ್ತಾನ ತಂಡಕ್ಕೆ ಕರೆ ನೀಡಿದ್ದಾರೆ.
ಮೊದಲ ಬಾರಿಗೆ ಅಫ್ಘಾನಿಸ್ತಾನವು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಪಾಕಿಸ್ತಾನ ಮತ್ತು ದುಬೈನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಎಂಟು ತಂಡಗಳ ಪಂದ್ಯಾವಳಿಯಲ್ಲಿ ಆಡಲಿದೆ. 8 ತಂಡಗಳ ಈ ಟೂರ್ನಿಯಲ್ಲಿ 15 ಪಂದ್ಯಗಳು ನಡೆಯಲಿದ್ದು, ಪಾಕಿಸ್ತಾನ ಮತ್ತು ದುಬೈನಲ್ಲಿ ಈ ಟೂರ್ನಿ ನಡೆಯಲಿದೆ. ಪಾಕಿಸ್ತಾನದ ರಾವಲ್ಪಿಂಡಿ, ಲಾಹೋರ್ ಮತ್ತು ಕರಾಚಿ ಮೂರು ಸ್ಥಳಗಳಲ್ಲಿ ಪಂದ್ಯಾವಳಿಯ ಪಂದ್ಯಗಳು ನಡೆಯಲಿವೆ. ಭಾರತ ತಂಡ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications