IND vs NZ: ನ್ಯೂಜಿಲೆಂಡ್ ವಿರುದ್ಧ ಹೇಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್?
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಚಾಂಪಿಯನ್ಸ್ ಟ್ರೋಫಿಯ "ಎ" ಗುಂಪಿನ ಪಂದ್ಯ ಭಾನುವಾರ ದುಬೈ ಅಂಗಳದಲ್ಲಿ ನಡೆಯಲಿದೆ. ಈಗಾಗಲೆ ಉಭಯ ತಂಡಗಳು ತಾವಡಿದ ಎರಡೂ ಪಂದ್ಯಗಳನ್ನು ಗೆದ್ದಿದ್ದರಿಂದ ಕುತೂಹಲ ಮನೆ ಮಾಡಿದೆ. ಟೀಮ್ ಇಂಡಿಯಾ ತನ್ನ ಅಜೇಯ ಓಟವನ್ನು ಮುಂದುವರೆಸುವ ಯೋಜನೆಯನ್ನು ಹಾಕಿಕೊಂಡಿದೆ. ಅಲ್ಲದೆ "ಎ" ಗುಂಪಿನಲ್ಲಿ ಅಗ್ರ ಸ್ಥಾನೀಯವಾಗಿ ಸೆಮಿಫೈನಲ್ ಪ್ರವೇಶಿಸುವ ಕನಸು ಕಾಣುತ್ತಿದೆ.
ದುಬೈನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡುತ್ತಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಜಯ ಸಾಧಿಸಿರುವ ಭಾರತ, ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕ್ ತಂಡವನ್ನು ಮಣಿಸಿ ಅಬ್ಬರಿಸಿದೆ. ಈಗ ಲೀಗ್ ಹಂತದ ಮೂರನೇ ಪಂದ್ಯಕ್ಕಾಗಿ ಸನ್ನದ್ಧವಾಗುತ್ತಿದೆ.

ಟಾಪ್ ಆರ್ಡರ್‌ನಲ್ಲಿ ಇಲ್ಲ ಬದಲಾವಣೆ
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿರುವ ರೋಹಿತ್ ಶರ್ಮಾ, ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಇವರು ಫಿಟ್ ಆಗಿದ್ದರೆ, ಇವರು ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುತ್ತಾರೆ. ಇನ್ನು ಭರ್ಜರಿ ಫಾರ್ಮ್‌ನಲ್ಲಿರುವ ಶುಭಮನ್ ಗಿಲ್ ಅವರನ್ನು ತಂಡದಿಂದ ಹೊರ ಗಿಡುವ ಯಾವುದೇ ಸೂಚನೆ ಇಲ್ಲ. ಇವರ ಫಾರ್ಮ್ ಹೀಗೆ ಮುಂದುವರೆಯಲಿ ಎಂದು ಮ್ಯಾನೇಜ್ಮೆಂಟ್ ಸಹ ಬಯಸುತ್ತಿದೆ.
ಪಾಕ್ ವಿರುದ್ಧ ಪಂದ್ಯದಲ್ಲಿ ಶತಕ ಬಾರಿಸಿರುವ ವಿರಾಟ್ ಕೊಹ್ಲಿ ಆತ್ಮವಿಶ್ವಾಸದಿಂದ ಅಂಗಳಕ್ಕೆ ಇಳಿಯಲಿದ್ದಾರೆ. ಇನ್ನು ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಫಿಕ್ಸ್. ಇನ್ಜು ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಅವರನ್ನು ಸಹ ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ನೋಡಬಹುದಾಗಿದೆ.
ಜಡೇಜಾಗೆ ವಿಶ್ರಾಂತಿ
ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಿ, ವಾಷಿಂಗ್ಟನ್ ಸುಂದರ್ ಅವರಿಗೆ ಅವಕಾಶ ನೀಡಿದರೆ ಅಚ್ಚರಿಯಿಲ್ಲ. ಇದರಿಂದಾಗಿ ಟೀಮ್ ಇಂಡಿಯಾದ ಆಟಗಾರರು ಗಾಯಕ್ಕೆ ತುತ್ತಾದರೆ ಅವರ ಬದಲಿಗೆ ಆಡಬಲ್ಲ ಆಟಗಾರರನ್ನು ರೆಡಿ ಮಾಡಿದ ಹಾಗೆ ಆಗುತ್ತದೆ.

ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸಿಕ್ಕ ಅವಕಾಶವನ್ನು ಬಳಿಸಿಕೊಂಡು ಎದುರಾಳಿ ಬ್ಯಾಟರ್‌ಗಳಿಗೆ ಕಾಟ ನೀಡಿರುವ ಕುಲ್‌ದೀಪ್ ಯಾದವ್ ಬದಲಿಗೆ ವರುಣ್ ಚಕ್ರವರ್ತಿ ಅವರಿಗೂ ಸ್ಥಾನ ನೀಡಬಹುದು. ಇದರಿಂದ ಕುಲ್‌ದೀಪ್ ಯಾದವ್‌ಗೆ ಕೊಂಚ ರೆಸ್ಟ್ ಸಿಕ್ಕ ಹಾಗೆ ಆಗುತ್ತದೆ. ಇನ್ನು ನ್ಯೂಜಿಲೆಂಡ್ ವಿರುದ್ಧ ಪಂದ್ಯದಲ್ಲಿ ಹರ್ಷಿತ್ ರಾಣಾ ಆಡುವುದು ಫಿಕ್ಸ್ ಎಂದು ಹೇಳಲಾಗುತ್ತಿದೆ.
ಅರ್ಷದೀಪ್‌ಗೆ ಅವಕಾಶ
ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಸ್ಥಾನ ಪಡೆದು ಬೆಂಚ್ ಕಾಯುತ್ತಿರುವ ಅರ್ಷದೀಪ್ ರಾಣಾ ಅವರಿಗೆ ಮೂರನೇ ಪಂದ್ಯದಲ್ಲಿ ಆಡುವ ಅವಕಾಶ ನೀಡುವ ಸಾಧ್ಯತೆ ಇದೆ. ಈ ವೇಳೆ ಇವರು ವೇಗಿ ಮೊಹಮ್ಮದ್ ಶಮಿ ಅವರಿಗೆ ರಿಪ್ಲೇಸ್ ಮಾಡಬಹುದು. ಶಮಿ ಅವರಿಗೆ ಒಂದು ಪಂದ್ಯದಲ್ಲಿ ವಿಶ್ರಾಂತಿಯ ಅವಶ್ಯಕತೆ ಇದ್ದರೆ, ಅವರಿಗೆ ನೀಡಿ ಅರ್ಷದೀಪ್‌ಗೆ ಅವಕಾಶ ನೀಡಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications