For Quick Alerts
ALLOW NOTIFICATIONS  
For Daily Alerts
 

Champions Trophy 2025: ಭಾರತ ತಂಡದಲ್ಲಿ ಈ 4 ಆಟಗಾರರು ಸ್ಥಾನ ಪಡೆಯುವುದು ಅನುಮಾನ!

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯನ್ನು ಪಾಕಿಸ್ತಾನವು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಆಯೋಜಿಸಲಿದೆ. ಈ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಇನ್ನಷ್ಟೇ ಪ್ರಕಟಿಸಬೇಕಿದೆ. ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಜನವರಿ 18 ರಿಂದ 19 ರವರೆಗೆ ಪ್ರಕಟಿಸುವ ನಿರೀಕ್ಷೆಯಿದೆ. ಇದಕ್ಕೂ ಮುನ್ನ ಚಾಂಪಿಯನ್ಸ್ ಟ್ರೋಫಿ ಭಾರತ ತಂಡದಿಂದ ಹೊರಗುಳಿಯಬಹುದಾದ 4 ಆಟಗಾರರು ಯಾರಿರಬಹುದು ಎಂಬುದರ ಬಗ್ಗೆ ಇಲ್ಲಿದೆ ಮಾಹಿದಿ.

ಚಾಂಪಿಯನ್ಸ್ ಟ್ರೋಫಿ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಆಟಗಾರರ ನಡುವೆ ಪೈಪೋಟಿ ನಡೆಯುತ್ತಿವೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಗೂ ಬಲಿಷ್ಠ ಟೀಮ್ ಇಂಡಿಯಾವನ್ನು ಕಟ್ಟುವುದು ಸವಾಲಾಗಿದೆ. ಇಂತಹ ಸಂದರ್ಭದಲ್ಲಿ ಭಾರತ ತಂಡದಿಂದ ನಾಲ್ವರು ಸ್ಟಾರ್ ಆಟಗಾರರು ಹೊರಗುಳಿಯಬಹುದು.

Champions Trophy 2025 These 4 players are doubtful to make it to Team India

ರವಿ ಬಿಷ್ಣೋಯ್: ಭಾರತ ತಂಡದ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಅವರನ್ನು ಚಾಂಪಿಯನ್ಸ್ ಟ್ರೋಫಿ 2025 ತಂಡದಿಂದ ಕೈಬಿಡಬಹುದು. ಟೀಮ್ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಇಂತಹ ಪರಿಸ್ಥಿತಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಕನಿಷ್ಠ ಮೂವರು ಸ್ಪಿನ್ನರ್‌ಗಳನ್ನು ತಂಡದಲ್ಲಿ ಸೇರಿಸಿಕೊಳ್ಳಬಹುದು. ಇದರಲ್ಲಿ ಮೊದಲ ಆಯ್ಕೆ ಸ್ಪಿನ್ನರ್‌ಗಳು ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಸಿಂಗ್ ಮತ್ತು ವರುಣ್ ಚಕ್ರವರ್ತಿ. ಇಂತಹ ಪರಿಸ್ಥಿತಿಯಲ್ಲಿ ಬಿಷ್ಣೋಯ್ ತಂಡದಿಂದ ಹೊರಗುಳಿಯಬಹುದು. ಅವರು ಭಾರತ ಪಪ 1 ಏಕದಿನ ಪಂದ್ಯ ಆಡಿದ್ದು, ಕೇವಲ 1 ವಿಕೆಟ್ ಪಡೆದಿದ್ದಾರೆ. ಹೀಗಾಗಿ ಅನುಭವದ ಕೊರತೆಯೇ ಅವರನ್ನು ಹೊರಗಿಡಬಹುದು.

ಹರ್ಷಿತ್ ರಾಣಾ: ಟೀಮ್ ಇಂಡಿಯಾದ ಯುವ ವೇಗದ ಬೌಲರ್ ಹರ್ಷಿತ್ ರಾಣಾ ಅವರು ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಉತ್ತಮ ರೀತಿಯಲ್ಲಿ ಪ್ರಾರಂಭಿಸಿದ್ದಾರೆ. ಆದರೆ, ಅವರಿಗೆ ಚಾಂಪಿಯನ್ಸ್ ಟ್ರೋಫಿ ಭಾರತ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ. ದುಬೈ ಪಿಚ್ ಸಹಜವಾಗಿ ಸ್ಪಿನ್ನರ್‌ಗಳಿಗೆ ನೆರವಾಗಲಿದೆ. ಹೀಗಾಗಿ ಗರಿಷ್ಠ 4 ವೇಗದ ಬೌಲರ್‌ಗಳಿಗೆ ತಂಡದಲ್ಲಿ ಅವಕಾಶ ನೀಡಬಹುದು. ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆದಾರರು ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್ ಅವರಿಗೆ ಅವಕಾಶ ನೀಡಬಹುದು.

ಸಂಜು ಸ್ಯಾಮ್ಸನ್: ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್‌ನಲ್ಲಿ ಸತತ ಎರಡು ಶತಕ ಸಿಡಿಸಿರುವ ಸಂಜು ಸ್ಯಾಮ್ಸನ್ ಚಾಂಪಿಯನ್ಸ್ ಟ್ರೋಫಿಯ 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಅನುಮಾನವಾಗಿದೆ. ಇಬ್ಬರು ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್‌ಗಳಿಗೆ ತಂಡದಲ್ಲಿ ಸ್ಥಾನ ನೀಡಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ರಿಷಬ್ ಪಂತ್ ಆಯ್ಕೆಗಾರರ ​​ಮೊದಲ ಆಯ್ಕೆಯಾಗಿದ್ದು, ಬಿಸಿಸಿಐ ಆಯ್ಕೆ ಸಮಿತಿ ಕೆಎಲ್ ರಾಹುಲ್ ಬಗ್ಗೆಯೂ ಯೋಚಿಸಲಿದೆ. ಏಕೆಂದರೆ ವಿಕೆಟ್ ಕೀಪರ್-ಬ್ಯಾಟರ್ ಆಗಿ ರಾಹುಲ್ ಟೀನ್ ಇಂಡಿಯಾ ಪರ ಹಲವು ಪ್ರಮುಖ ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ.

ಸೂರ್ಯಕುಮಾರ್ ಯಾದವ್: ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಚಾಂಪಿಯನ್ಸ್ ಟ್ರೋಫಿ 2025 ತಂಡದಿಂದ ಹೊರಗುಳಿಯಬಹುದು. ಟಿ20ಗೆ ಹೋಲಿಸಿದರೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಸೂರ್ಯ ಪ್ರದರ್ಶನ ಉತ್ತಮವಾಗಿಲ್ಲ. ಇದರೊಂದಿಗೆ ಕೆಎಲ್ ರಾಹುಲ್ ಅವರ ಜೊತೆಗೆ ಸೂರ್ಯ ಪೈಪೋಟಿ ನಡೆಸಬೇಕಾಗಿದೆ. ಹೀಗಿರುವಾಗ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಪರ ಉತ್ತಮ ಪ್ರದರ್ಶನ ನೀಡಿರುವ ರಾಹುಲ್‌ಗೆ ಆಯ್ಕೆಗಾರರು ಹಾಗೂ ಬಿಸಿಸಿಐ ಆದ್ಯತೆ ನೀಡಲಿದೆ.

Story first published: Tuesday, January 14, 2025, 20:48 [IST]
Other articles published on Jan 14, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+