Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯದ ಟಿಕೆಟ್‌ಗಳು ಒಂದು ಗಂಟೆಯೊಳಗೆ ಸೋಲ್ಡ್ ಔಟ್!

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವು ದುಬೈನಲ್ಲಿ ಫೆಬ್ರವರಿ 23 ರಂದು ನಡೆಯಲಿದೆ. ಕ್ರಿಕೆಟ್ ಅಭಿಮಾನಿಗಳು ಈ ರೋಚಕ ಪಂದ್ಯವನ್ನು ಕ್ರೀಡಾಂಗಣದಲ್ಲಿ ನೋಡಿ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನಿಲ್ಸ್ (ಐಸಿಸಿ)ಯಿಂದ ಫೆಬ್ರವರಿ 3 ರಂದು ಟಿಕೆಟ್ ಮಾರಾಟದ ಘೋಷಣೆ ಮಾಡಿದೆ. ಇದಾದ ನಂತರ ಕ್ರಿಕೆಟ್ ಅಭಿಮಾನಿಗಳು ಟಿಕೆಟ್ ಖರೀದಿಸಲು ಮುಗಿಬಿದ್ದಾರೆ.

ವರದಿಗಳ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದ ಟಿಕೆಟ್‌ಗಳು ಒಂದು ಗಂಟೆಯೊಳಗೆ ಮಾರಾಟವಾಗಿವೆ. ಸುಮಾರು 1.5 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದರು.

Champions Trophy 2025 Tickets for India-Pakistan high-voltage match sell out within an hour

ಭಾರತ ಮತ್ತು ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯ ಪಂದ್ಯದ ಟಿಕೆಟ್‌ಗಳು ಪೋರ್ಟಲ್‌ನಲ್ಲಿ ಲಭ್ಯವಾದ ಒಂದು ಗಂಟೆಯೊಳಗೆ ಮಾರಾಟವಾಗಿವೆ. 1.5 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಟಿಕೆಟ್‌ಗಾಗಿ ಸರದಿಯಲ್ಲಿ ನಿಂತಿದ್ದು, ಟಿಕೆಟ್‌ಗಾಗಿ ಕಾಯುವ ಸಮಯ ಒಂದು ಗಂಟೆ ಮೀರಿದೆ ಬಗ್ಗೆ ವರದಿಗಳಾಗಿವೆ.

ಪಾಕಿಸ್ತಾನದ ಆತಿಥ್ಯದಲ್ಲಿ ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಫೆಬ್ರವರಿ 19 ರಿಂದ ಪ್ರಾರಂಭವಾಗಲಿದೆ. ಮಾರ್ಚ್ 9 ರಂದು ನಡೆಯಲಿರುವ ಫೈನಲ್ ಪಂದ್ಯದೊಂದಿಗೆ ಈ ಟೂರ್ನಿ ಮುಕ್ತಾಯವಾಗಲಿದೆ. ಹೈಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 9ನೇ ಆವೃತ್ತಿ ಇದಾಗಿದೆ. ಇದಕ್ಕೂ ಮುನ್ನ ಚಾಂಪಿಯನ್ಸ್ ಟ್ರೋಫಿಯ 8 ಆವೃತ್ತಿಗಳನ್ನು ಆಡಲಾಗಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನ ಹಾಲಿ ಚಾಂಪಿಯನ್ ಆಗಿದೆ. ಕೊನೆಯ ಬಾರಿಗೆ 2017ರಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆದಿದ್ದು, ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು ಸೋಲಿಸಿ ಪಾಕಿಸ್ತಾನ ಪ್ರಶಸ್ತಿ ಗೆದ್ದುಕೊಂಡಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 50 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 338 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಟೀಮ್ ಇಂಡಿಯಾ 30.3 ಓವರ್‌ಗಳಲ್ಲಿ 158 ರನ್‌ಗಳಿಗೆ ಆಲೌಟ್ ಆಯಿತು.

ಭಾರತದ ವೇಳಾಪಟ್ಟಿ

ಫೆಬ್ರವರಿ 20 - ಭಾರತ vs ಬಾಂಗ್ಲಾದೇಶ, ಮಧ್ಯಾಹ್ನ 1:00 ಗಂಟೆ (ಭಾರತೀಯ ಕಾಲಮಾನ 2:30 ಗಂಟೆ)
ಫೆಬ್ರವರಿ 23 - ಭಾರತ vs ಪಾಕಿಸ್ತಾನ, ಮಧ್ಯಾಹ್ನ 1:00 ಗಂಟೆ
ಮಾರ್ಚ್ 2- ಭಾರತ vs ನ್ಯೂಜಿಲೆಂಡ್, ಮಧ್ಯಾಹ್ನ 1:00 ಗಂಟೆ

Story first published: Monday, February 3, 2025, 23:21 [IST]
Other articles published on Feb 3, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+