ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. ಶನಿವಾರ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಂಡವನ್ನು ಪ್ರಟಿಸಲಾಗಿದೆ. ರೋಹಿತ್ ಶರ್ಮಾ ಮತ್ತು ಉಪನಾಯಕ ಶುಭಮನ್ ಗಿಲ್ ನೇತೃತ್ವದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾ ರೆಡಿಯಾಗಿದೆ. ಈ ತಂಡದಲ್ಲಿ ಇನ್ನೂ ಏಕದಿನ ಅಂತಾರಾಷ್ಟ್ರೀಯ ಪಂದ್ಯಕ್ಕೆ ಪಾದಾರ್ಪಣೆ ಮಾಡದ ಯಶಸ್ವಿ ಜೈಸ್ವಾಲ್ ಕೂಡ ಸೇರ್ಪಡೆಗೊಂಡಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಭಾರತ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಆಯ್ಕೆಯಾಗಿದ್ದು, ಯಶಸ್ವಿ ಜೈಸ್ವಾಲ್ ಇನ್ನೂ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿಲ್ಲ. ಆದರೆ, ಅವರು ಟೆಸ್ಟ್ ಮತ್ತು ಟಿ20 ಕ್ರಿಕೆಟ್‌ನಲ್ಲಿ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಿದ್ದಾರೆ. ಅವರು ನಿರಂತರವಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಪರ ಸಾಕಷ್ಟು ರನ್ ಗಳಿಸುತ್ತಿದ್ದಾರೆ. ಇವರ ಫಾರ್ಮ್ ನೋಡಿ ಚಾಂಪಿಯನ್ಸ್ ಟ್ರೋಫಿಗೆ ಪ್ರಕಟಿಸಲಾಗಿರುವ 15 ಸದಸ್ಯರ ಭಾರತ ತಂಡದಲ್ಲಿ ಅವಕಾಶ ನೀಡಲಾಗಿದೆ.

ಚಾಂಪಿಯನ್ಸ್ ಟ್ರೋಫಿಗೆ ಟೀಮ್ ಇಂಡಿಯಾವನ್ನು ಘೋಷಿಸುವ ಸಂದರ್ಭದಲ್ಲಿ ರೋಹಿತ್ ಶರ್ಮಾ ಒಂದೇ ಒಂದು ಅಂತಾರಾಷ್ಟ್ರೀಯ ಏಕದಿನ ಪಂದ್ಯವನ್ನು ಸಹ ಆಡದ ಯಶಸ್ವಿ ಜೈಸ್ವಾಲ್ ಆಯ್ಕೆಯ ಹಿಂದಿನ ಕಾರಣವನ್ನು ಹೇಳಿದ್ದಾರೆ. 'ಕಳೆದ 6-8 ತಿಂಗಳ ಪ್ರದರ್ಶನದ ಆಧಾರದ ಮೇಲೆ ನಾವು ಯಶಸ್ವಿ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದ್ದೇವೆ. ಅವರು ಒಂದೇ ಒಂದು ಏಕದಿನ ಪಂದ್ಯವನ್ನು ಆಡಿಲ್ಲ, ಆದರೆ ಅವರ ಸಾಮರ್ಥ್ಯದ ಕಾರಣ ನಾವು ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಕಾರಣ ನೀಡಿದ್ದಾರೆ.
ಜೈಸ್ವಾಲ್ ಶೀಘ್ರದಲ್ಲೇ ತಮ್ಮ ಏಕದಿನ ಚೊಚ್ಚಲ ಪಂದ್ಯವನ್ನು ಆಡಲಿದ್ದಾರೆ. ಮುಂಬರುವ ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ತವರಿನಲ್ಲಿ ನಡೆಯಲಿರುವ ತಂಡದಲ್ಲಿ ಯಶಸ್ವಿ ಜೈಸ್ವಾಲ್ ಕೂಡ ಭಾರತ ತಂಡದ ಭಾಗವಾಗಿದ್ದಾರೆ. ಇಂತಹ ಸಂದಭದಲ್ಲಿ ಅವರು ಈ ಸರಣಿಯ ಮೂಲಕ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲಿದ್ದಾರೆ. ನಂತರ ದುಬೈನಲ್ಲಿ ನಡೆಯಲಿರುವ ಏಕದಿನ ಮಾದರಿಯ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯಲ್ಲಿ ಭಾರತವನ್ನು ಪ್ರತಿನಿಧಿಸುವ ನಿರೀಕ್ಷೆಯಿದೆ.
ಯಶಸ್ವಿ ಜೈಸ್ವಾಲ್ 19 ಟೆಸ್ಟ್ ಪಂದ್ಯಗಳ 36 ಇನ್ನಿಂಗ್ಸ್‌ಗಳಲ್ಲಿ 52.88 ಸರಾಸರಿಯಲ್ಲಿ ಒಟ್ಟು 1798 ರನ್ ಗಳಿಸಿದ್ದಾರೆ. ಈ ಸಂದರ್ಭದಲ್ಲಿ 10 ಅರ್ಧ ಶತಕಗಳು ಮತ್ತು 4 ಶತಕಗಳಿವೆ. ಇನ್ನೂ ಟಿ20 ಕ್ರಿಕೆಟ್‌ನಲ್ಲಿ ಜೈಸ್ವಾಲ್ ಅಬ್ಬರಿಸಿದ್ದು, ಆಡಿರುವ 23 ಟಿ20 ಪಂದ್ಯಗಳಲ್ಲಿ 5 ಅರ್ಧ ಶತಕ ಮತ್ತು 1 ಶತಕ ಒಳಗೊಂಡಂತೆ 36.115 ಸರಾಸರಿಯಲ್ಲಿ ಒಟ್ಟು 723 ರನ್ ಗಳಿಸಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ.