Champions Trophy final: ಭಾರತದ ಗೆಲುವಿನ ಹೀರೋಗಳಾದ 3 ಆಟಗಾರರು
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಅದ್ಭುತ ಪ್ರದರ್ಶನ ನೀಡಿ 4 ವಿಕೆಟ್‌ಗಳಿಂದ ಗೆದ್ದಿದೆ. ಈ ಗೆಲುವಿನ ನೆರವಿನಿಂದ ಭಾರತ ತಂಡ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಪ್ರಶಸ್ತಿ ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ.
ದುಬೈನ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ನ್ಯೂಜಿಲೆಂಡ್ 252 ರನ್‌ಗಳ ಗೆಲುವಿನ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಭಾರತ 49 ಓವರ್‌ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು ಗೆಲುವಿನ ನಗೆ ಬೀರಿತು.

ನ್ಯೂಜಿಲೆಂಡ್ ವಿರುದ್ಧ ಫೈನಲ್ ಪಂದ್ಯದ ಗೆಲುವಿಗೆ ಟೀಮ್ ಇಂಡಿಯಾ ಆನೇಕ ಆಟಗಾರರು ಪ್ರಮುಖ ಕೊಡುಗೆ ನೀಡಿದರು. ಟೀಮ್ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಆ ಮೂವರು ಆಟಗಾರರ ಬಗ್ಗೆ ಇಲ್ಲಿದೆ ಮಾಹಿತಿ.
ರೋಹಿತ್ ಶರ್ಮಾ
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಗೆಲುವಿನಲ್ಲಿ ರೋಹಿತ್ ಶರ್ಮಾ ಪ್ರಮುಖ ಪಾತ್ರವಹಿಸಿದರು. ನಾಯಕನ ಆಟವಾಡಿದ ರೋಹಿತ್ ಶರ್ಮಾ 83 ಎಸೆತಗಳಲ್ಲಿ 7 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 76 ರನ್ ಬಾರಿಸಿದರು. ರೋಹಿತ್ ಶರ್ಮಾ ಭಾರತ ತಂಡಕ್ಕೆ ಉತ್ತಮ ಆರಂಭ ನೀಡದೇ ಇದ್ದಿದ್ದರೆ, ಬಹುಶಃ ಭಾರತದ ಟ್ರೋಫಿ ಗೆಲ್ಲುವ ಕನಸು ಭಗ್ನವಾಗುತ್ತಿತ್ತು.
ಶ್ರೇಯಸ್ ಅಯ್ಯರ್
ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಶ್ರೇಯಸ್ ಅಯ್ಯರ್ ಸ್ಥಿರ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದರು. ಫೈನಲ್ ಪಂದ್ಯದಲ್ಲೂ ಅಯ್ಯರ್ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದರು. ಅಯ್ಯರ್ 62 ಎಸೆತಗಳಲ್ಲಿ 2 ಬೌಂಡಿರಿ ಮತ್ತು 2 ಸಿಕ್ಸರ್ ನೆರವಿನಿಂದ 48 ರನ್‌ಗಳನ್ನು ಕಲೆ ಹಾಕಿದರು. ಅಕ್ಸರ್ ಪಟೇಲ್ ಜೊತೆಗೆ ನಾಲ್ಕನೇ ವಿಕೆಟ್‌ಗೆ 61 ರನ್‌ಗಳ ಮಹತ್ವದ ಜೊತೆಯಾಟ ನಡೆಸಿ ಭಾರತ ಗೆಲುವು ದಾಖಲಿಸಲು ಸಹಾಯ ಮಾಡಿದರು.
ಕುಲದೀಪ್ ಯಾದವ್
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕುಲದೀಪ್ ಯಾದವ್ ತನ್ನ ಸ್ಪಿನ್ ಬೌಲಿಂಗ್ ಮೂಲಕ ನ್ಯೂಜಿಲೆಂಡ್ ಬ್ಯಾಟರ್‌ಗಳನ್ನು ಕಟ್ಟಿ ಹಾಕಿದರು. ರಚಿನ್ ರವೀಂದ್ರ ಮತ್ತು ಕೇನ್ಸ್ ವಿಲಿಯಮ್ಸನ್ ಅವರಂತಹ ಉತ್ತಮ ಫಾರ್ಮ್‌ನಲ್ಲಿರುವ ಬ್ಯಾಟರ್‌ಗಳನ್ನು ವಿಕೆಟ್ ಉರುಳಿಸಿ ಭಾರತದ ಗೆಲುವಿನ ಪ್ರಮುಖ ಪಾತ್ರವಹಿಸಿದರು. ಕುಲದೀಪ್ ತಮ್ಮ 10 ಓವರ್‌ಗಳಲ್ಲಿ 40 ರನ್‌ಗಳಿಗೆ 2 ವಿಕೆಟ್‌ಗಳನ್ನು ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications