Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಚಾಂಪಿಯನ್ಸ್ ಟ್ರೋಫಿ ಉಪಾಂತ್ಯಕ್ಕೇರಬಲ್ಲ ತಂಡಗಳಿವು

ಬೆಂಗಳೂರು, ಮೇ 30: ಐಸಿಸಿ ಚಾಂಪಿಯನ್ಸ್ ಟ್ರೋಫಿ ಜೂನ್ 1ರಿಂದ ವಿದ್ಯುಕ್ತವಾಗಿ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಟೀಂ ಇಂಡಿಯಾ ಅಲ್ಲದೆ, ಸೆಮಿಫೈನಲ್ ಹಂತಕ್ಕೇರಬಲ್ಲ ಸಾಮರ್ಥ್ಯವುಳ್ಳ ತಂಡಗಳ ಬಗ್ಗೆ ಮಾಜಿ ಕ್ರಿಕೆಟರ್ ಇಯಾನ್ ಚಾಪೆಲ್ ಏನು ಹೇಳಿದ್ದಾರೆ.

ಜೂನ್ 1 ರಿಂದ 18ರ ವರೆಗೆ 18 ದಿನಗಳ ಅವಧಿಯಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್‌ನ 3 ಕ್ರಿಕೆಟ್ ಮೈದಾನಗಳಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ 2017 ಪಂದ್ಯಗಳು ನಡೆಯಲಿವೆ.[#CT17 #INDvPAK ಫುಲ್ ವೇಳಾಪಟ್ಟಿ ನೋಟ್ ಮಾಡ್ಕೊಳಿ!]

ಭಾರತೀಯ ಕಾಲಮಾನ ಪ್ರಕಾರ ಕ್ರಮವಾಗಿ ಹಗಲು ಪಂದ್ಯ ಮಧ್ಯಾಹ್ನ 3 ಗಂಟೆ ಹಾಗೂ ಹಗಲು/ರಾತ್ರಿ ಪಂದ್ಯ ಸಂಜೆ 6 ಗಂಟೆಗೆ ಆರಂಭವಾಗಲಿದೆ. ಜೂನ್ 04ರಂದು ಭಾರತ ಹಾಗೂ ಪಾಕಿಸ್ತಾನ ಪಂದ್ಯ ನಿಗದಿಯಾಗಿದೆ.

Champions Trophy: Ian Chappell picks likely semi-finalists

ಎರಡು ಗುಂಪುಗಳಲ್ಲಿ ತಲಾ ನಾಲ್ಕು ತಂಡಗಳಿವೆ. ಎ ಗುಂಪಿನಲ್ಲಿ ಆಸ್ಟ್ರೇಲಿಯಾ, ಬಾಂಗ್ಲಾದೇಶ, ಇಂಗ್ಲೆಂಡ್, ನ್ಯೂಜಿಲೆಂಡ್ ಹಾಗೂ ಬಿ ಗುಂಪಿನಲ್ಲಿ ಭಾರತ, ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ಶ್ರೀಲಂಕಾ. ಚಾಂಪಿಯನ್ಸ್ ಟ್ರೋಫಿ ಜೂನ್ 1 (ಗುರುವಾರ) ದಿ ಓವಲ್ ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಬಾಂಗ್ಲಾದೇಶ ಸೆಣಸಲಿದೆ.[ಚಾಂಪಿಯನ್ಸ್ ಟ್ರೋಫಿ : ಸ್ಪರ್ಧಾ ಕಣದಲ್ಲಿರುವ 8 ತಂಡಗಳಿವು]

ಹಾಲಿ ಚಾಂಪಿಯನ್ಸ್ ಟೀಂ ಇಂಡಿಯಾ, ಆಸ್ಟ್ರೇಲಿಯಾ, ಅತಿಥೇಯ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಉಪಾಂತ್ಯ ಹಂತಕ್ಕೇರುವ ಸಾಮರ್ಥ್ಯ ಹೊಂದಿವೆ ಎಂದು ಮಾಜಿ ಕ್ರಿಕೆಟರ್ ಇಯಾನ್ ಚಾಪೆಲ್ ಅಭಿಪ್ರಾಯಪಟ್ಟಿದ್ದಾರೆ.

Story first published: Wednesday, January 3, 2018, 10:05 [IST]
Other articles published on Jan 3, 2018
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+