ಚಾಂಪಿಯನ್ಸ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡುವೆ: ಯುವಿ
ಬೆಂಗಳೂರು, ಮೇ 10 : 11 ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಅವಕಾಶ ಪಡೆದಿರುವ ಭಾರತದ ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜೂನ್ 1 ರಿಂದ ಇಂಗ್ಲೆಂಡ್ ನಲ್ಲಿ ಪ್ರಾರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಸ್ಥಾನಗಿಟ್ಟಿಸಿಕೊಂಡಿರುವುದಕ್ಕೆ ಮಾಧ್ಯಮಗಳ ಜತೆ ಸಂತೋಷ ಹಂಚಿಕೊಂಡಿರುವ ಯುವಿ, 'ಏಕದಿನ ಕ್ರಿಕೆಟ್‌ನಲ್ಲಿ ಸ್ಥಾನ ಪಡೆದಿರುವುದು ಸಂತಸ ತಂದಿದ್ದು, ಸಿಕ್ಕ ಅವಕಾಶವನ್ನು ಅರ್ಥಪೂರ್ಣವಾಗಿ ಬಳಸಿಕೊಂಡು ಉತ್ತಮ ಪ್ರದರ್ಶನದ ಮೂಲಕ ತಂಡದ ಗೆಲುವಿಗೆ ಕೊಡುಗೆ ನೀಡುತ್ತೇನೆ'ಎಂದಿದ್ದಾರೆ.

35 ವರ್ಷದ ಯುವರಾಜ್ ಸಿಂಗ್ 11 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಲ್ಲಿ ಆಡಲಿದ್ದಾರೆ. ಯುವಿ 2002ರಲ್ಲಿ ಕೀನ್ಯಾ ವಿರುದ್ಧ ನಡೆದ ಪಂದ್ಯದಲ್ಲಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿ, 2006ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿದ್ದರು.
2009 ಹಾಗೂ 2013ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗಳಿಂದ ಹೊರ ಉಳಿದಿದ್ದರು. ಇದೀಗ 2017ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಸ್ಥಾನ ಪಡೆದುಕೊಂಡಿದ್ದು ಉತ್ತಮ ಪ್ರದರ್ಶನ ನೀಡುವ ತವಕದಲ್ಲಿದ್ದಾರೆ.
ಸದ್ಯ ಯುವರಾಜ್ ಸಿಂಗ್ 2017 ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಆಡುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications