ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಠಿಣ ತರಬೇತಿ ವಿಡಿಯೋ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

Chasing Dreams, Hardik Pandya Shared Training Video In Chinnaswamy Stadium Bengaluru

ಟೀಮ್ ಇಂಡಿಯಾ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಬೆವರು ಹರಿಸುತ್ತಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಇತ್ತೀಚಿನ ಪೋಸ್ಟ್‌ನಲ್ಲಿ, ಹಾರ್ದಿಕ್ ಪಾಂಡ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಠಿಣ ತರಬೇತಿ ಪಡೆಯುತ್ತಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಭಾರತ ಸರಣಿ ಗೆಲುವಿಗೆ ಸಹಾಯ ಮಾಡಿದ ನಂತರ, ಹಾರ್ದಿಕ್ ಪಾಂಡ್ಯ ಸೋಮವಾರ ಬೆಂಗಳೂರಿಗೆ ಬಂದಿಳಿದರು. ನಡೆಯುತ್ತಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯರಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ ಪಾಂಡ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ. ಭಾರತದ ಆಟಗಾರ ಈ ತಿಂಗಳ ಆರಂಭದಲ್ಲಿ ತಂಡವನ್ನು ಸೇರಿಕೊಳ್ಳಲಿದ್ದಾರೆ ಮತ್ತು ಅಕ್ಟೋಬರ್ 6 ರಂದು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.

 ಟಿ20 ವಿಶ್ವಕಪ್‌ನಲ್ಲಿ ಭುವನೇಶ್ವರ್ ಬದಲಿಗೆ ಈತ ಆಡಿದರೆ ಉತ್ತಮ ಎಂದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಟಿ20 ವಿಶ್ವಕಪ್‌ನಲ್ಲಿ ಭುವನೇಶ್ವರ್ ಬದಲಿಗೆ ಈತ ಆಡಿದರೆ ಉತ್ತಮ ಎಂದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಹಾರ್ದಿಕ್ ಪಾಂಡ್ಯ ಶನಿವಾರ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಆ ಪೋಸ್ಟ್‌ನಲ್ಲಿ, ಅವರು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಓಡುವುದು ಮತ್ತು ಕಠಿಣ ಪರಿಶ್ರಮ ಪಡುತ್ತಿರುವುದನ್ನು ನೋಡಬಹುದು.

ಹಾರ್ದಿಕ್ ಪಾಂಡ್ಯ ಎನ್‌ಸಿಎ ಭೇಟಿಗೆ ಹೆಚ್ಚಿನ ಕಾಳಜಿ ಇಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಭಾರತ ಮತ್ತು ಆಸ್ಟ್ರೇಲಿಯಾ ಸರಣಿಯಲ್ಲಿ ಪಾಂಡ್ಯ ಫಿಟ್ ಆಗಿ ಕಾಣಿಸಿಕೊಂಡಿದ್ದರಿಂದ ಆಟಗಾರ ಗಾಯಗೊಂಡಿಲ್ಲ. ವಿಶ್ವಕಪ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾಕ್ಕೆ ಭಾರತೀಯ ತಂಡವನ್ನು ಘೋಷಿಸಿದಾಗ ಎನ್‌ಸಿಎನಲ್ಲಿ ವರದಿ ಮಾಡುವಂತೆ ಬಿಸಿಸಿಐ ಹಾರ್ದಿಕ್ ಪಾಂಡ್ಯಗೆ ಸೂಚನೆ ನೀಡಿತ್ತು.

Chasing Dreams, Hardik Pandya Shared Training Video In Chinnaswamy Stadium Bengaluru

ಕಂಡೀಷನಿಂಗ್ ಕೆಲಸಕ್ಕಾಗಿ ಎನ್‌ಸಿಎಗೆ ಬಂದ ಪಾಂಡ್ಯ

"ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ತವರಿನ ಸರಣಿಯ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ, ಅರ್ಶ್‌ದೀಪ್ ಸಿಂಗ್ ಮತ್ತು ಭುವನೇಶ್ವರ್ ಕುಮಾರ್ ಕಂಡೀಷನಿಂಗ್ ಸಂಬಂಧಿತ ಕೆಲಸಕ್ಕಾಗಿ ಎನ್‌ಸಿಎಗೆ ವರದಿ ಮಾಡುತ್ತಾರೆ" ಎಂದು ಬಿಸಿಸಿಐ ನಂತರ ಹೇಳಿಕೆಯಲ್ಲಿ ತಿಳಿಸಿತ್ತು.

ಭಾರತದ ಯುವ ವೇಗಿ ಅರ್ಶ್‌ದೀಪ್ ಸಿಂಗ್ ಆಸ್ಟ್ರೇಲಿಯಾ ವಿರುದ್ಧದ ಭಾರತ ಸರಣಿಯಲ್ಲಿ ವಿಶ್ರಾಂತಿ ಪಡೆದರು ಮತ್ತು ಎನ್‌ಸಿಎಯಲ್ಲಿದ್ದರು. ಅರ್ಶ್‌ದೀಪ್ ಸಿಂಗ್ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಆಡುತ್ತಿದ್ದಾರೆ. ಭುವನೇಶ್ವರ್ ಕುಮಾರ್ ಮತ್ತು ಹಾರ್ದಿಕ್ ಪಾಂಡ್ಯ ಮುಂದಿನ ಕೆಲವು ದಿನಗಳವರೆಗೆ ಕಂಡೀಷನಿಂಗ್‌ಗಾಗಿ ಎನ್‌ಸಿಎಯಲ್ಲಿರುತ್ತಾರೆ.

Chasing Dreams, Hardik Pandya Shared Training Video In Chinnaswamy Stadium Bengaluru

ವಿಶ್ವಕಪ್‌ಗೆ ಮುನ್ನ ವಿಶ್ರಾಂತಿ

ಟಿ20 ವಿಶ್ವಕಪ್‌ಗೂ ಮುನ್ನ ಹಾರ್ದಿಕ್ ಪಾಂಡ್ಯ ಉತ್ತಮ ವಿಶ್ರಾಂತಿ ಪಡೆಯಲು ಇದು ಸೂಕ್ತ ಅವಧಿಯಾಗಿದೆ. ಆಸ್ಟ್ರೇಲಿಯಾದಲ್ಲಿ ಐಸಿಸಿ ವಿಶ್ವಕಪ್‌ನಲ್ಲಿ ಪಾಂಡ್ಯ ಉಲ್ಲಾಸಿತವಾಗಿರಬೇಕು ಮತ್ತು ಎನ್‌ಸಿಎಯಲ್ಲಿನ ಈ ಅವಧಿಯು ಅವರ ಫಿಟ್‌ನೆಸ್ ಸ್ಥಿತಿಗೆ ಸಂಬಂಧಿಸಿದಂತೆ ಅವರಿಗೆ ಸಹಾಯ ಮಾಡುತ್ತದೆ.

ಪ್ರಸ್ತುತ ಟೀಮ್ ಇಂಡಿಯಾದಲ್ಲಿ, ವಿಶೇಷವಾಗಿ ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಹಾರ್ದಿಕ್ ಪಾಂಡ್ಯ ಪ್ರಮುಖ ಆಲ್‌ರೌಂಡರ್ ಆಗಿ ರೂಪುಗೊಂಡಿದ್ದಾರೆ.

Story first published: Saturday, October 1, 2022, 23:48 [IST]
Other articles published on Oct 1, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X