Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಸ್ಕೋಡಾ ಜೊತೆಗೆ ಒಪ್ಪಂದ ಮಾಡಿಕೊಂಡ ಚೆನ್ನೈ ಸೂಪರ್ ಕಿಂಗ್ಸ್

Chennai Super Kings signed Skoda as their new title sponsor for next 3 years

ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದ ತಂಡಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆಟೋಮೊಬೈಲ್ ಉತ್ಪಾದನಾ ಸಂಸ್ಥೆ ಸ್ಕೋಡಾ ಜೊತೆಗೆ ಟೈಟಲ್ ಸ್ಪಾನ್ಸರ್ ಆಗಿ ಒಪ್ಪಂದ ಮಾಡಿಕೊಂಡಿದೆ.

ಇನ್‌ಸೈಡ್ ಸ್ಪೋರ್ಟ್ಸ್ ವರದಿಯ ಪ್ರಕಾರ, ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮುಂದಿನ 3 ವರ್ಷಗಳ ಕಾಲ ಶೀರ್ಷಿಕೆ ಪ್ರಾಯೋಜಕರಾಗಿ ಸ್ಕೋಡಾ ಜೊತೆಗೆ 75 ಕೋ.ರೂ.ಗಳ ಒಪ್ಪಂದ ಮಾಡಿಕೊಂಡಿದೆ.

ಇಂಡಿಯಾ ಸಿಮೆಂಟ್ ಮಾಲೀಕತ್ವದ ಸಿಎಸ್‌ಕೆ ತಂಡ ಐಪಿಎಲ್ ಫ್ರಾಂಚೈಸಿಗಳಲ್ಲೇ ಅತ್ಯಂತ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ. ಒಟ್ಟು 3 ಬಾರಿ ಟ್ರೋಫಿ ಗೆದ್ದಿರುವ ಸಿಎಸ್‌ಕೆ, ಮುಂಬೈ ಇಂಡಿಯನ್ಸ್ (5 ಟ್ರೋಫಿ) ಬಳಿಕ ಹೆಚ್ಚು ಟ್ರೋಫಿ ಗೆದ್ದ ಎರಡನೇ ತಂಡವಾಗಿ ಕಾಣಿಸಿಕೊಂಡಿದೆ.

ಐಪಿಎಲ್ ಇತಿಹಾಸದಲ್ಲೇ ಕಳೆದ ಸಾರಿ ಸಿಎಸ್‌ಕೆ ಕೆಟ್ಟ ಪ್ರದರ್ಶನ ನೀಡಿತ್ತು. ಪ್ಲೇ ಆಫ್ಸ್‌ಗೆ ಪ್ರತೀ ಸಾರಿಯೂ ಸುಲಭವಾಗಿ ಪ್ರವೇಶಿಸುತ್ತಿದ್ದ ಸಿಎಸ್‌ಕೆ ಹಿಂದಿನ ಸೀಸನ್‌ನಲ್ಲಿ ಪ್ಲೇ ಆಫ್‌ಗೆ ಪ್ರವೇಶಿಸದೆ ಲೀಗ್‌ನಲ್ಲೇ ಹೊರಬಿದ್ದಿತ್ತು. ಕಳೆದ ಸೀಸನ್‌ನಲ್ಲಿ ಸಿಎಸ್‌ಕೆ ಪರ ಸುರೇಶ್ ರೈನಾ, ಹರ್ಭಜನ್ ಸಿಂಗ್ ಆಡಿರಲಿಲ್ಲ.

Story first published: Thursday, February 4, 2021, 9:05 [IST]
Other articles published on Feb 4, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+