ಐಪಿಎಲ್ 2025 ರ 30ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ಎದುರಿಸಲಿದೆ. ಇಂದು ಅಂದರೆ, ಸೋಮವಾರ ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ಈ ಬಾರಿ ಲಕ್ನೋ ತಂಡವು ಲೀಗ್ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಲಿದೆ. ಆದ್ದರಿಂದ ಈ ಪಂದ್ಯ ಭಾರಿ ಕುತೂಹಲ ಮೂಡಿಸಿದ್ದು, ಉಭಯ ತಂಡಗಳ ಅಭಿಮಾನಿಗಳು ಕಾಯುತ್ತಿದ್ದಾರೆ.
ಲಕ್ನೋ ಸೂಪರ್ ಕಿಂಗ್ಸ್ ತಂಡ ಐಪಿಎಲ್ 2025 ರಲ್ಲಿ ಅದ್ಭುತ ಫಾರ್ಮ್‌ನಲ್ಲಿದೆ. ಕಳೆದ ಮೂರು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಮತ್ತೊಂದೆಡೆ ಚೆನ್ನೈ ಸೂಪರ್ ಕಿಂಗ್ಸ್ ಕಳೆದ ಐದು ಪಂದ್ಯಗಳಲ್ಲಿ ಹೀನಾಯವಾಗಿ ಸೋತಿದೆ. ಇಂತಹ ಪರಿಸ್ಥಿತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ ರೇಸ್‌ನಲ್ಲಿ ಉಳಿಯಲು ಇಂದಿನ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ರಿಷಭ್ ಪಂತ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಗುಜರಾತ್ ಟೈಟಾನ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಮೂರು ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್‌ಗಳಿಂದ ಜಯಗಳಿಸಿತ್ತು. ಇತ್ತ ಸಿಎಸ್‌ಕೆ ತಂಡ ಕೂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಕೊನೆಯ ಪಂದ್ಯವನ್ನು ಆಡಿತು. ಈ ಪಂದ್ಯದಲ್ಲಿ ಸಿಎಸ್‌ಕೆ ತವರಿಲ್ಲಿ ಹೀನಾಯ ಸೋಲನ್ನು ಎದುರಿಸಿತು.
ಲಕ್ನೋ ತಂಡದ ಟಾಪ್ ಆರ್ಡರ್ ಬ್ಯಾಟರ್ಸ್ ಭರ್ಜರಿ ಫಾರ್ಮ್‌ನಲ್ಲಿದ್ದು, ರನ್ ಹೊಳೆ ಹರಿಸುತ್ತಿದ್ದಾರೆ. ಚೆನ್ನೈ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಸಂಪೂರ್ಣ ವಿಫಲವಾಯಿತು.
ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣವು ಇಲ್ಲಿಯವರೆಗೆ 17 ಐಪಿಎಲ್ ಪಂದ್ಯಗಳನ್ನು ಆಯೋಜಿಸಿದೆ. ಮೊದಲು ಬ್ಯಾಟ್ ಮಾಡಿದ ತಂಡಗಳು ಎಂಟು ಪಂದ್ಯಗಳನ್ನು ಗೆದ್ದಿವೆ. ಚೇಸಿಂಗ್ ಮಾಡಿದ ತಂಡಗಳು ಅಷ್ಟೇ ಪಂದ್ಯಗಳನ್ನು ಗೆದ್ದಿವೆ. ಏಕಾನಾ ಪಿಚ್ ಸಾಮಾನ್ಯವಾಗಿ ಬ್ಯಾಟರ್ಸ್‌ಗೆ ರನ್ ಗಳಿಸಲು ಕಠಿಣ ಮೈದಾನ ಎಂದು ಹೆಸರುವಾಸಿಯಾಗಿದೆ. ಆದಾಗ್ಯೂ, ಐಪಿಎಲ್ 2025 ರಲ್ಲಿ ಈ ಪಿಚ್‌ನಲ್ಲಿ ಬೌಲರ್‌ಗಳಿಗೆ ಮೇಲುಗೈ ಸಿಕ್ಕಿಲ್ಲ. ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದವರು ಮೊದಲು ಬೌಲಿಂಗ್ ಮಾಡುವ ಸಾಧ್ಯತೆಯಿದೆ.
ನಿಕೋಲಸ್ ಪೂರನ್- 6 ಪಂದ್ಯ, 349 ರನ್
ಮಿಚೆಲ್ ಮಾರ್ಷ್- 5 ಪಂದ್ಯ, 265 ರನ್
ಐಡೆನ್ ಮಾರ್ಕ್ರಾಮ್- 6 ಪಂದ್ಯ, 202 ರನ್
ಶಾರ್ದೂಲ್ ಠಾಕೂರ್- 6 ಪಂದ್ಯ, 11 ವಿಕೆಟ್
ದಿಗ್ವೇಶ್ ರಾಠಿ- 6 ಪಂದ್ಯ, 8 ವಿಕೆಟ್
ರವಿ ಬಿಷ್ಣೋಯಿ- 6 ಪಂದ್ಯ, 6 ವಿಕೆಟ್
ಲಕ್ನೋ ಸಂಭಾವ್ಯ ತಂಡ: ರಿಷಭ್ ಪಂತ್ (ನಾಯಕ ಮತ್ತು ವಿಕೆಟ್‌ಕೀಪರ್), ಏಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಡೇವಿಡ್ ಮಿಲ್ಲರ್, ಅಬ್ದುಲ್ ಸಮದ್, ಹಿಮ್ಮತ್ ಸಿಂಗ್, ಶಾರ್ದೂಲ್ ಠಾಕೂರ್, ಅವೇಶ್ ಖಾನ್, ರವಿ ಬಿಷ್ಣೋಯ್, ಆಕಾಶ್ ದೀಪ್.
ರಚಿನ್ ರವೀಂದ್ರ- 6 ಪಂದ್ಯ, 149 ರನ್
ಶಿವಂ ದುಬೆ- 6 ಪಂದ್ಯ, 137 ರನ್
ವಿಜಯ್ ಶಂಕರ್- 4 ಪಂದ್ಯ, 122 ರನ್
ನೂರ್ ಆಹ್ಮದ್- 6 ಪಂದ್ಯ, 12 ವಿಕೆಟ್
ಖಲೀಲ್ ಆಹ್ಮದ್- 6 ಪಂದ್ಯ, 10 ವಿಕೆಟ್
ಮತೀಶ್ ಪತಿರಾಣಾ- 4 ಪಂದ್ಯ, 5 ವಿಕೆಟ್
ಚೆನ್ನೈ ಸಂಭಾವ್ಯ ತಂಡ: ರಚಿನ್ ರವೀಂದ್ರ, ಡೆವೊನ್ ಕಾನ್ವೇ, ರಾಹುಲ್ ತ್ರಿಪಾಠಿ, ಶಿವಂ ದುಬೆ, ವಿಜಯ್ ಶಂಕರ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್‌ಕೀಪರ್), ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್.
ಐಪಿಎಲ್‌ನಲ್ಲಿ ಇಲ್ಲಿವರೆಗೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಒಟ್ಟು ಐದು ಬಾರಿ ಮುಖಾಮುಖಿಯಾಗಿವೆ. ಈ ಐದು ಪಂದ್ಯದಲ್ಲಿ ಚೆನ್ನೈ ಎದುರು ಲಕ್ನೋ ಪ್ರಾಬಲ್ಯ ಸಾಧಿಸಿದೆ. ಲಕ್ನೋ ಮೂರು ಪಂದ್ಯಗಳನ್ನು ಗೆದ್ದಿದ್ದರೆ, ಸಿಎಸ್‌ಕೆ ಒಮ್ಮೆ ಮಾತ್ರ ಜಯ ಕಂಡಿದೆ. ಒಂದು ಪಂದ್ಯ ಮಳೆಯಿಂದ ರದ್ದಾಗಿದೆ.