ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10 ವರ್ಷ ಪೂರೈಸಿದ ಚೇತೇಶ್ವರ ಪೂಜಾರ

ನವದೆಹಲಿ: ಭಾರತದ ಟೆಸ್ಟ್ ಸ್ಪೆಶಾಲಿಸ್ಟ್ ಚೇತೇಶ್ವರ ಪೂಜಾರ ಅವರು ಶುಕ್ರವಾರ (ಅಕ್ಟೋಬರ್ 9) ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 10 ವರ್ಷಗಳನ್ನು ಪೂರೈಸಿದ್ದಾರೆ. ಈ ವಿಶೇಷ ದಿನದ ಖುಷಿಯನ್ನು ಪೂಜಾರ ತನ್ನ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.
ಸಾಂಪ್ರದಾಯಿಕ ಕ್ರಿಕೆಟ್ ಮಾದರಿಯೆನಿಸಿರುವ ಟೆಸ್ಟ್ ಕ್ರಿಕೆಟ್‌ನಲ್ಲಿ ಪೂಜಾರ ಅಪರೂಪದ ದಾಖಲೆಗಳನ್ನು ಹೊಂದಿದ್ದಾರೆ. ಪೂಜಾರ ಟೆಸ್ಟ್ ಕ್ರಿಕೆಟ್‌ನಲ್ಲಿ ಪಾದಾರ್ಪಣೆ ಮಾಡಿದ್ದು 2010ರಲ್ಲಿ ಆಸ್ಟ್ರೇಲಿಯಾ ವಿರುದ್ಧ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿತ್ತು.
ಪಾದಾರ್ಪಣೆಯ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 4 ರನ್ ಗಳಿಸಿದ್ದ ಪೂಜಾರ, ದ್ವಿತೀಯ ಇನ್ನಿಂಗ್ಸ್‌ನಲ್ಲಿ 89 ಎಸೆತಗಳಿಗೆ 72 ರನ್ ಬಾರಿಸಿದ್ದರು. ಪಂದ್ಯದಲ್ಲಿ 478+223 ರನ್ ಬಾರಿಸಿದ್ದ ಆಸ್ಟ್ರೇಲಿಯಾ 7 ವಿಕೆಟ್ ಗೆಲುವನ್ನಾಚರಿಸಿತ್ತು.
ಖುಷಿಯನ್ನು ಟ್ವೀಟ್ ಮೂಲಕ ಹಂಚಿಕೊಂಡಿರುವ ಪೂಜಾರ, 'ಭಾರತೀಯ ಕ್ರಿಕೆಟಿಗನಾಗಿ ಭಾರತದ ಧ್ವಜವನ್ನು 10 ವರ್ಷಗಳ ಕಾಲ ಹಾರಾಡಿಸಿದ ಭಾಗ್ಯ ನನ್ನದು. ಆ ವರ್ಷಗಳ ಹಿಂದೆ ರಾಜ್‌ಕೋಟ್‌ನಲ್ಲಿ ಕ್ರಿಕೆಟ್ ಆಡುತ್ತಾ ಬೆಳೆದ ನನ್ನ ತಂದೆಯ ಕಣ್ಗಾವಲು ಅಡಿಯಲ್ಲಿನ ಪ್ರಯಾಣವು ನನ್ನನ್ನು ಇಲ್ಲಿಗೆ ಕರೆತರುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ತಂಡಕ್ಕೆ ಹೆಚ್ಚಿನ ಕೊಡುಗೆ ನೀಡಲು ನಾನು ಎದುರು ನೋಡುತ್ತಿದ್ದೇನೆ' ಎಂದು ಬರೆದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications