IND vs AUS: ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಮರಳಿದ ಚೇತೇಶ್ವರ ಪೂಜಾರ
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಬಹು ನಿರೀಕ್ಷಿತ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಆರಂಭಕ್ಕೆ ಕೇವಲ 2 ದಿನಗಳು ಮಾತ್ರ ಉಳಿದಿವೆ. ಉಭಯ ತಂಡಗಳ ನಡುವಿನ ಕಾದಾಟವನ್ನು ನೋಡಲು ಇಡೀ ವಿಶ್ವವೇ ಕಾದು ಕುಳಿದಿದೆ. ಭಾರತ 2020-21ರಲ್ಲಿ ಕೊನೆಯ ಬಾರಿಗೆ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಾಗ 2-1 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿತ್ತು. ಈ ಬಾರಿಯೂ ಆಸ್ಟ್ರೇಲಿಯಾ ಮಣಿಸುವ ವಿಶ್ವಾಸದಲ್ಲಿ ಭಾರತ ತಂಡವಿದೆ. ಇದರ ಮಧ್ಯೆ ಟೀಮ್ ಇಂಡಿಯಾ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
ಕಳೆದ ಎರಡು ಆಸ್ಟ್ರೇಲಿಯಾ ಪ್ರವಾಸಗಳಲ್ಲಿ ಭಾರತ ತಂಡದ ಗೆಲುವಿಗೆ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟರ್ ಚೇತೇಶ್ವರ ಪೂಜಾರ ಪ್ರಮುಖ ಪಾತ್ರವಹಿಸಿದ್ದರು. ಆಸ್ಟ್ರೇಲಿಯಾ ವೇಗದ ಬೌಲಿಂಗ್ ದಾಳಿ ವಿರುದ್ಧ ತಡೆಗೋಡೆಯಂತೆ ಟೀಮ್ ಇಂಡಿಯಾ ಪಾಲಿಗೆ ಚೇತೇಶ್ವರ ಪೂಜಾರ ನಿಂತಿದ್ದರು. ಆದರೆ, ಈ ಬಾರಿಯ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ಚೇತೇಶ್ವರ ಪೂಜಾರ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಮಾಡಿಲ್ಲ. ಇದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ತರಿಸಿತ್ತು. ಇದೀಗ ಚೇತೇಶ್ವರ ಪೂಜಾರ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ವರದಿಗಳ ಪ್ರಕಾರ, ನವಂಬರ್ 22 ರಿಂದ ಆರಂಭವಾಗಲಿರುವ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಚೇತಶ್ವರ್ ಪೂಜಾರ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕ್ರಿಕೆಟ್ ವಿವರಣೆಗಾರನಾಗಿ ಚೇತೇಶ್ವರ ಪೂಜಾರ ಎಲ್ಲರ ಗಮನ ಸೆಳೆಯಲು ಸಿದ್ಧರಾಗಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಪೂಜಾರ ಅದ್ಭುತ ದಾಖಲೆಗಳನ್ನು ಹೊಂದಿದ್ದಾರೆ. ಟೀಮ್ ಇಂಡಿಯಾ ಪರ ಹಲವು ಬಿಗ್ ಇನ್ನಿಂಗ್ಸ್ ಆಡುವ ಮೂಲಕ ಗೆಲುವಿನ ಹೀರೋ ಆಗಿ ಮಿಂಚಿದ್ದಾರೆ. ಈಗ ಚೇತೇಶ್ವರ ಪೂಜಾರ ಅವರನ್ನು ಹೊಸ ಪಾತ್ರದಲ್ಲಿ ನೋಡಲು ಕ್ರಿಕೆಟ್ ಅಭಿಮಾನಿಗಳು ಕಾತುರ ಕಾಯುತ್ತಿದ್ದಾರೆ.
ಪೂಜಾರ ಇನ್ನಿಂಗ್ಸ್
ಆಸ್ಟ್ರೇಲಿಯಾದಲ್ಲಿ ನಡೆದ 2018-19ರ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಚೇತೇಶ್ವರ ಪೂಜಾರ ಭರ್ಜರಿ ಪ್ರದರ್ಶನ ನೀಡಿದ್ದರು. ಅವರು ಆಡಿದ 7 ಇನ್ನಿಂಗ್ಸ್‌ಗಳಲ್ಲಿ 74.42 ಸರಾಸರಿಯಲ್ಲಿ 521 ರನ್ ಗಳಿಸಿದ್ದರು. ಇದರಲ್ಲಿ 3 ಶತಕ ಮತ್ತು 1 ಅರ್ಧಶತಕಗಳು ಸೇರಿವೆ. ಈ ಅದ್ಭುತ ಪ್ರದರ್ಶನಕ್ಕಾಗಿ ಅವರು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿದ್ದರು. ಇದರೊಂದಿಗೆ ಆಸ್ಟ್ರೇಲಿಯಾ ನೆಲದಲ್ಲಿ ಭಾರತ ತಂಡ ತನ್ನ ಮೊದಲ ಸರಣಿ ಜಯ ಸಾಧಿಸಿತ್ತು. ಇದುವರೆಗೆ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಪೂಜಾರ 11 ಪಂದ್ಯಗಳಲ್ಲಿ 3 ಶತಕ ಮತ್ತು 5 ಅರ್ಧಶತಕಗಳನ್ನು ಒಳಗೊಂಡಂತೆ 993 ರನ್ ಕಲೆ ಹಾಕಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications