ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಾನು ಎದುರಿಸಿದ ಕಠಿಣ ಬೌಲರ್ ಯಾರೆಂದು ತಿಳಿಸಿದ ಚೇತೇಶ್ವರ ಪೂಜಾರ

Cheteshwar Pujara Reveals Pat Cummins Is The Toughest Bowler I Have Faced In International Cricket

2023ರ ಫೆಬ್ರವರಿಯಲ್ಲಿ ಭಾರತ ತಂಡ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗಾಗಿ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಆತಿಥ್ಯ ವಹಿಸಲಿದೆ. ಫೆಬ್ರವರಿ 9ರಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಇದು ರೋಹಿತ್ ಶರ್ಮಾ ನಾಯಕತ್ವ ಭಾರತ ತಂಡಕ್ಕೆ ಈ ಟೆಸ್ಟ್ ಸರಣಿಯು ಅತ್ಯಂತ ನಿರ್ಣಾಯಕವಾಗಿದೆ.

ಇದೇ ವೇಳೆ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಅವರು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು ತಾವು ಎದುರಿಸಿದ ಅತ್ಯಂತ ಕಠಿಣ ಬೌಲರ್ ಎಂದು ಬಹಿರಂಗಪಡಿಸಿದ್ದಾರೆ.

ಆಸೀಸ್ ವಿರುದ್ಧ ಟೆಸ್ಟ್ ಸರಣಿಗೂ ಮುನ್ನ ರಣಜಿ ಟ್ರೋಫಿ ಆಡಲೇಬೇಕಾದ ನಾಲ್ವರು ಪ್ರಮುಖ ಆಟಗಾರರುಆಸೀಸ್ ವಿರುದ್ಧ ಟೆಸ್ಟ್ ಸರಣಿಗೂ ಮುನ್ನ ರಣಜಿ ಟ್ರೋಫಿ ಆಡಲೇಬೇಕಾದ ನಾಲ್ವರು ಪ್ರಮುಖ ಆಟಗಾರರು

34 ವರ್ಷದ ಬಲಗೈ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಅವರು ಪ್ಯಾಟ್ ಕಮ್ಮಿನ್ಸ್ ಅವರನ್ನು ಶ್ಲಾಘಿಸಿದರು. ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ಆಡುವಾಗ ಪ್ಯಾಟ್ ಕಮ್ಮಿನ್ಸ್ ಅತ್ಯಂತ ಅಪಾಯಕಾರಿ ಬೌಲರ್ ಎಂದು ತಿಳಿಸಿದರು.

ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಅವರನ್ನು ಆಯ್ಕೆ ಮಾಡಿಕೊಳ್ಳುತ್ತೇನೆ

ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಅವರನ್ನು ಆಯ್ಕೆ ಮಾಡಿಕೊಳ್ಳುತ್ತೇನೆ

2023ರ ಫೆಬ್ರವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆಡುವಾಗ ಈ ಇಬ್ಬರು ಕ್ರಿಕೆಟಿಗರು ಪರಸ್ಪರ ಮುಖಾಮುಖಿಯಾಗಲಿದ್ದಾರೆ. ಇನ್ನು ಇದೇ ವೇಳೆ ಚೇತೇಶ್ವರ ಪೂಜಾರ ಅವರು ಎದುರಿಸಲು ಬಯಸಿದ್ದ ಹಿಂದಿನ ಬೌಲರ್ ಬಗ್ಗೆ ಕೇಳಲಾಯಿತು, ಆಗ ಅವರ ಉತ್ತರ ಆಸ್ಟ್ರೇಲಿಯಾದ ಮಾಜಿ ಬೌಲರ್ ಗ್ಲೆನ್ ಮೆಕ್‌ಗ್ರಾತ್ ಎಂಬುದಾಗಿತ್ತು.

"ನಾನು ಎದುರಿಸಿದ ಕಠಿಣ ಬೌಲರ್‌ಗಳಲ್ಲಿ ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಅವರನ್ನು ಆಯ್ಕೆ ಮಾಡಿಕೊಳ್ಳುತ್ತೇನೆ," ಎಂದು ಚೇತೇಶ್ವರ್ ಪೂಜಾರ ಅವರು ಇಎಸ್‌ಪಿಎನ್ ಕ್ರಿಕ್ಇನ್ಫೋಗೆ ತಿಳಿಸಿದರು.

ಸೌರಾಷ್ಟ್ರ ತಂಡದ ಪರ ಆಡುತ್ತಿರುವ ಚೇತೇಶ್ವರ ಪೂಜಾರ

ಸೌರಾಷ್ಟ್ರ ತಂಡದ ಪರ ಆಡುತ್ತಿರುವ ಚೇತೇಶ್ವರ ಪೂಜಾರ

ಪ್ರಸ್ತುತ ಸೌರಾಷ್ಟ್ರ ತಂಡದ ಪರ ದೇಶೀಯ ಟೂರ್ನಿಯಲ್ಲಿ ಆಡುತ್ತಿರುವ ಚೇತೇಶ್ವರ ಪೂಜಾರ ಅವರು ವೆಸ್ಟ್ ಇಂಡೀಸ್ ಲೆಜೆಂಡ್ ಕ್ರಿಕೆಟಿಗ ಬ್ರಿಯಾನ್ ಲಾರಾ ಅವರನ್ನು ಅತ್ಯುತ್ತಮ ಬ್ಯಾಟ್ಸ್‌ಮನ್ ಆಗಿ ಆಯ್ಕೆ ಮಾಡಿದ್ದಾರೆ. ಅವರೊಂದಿಗೆ ಕನಸಿನ ತಂಡದಲ್ಲಿ ಪಾಲುದಾರರಾಗಲು ಬಯಸುತ್ತೇನೆ. ಇಬ್ಬರೂ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್)ನಲ್ಲಿದ್ದರೂ, ಒಂದೇ ಬಾರಿಗೆ, ಒಂದೇ ತಂಡದಲ್ಲಿ ಕಾಣಿಸಿಕೊಳ್ಳಲಿಲ್ಲ ಎಂದು ಚೇತೇಶ್ವರ ಪೂಜಾರ ವಿವರಿಸಿದರು.

ಕ್ರಿಕೆಟ್‌ನ ಟೆಸ್ಟ್ ಸ್ವರೂಪದಲ್ಲಿ ತಮ್ಮ ಅತ್ಯಂತ ಸ್ಮರಣೀಯ ಇನ್ನಿಂಗ್ಸ್‌ನ ಬಗ್ಗೆ ಕೇಳಿದಾಗ, 2017ರಲ್ಲಿ ಬೆಂಗಳೂರಿನಲ್ಲಿ ಆಸ್ಟ್ರೇಲಿಯ ವಿರುದ್ಧ 92 ರನ್ ಗಳಿಸಿದ್ದು ಎಂದು ಹೇಳಿದ ಚೇತೇಶ್ವರ ಪೂಜಾರ, ಅದನ್ನು ಹೇಳುವ ಮುನ್ನ ಯೋಚಿಸಲು ಸ್ವಲ್ಪ ಸಮಯ ತೆಗೆದುಕೊಂಡರು.

2019ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಚೇತೇಶ್ವರ ಕೊನೆಯ ಶತಕ

2019ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಚೇತೇಶ್ವರ ಕೊನೆಯ ಶತಕ

ಚೇತೇಶ್ವರ ಪೂಜಾರ ಭಾರತ ಟೆಸ್ಟ್ ತಂಡದಲ್ಲಿ ಸ್ವಲ್ಪ ದಿನಗಳ ಕಾಲ ಬ್ಯಾಟಿಂಗ್ ಫಾರ್ಮ್ ಕಳೆದುಕೊಂಡಾಗ, ಸಸ್ಸೆಕ್ಸ್ ತಂಡದ ಪರ ಇಂಗ್ಲಿಷ್ ಕೌಂಟಿ ಋತುವಿನಲ್ಲಿ ಆಡಿ ಅದ್ಭುತ ಫಾರ್ಮ್‌ಗೆ ಮರಳಿದರು.

ತದನಂತರ, ಚೇತೇಶ್ವರ ಪೂಜಾರ ತನ್ನ ಅದ್ಭುತ ಫಾರ್ಮ್‌ನಿಂದ ಎಲ್ಲರ ಗಮನ ಸೆಳೆದರು ಮತ್ತು ಅನುಭವಿ ಬ್ಯಾಟ್ಸ್‌ಮನ್ ಬಾಂಗ್ಲಾದೇಶದ ವಿರುದ್ಧ ನಾಲ್ಕು ವರ್ಷಗಳ ನಂತರ ತಮ್ಮ ಮೊದಲ ಟೆಸ್ಟ್ ಶತಕವನ್ನು ಗಳಿಸಿದರು. 2019ರ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಅವರ ಕೊನೆಯ ಶತಕ ಬಂದಿತ್ತು.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಕೋಷ್ಟಕದಲ್ಲಿ ಭಾರತ 2ನೇ ಸ್ಥಾನದಲ್ಲಿ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಕೋಷ್ಟಕದಲ್ಲಿ ಭಾರತ 2ನೇ ಸ್ಥಾನದಲ್ಲಿ

2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್‌ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಲು ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್‌ ಪಂದ್ಯಗಳಲ್ಲಿ 3-0 ಅಥವಾ 3-1 ಅಂತರದಲ್ಲಿ ಗೆಲ್ಲಬೇಕಾಗಿದೆ.

ಭಾರತ ಟೆಸ್ಟ್ ತಂಡವು ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಕೋಷ್ಟಕದಲ್ಲಿ 68.9 ಗೆಲುವಿನ ಶೇಕಡಾವಾರು ಮತ್ತು 14 ಟೆಸ್ಟ್‌ ಪಂದ್ಯಗಳಿಂದ ಎಂಟು ಗೆಲುವುಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ.

Story first published: Monday, January 23, 2023, 13:55 [IST]
Other articles published on Jan 23, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X