ಹೀಗಿರಲಿದೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಧರಿಸುವ ಜೆರ್ಸಿ

ಸದ್ಯ ದೇಶದ ಕ್ರೀಡಾಭಿಮಾನಿಗಳ ಚಿತ್ತ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದತ್ತ ನೆಟ್ಟಿದೆ. ಜೂನ್ 18ರಿಂದ 22ರವರೆಗೆ ನಡೆಯಲಿರುವ ಈ ಮಹತ್ವದ ಪಂದ್ಯದಲ್ಲಿ ಜಯಗಳಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲು ಎರಡೂ ತಂಡಗಳು ತವಕದಲ್ಲಿವೆ.
ಕೊಹ್ಲಿ, ವಿಲಿಯಮ್ಸನ್ ಇಬ್ಬರಲ್ಲಿ ಅತ್ಯುತ್ತಮ ಟೆಸ್ಟ್ ಆಟಗಾರ ಯಾರು ಗೊತ್ತಾ? ಅಂಕಿಅಂಶಗಳು ಹೇಳಿದ್ದಿಷ್ಟು
ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲು ಪ್ರಕಟವಾಗಿರುವ ಟೀಮ್ ಇಂಡಿಯಾ ತಂಡ ಸದ್ಯ ಮುಂಬೈನಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದು ಜೂನ್ 3ರಂದು ಚಾರ್ಟರ್ಡ್ ವಿಮಾನದಲ್ಲಿ ಇಂಗ್ಲೆಂಡ್ ತಲುಪಲಿದೆ. ಈ ನಡುವೆ ಟೀಮ್ ಇಂಡಿಯಾ ಯಾವ ರೀತಿಯ ಜೆರ್ಸಿ ತೊಟ್ಟು ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನಾಡಲಿದೆ ಎಂಬುದರ ಕುರಿತು ಸಾಮಾಜಿಕ ಜಾಲ ತಾಣದಲ್ಲಿ ಚರ್ಚೆಗಳು ನಡೆಯುತ್ತಿವೆ.

ಇತ್ತಿಚೆಗಷ್ಟೇ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಂ ಖಾತೆಯಲ್ಲಿಯೂ ಸಹ ಅಭಿಮಾನಿಯೊಬ್ಬರು ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯಕ್ಕೆ ಟೀಮ್ ಇಂಡಿಯಾ ಯಾವ ರೀತಿಯ ಜೆರ್ಸಿಯನ್ನು ಧರಿಸಲಿದೆ ಎಂದು ಪ್ರಶ್ನೆಯನ್ನು ಕೇಳಿದ್ದರು. ಹೀಗೆ ಜೆರ್ಸಿ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಚೇತೇಶ್ವರ್ ಪೂಜಾರ ತಮ್ಮ ಇನ್ ಸ್ಟಾಗ್ರಾಂ ಖಾತೆಯ ಸ್ಟೋರಿಯ ಮೂಲಕ ಉತ್ತರವನ್ನು ನೀಡಿದ್ದಾರೆ. ಹೌದು ಪೂಜಾರ ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಆಟಗಾರರು ಧರಿಸಲಿರುವ ಜೆರ್ಸಿಯ ಮೊದಲ ನೋಟವನ್ನು ಹಂಚಿಕೊಂಡಿದ್ದಾರೆ. ಪೂಜಾರ ಹಂಚಿಕೊಂಡಿರುವ ಚಿತ್ರದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ವಿಶೇಷ ಜರ್ಸಿಯನ್ನು ತೊಟ್ಟಿರುವುದು ಇದೀಗ ವೈರಲ್ ಆಗಿದೆ.
Story first published: Sunday, May 30, 2021, 15:06 [IST]
Other articles published on May 30, 2021
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications