Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Adelaide Test: ರೋಹಿತ್ ಶರ್ಮಾ ನಂಬರ್-3ರಲ್ಲಿ ಆಡಲಿ; ಪೂಜಾರ ಸಲಹೆ

ಅಡಿಲೇಡ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಹಗಲು-ರಾತ್ರಿ ಟೆಸ್ಟ್ ಪಂದ್ಯವನ್ನಾಡಲು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಜ್ಜಾಗಿದ್ದಾರೆ. ಎರಡನೇ ಮಗುವಿನ ಜನನದ ಕಾರಣ ಭಾರತದಲ್ಲಿದ್ದ ರೋಹಿತ್ ಶರ್ಮಾ ಪರ್ತ್ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು. ಆದರೂ ಟೀಮ್ ಇಂಡಿಯಾ ಜಸ್ಪ್ರೀತ್ ಬುಮ್ರಾ ನಾಯಕತ್ವದಲ್ಲಿ ಪರ್ತ್ ಟೆಸ್ಟ್ ಪಂದ್ಯವನ್ನು ಭಾರೀ ಅಂತರದಲ್ಲಿ ಗೆದ್ದು ಬೀಗಿತ್ತು. ಇದೀಗ ರೋಹಿತ್ ಶರ್ಮಾ ಟೀಮ್ ಇಂಡಿಯಾ ಸೇರಿದ ನಂತರ ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ.

ಪರ್ತ್ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಯುವ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮತ್ತು ಅನುಭವಿ ಕೆಎಲ್ ರಾಹುಲ್ ಇನ್ನಿಂಗ್ಸ್ ತೆರೆದಿದ್ದರು. ಪರ್ತ್‌ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಈ ಜೋಡಿ ಅದ್ಭುತ ಸೃಷ್ಟಿಸಲು ಸಾಧ್ಯವಾಗಿರಲಿಲ್ಲ. ಇದಾದ ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ ದಾಖಲೆಯ ಜೊತೆ ಆಟವಾಡುವ ಮೂಲಕ ಆಸೀಸ್‌ ಬೌಲರ್‌ಗಳಿಗೆ ಬೆವರಿಳಿಸಿದ್ದರು. ಜೈಸ್ವಾಲ್ 161 ಮತ್ತು ರಾಹುಲ್ 77 ರನ್ ಗಳಿಸಿ ಭಾರತಕ್ಕೆ ಭದ್ರ ಬುನಾದಿ ಹಾಕಿದ್ದರು. ಇಂತಹ ಸಂದರ್ಭದಲ್ಲಿ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಆಗಮನವಾಗಿರುವುದು ಆರಂಭಿಕ ಜೋಡಿ ಬದಲಾವಣೆ ಆಗುತ್ತಾ ಎಂಬ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿದೆ. ಆದರೆ ಟೀಮ್ ಇಂಡಿಯಾ ಆರಂಭಿಕ ಬ್ಯಾಟರ್ ಚೇತೇಶ್ವರ ಪೂಜಾರ ಅವರು ರೋಹಿತ್ ಶರ್ಮಾ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

Cheteshwar Pujara Suggests Rohit Sharma Bat at Number 3 in Adelaide Test Against Australia

ಚೇತೇಶ್ವರ ಪೂಜಾರ ಹೇಳಿದ್ದೇನು?

ರೋಹಿತ್ ಶರ್ಮಾ ಆಗಮನದಿಂದ ರಾಹುಲ್ ಅವರು ಮತ್ತೆ ಮಧ್ಯಮ ಕ್ರಮಾಂಕದಲ್ಲಿ ಆಡಬೇಕಾದ ಪರಿಸ್ಥಿತಿ ಎದುರಾಗಬಹುದು. ಆದರೆ ರಾಹುಲ್ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಆಡಿಸಬಾರದು ಎಂದು ಪೂಜಾರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ' ಆಡಿಲೇಡ್ ಟೆಸ್ಟ್ ಪಂದ್ಯದಲ್ಲಿ ನಾವು ಈಗ ಇರುವ ಆರಂಭಿಕ ಜೋಡಿಯೊಂದಿಗೆ ಮುಂದುವರೆಯಬೇಕು. ರೋಹಿತ್ ಶರ್ಮಾ ಮೂರನೇ ಕ್ರಮಾಂಕದಲ್ಲಿ ಕಣಕ್ಕೀಳಿಯಬೇಕು. ಹಾಗೆಯೇ ಶುಭಮನ್ ಗಿಲ್ ಆಡಿಲೇಟ್ ಟೆಸ್ಟ್‌ ಪಂದ್ಯದಲ್ಲಿ ಆಡಿದರೆ, ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕು ಎಂದು ತಿಳಿಸಿದ್ದಾರೆ.

ಒಂದು ವೇಳೆ ರೋಹಿತ್ ಶರ್ಮಾ ಆರಂಭಿಕನಾಗಿ ಇನ್ನಿಂಗ್ಸ್ ತೆರೆದರೆ, ರಾಹುಲ್ ಮೂರನೇ ಕ್ರಮಾಂಕದಲ್ಲಿ ಆಡಬೇಕು. ಅದಕ್ಕಿಂತ ಕೆಳ ಕ್ರಮಾಂಕದಲ್ಲಿ ಆಡಬಾರದು. ರಾಹುಲ್ ಆಗ್ರ ಕ್ರಮಾಂಕದ ಬ್ಯಾಟರ್ ಆಗಿದ್ದು, ಅವರ ಆಟದ ಶೈಲಿಗೆ ಅದು ಹೊಂದಾಣಿಕೆ ಆಗುತ್ತದೆ. ಹೀಗಾಗಿ ಟೀಮ್ ಇಂಡಿಯಾ ಹೆಚ್ಚಿನ ಪ್ರಯೋಗ ಮಾಡುವುದಿಲ್ಲ ಎಂದು ಭಾವಿಸಿದ್ದೇನೆ. ಮತ್ತೊಂದೆಡೆ ಶುಭಮನ್ ಗಿಲ್ ಅವರಿಗೆ ಐದನೇ ಕ್ರಮಾಂಕ ಸೂಕ್ತವೆನಿಸಲಿದೆ. ಒಂದು ವೇಳೆ ಮೊದಲೆರಡು ವಿಕೆಟ್‌ಗಳನ್ನು ಕಳೆದುಕೊಂಡರು ಹೊಸ ಚೆಂಡನ್ನು ಸಮರ್ಥವಾಗಿ ಗಿಲ್ ಎದುರಿಸಬಲ್ಲರು ಎಂದು ಚೇತೇಶ್ವರ ಪೂಜಾರ ಹೇಳಿದ್ದಾರೆ.

Story first published: Friday, November 29, 2024, 21:00 [IST]
Other articles published on Nov 29, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+