ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ ನಿರ್ಣಾಯಕ ಪಂದ್ಯದ ಆತಿಥ್ಯವಹಿಸಿದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ದಂಡ

ಭಾರತ,ಆಸ್ಟ್ರೇಲಿಯಾ ಪಂದ್ಯದ ಆತಿಥ್ಯ ವಹಿಸಿದ್ದ ಚಿನ್ನಸ್ವಾಮಿ ಸ್ಟೇಡಿಯಂಗೆ BBMP ಯಿಂದ ಬಿತ್ತು ದಂಡ | BBMP | plastic
Chinnaswamy Stadium Fined Rs5000 For Using Plastics

ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ನಿರ್ಣಾಯಕ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವನ್ನು ವಹಿಸಿತ್ತು. ಮೂರನೇ ಹಾಗೂ ಅಂತಿಮ ಪಂದ್ಯವನ್ನು ಟೀಮ್ ಇಂಡಿಯಾ ಗೆಲ್ಲುವ ಮೂಲಕ ಸರಣಿ ಗೆಲುವಿಗೆ ಚಿನ್ನಸ್ವಾಮಿ ಕ್ರೀಡಾಂಗಣ ಸಾಕ್ಷಿಯಾಗಿತ್ತು. ಆ ಮಹತ್ವದ ಪಂದ್ಯದ ಆತಿಥ್ಯ ವಹಿಸಿದ ಚಿನ್ನಸ್ವಾಮಿ ಕ್ರೀಡಾಂಗಣ ದಂಡಕ್ಕೆ ಗುರಿಯಾಗಿದೆ.

ಕ್ರೀಡಾಂಗಣದಲ್ಲಿ ಪ್ಲಾಸ್ಟಿಕ್ ಬಳಸಿರುವುದು ಚಿನ್ನಸ್ವಾಮಿ ಕ್ರೀಡಾಂಗಣ ದಂಡಕ್ಕೆ ಗುರಿಯಾಗಲು ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 50000 ದಂಡವನ್ನು ವಿಧಿಸಲಾಗಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಉಪ ಆರೋಗ್ಯಾಧಿಕಾರಿಗಳ ಕಛೇರಿಯಿಂದ ಈ ಬಗ್ಗೆ ನೋಟಿಸ್ ಕಳುಹಿಸಿ ದಂಡ ತೆರಲು ಸೂಚಿಸಲಾಗಿದೆ.

ಕೀವಿಸ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ದೌರ್ಬಲ್ಯ ಬಹಿರಂಗ ಪಡಿಸಿದ ವಿರಾಟ್ ಕೊಹ್ಲಿ!ಕೀವಿಸ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ದೌರ್ಬಲ್ಯ ಬಹಿರಂಗ ಪಡಿಸಿದ ವಿರಾಟ್ ಕೊಹ್ಲಿ!

ಇದೇ ಭಾನುವಾರ ನಡೆದ ಪಂದ್ಯದ ಸಂದರ್ಭದಲ್ಲಿ ಪಂದ್ಯ ನಡೆಯುವಾಗ ಉಪ ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಪ್ಲಾಸ್ಟಿಕ್ ಕಪ್‌ಗಳನ್ನು ಬಳಸಿರುವುದು, ಫ್ಲೆಕ್ಸ್ ಬ್ಯಾನರ್‌ಗಳನ್ನು ಬಳಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ದಂಡವನ್ನು ವಿಧಿಸಲಾಗಿದೆ ಎಂದು ಈ ನೋಟಿಸ್ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ನಿಷೇಧಿತ ಪ್ಲಾಸ್ಟಿಕ್‌ಗಳನ್ನು ಸ್ಟೇಡಿಯಮ್‌ನ ಫುಡ್‌ ಸ್ಟಾಲ್‌ಗಳಲ್ಲಿ ಬಳಕೆಯಾಗಿದ್ದು ಕಂಡು ಬಂದ ಹಿನ್ನೆಲೆಯಲ್ಲಿ ಇವೆಂಟ್ ವೇಸ್ಟ್ ಮ್ಯಾನೇಜ್‌ಮೆಂಟ್ ಅಧಿಸೂಚನೆ ಪ್ರಕಾರ 50 ಸಾವಿರ ದಂಡ ವಿಧಿಸಲಾಗಿದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ವಿರಾಟ್‌ ಕೊಹ್ಲಿ or ಸ್ಟೀವ್ ಸ್ಮಿತ್?: ಇಂಗ್ಲೆಂಡ್‌ ಕ್ರಿಕೆಟಿಗ ಆರಿಸಿದ್ದು ಇವರನ್ನ!ವಿರಾಟ್‌ ಕೊಹ್ಲಿ or ಸ್ಟೀವ್ ಸ್ಮಿತ್?: ಇಂಗ್ಲೆಂಡ್‌ ಕ್ರಿಕೆಟಿಗ ಆರಿಸಿದ್ದು ಇವರನ್ನ!

ಭಾರತ ಆಸ್ಟ್ರೇಲಿಯಾ ನಡುವಿನ ಬೆಂಗಳೂರಿನಲ್ಲಿ ನಡೆದ ಅಂತಿಮ ಪಂದ್ಯ ಎರಡೂ ತಂಡಗಳಿಗೂ ಸರಣಿ ಗೆಲುವಿಗೆ ಅನಿವಾರ್ಯವಾಗಿತ್ತು. 1-1 ರಿಂದ ಸಮಬಲಗೊಂಡಿದ್ದ ಪಂದ್ಯವನ್ನು ಟೀಮ್ ಇಂಡಿಯಾ ಈ ನಿರ್ಣಾಯಕ ಪಂದ್ಯವನ್ನು ಭರ್ಜರಿಯಾಗಿ ಗೆಲ್ಲುವ ಮೂಲಕ ಸರಣಿಯನ್ನು ತನ್ನ ವಶಕ್ಕೆ ಪಡೆದುಕೊಂಡಿತ್ತು.

Story first published: Tuesday, January 21, 2020, 12:43 [IST]
Other articles published on Jan 21, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X