ಭಾರತದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ, ಅಭಿಷೇಕ್ ಆಟಕ್ಕೆ 'ಯೂನಿವರ್ಸ್ ಬಾಸ್' ಫಿದಾ
ಟಿ20 ಕ್ರಿಕೆಟ್ ಬ್ಯಾಟಿಂಗ್‌ನಲ್ಲಿ ತನ್ನದೇ ಆದ ಛಾಪು ಮೂಡಿಸಿದ ಆಟಗಾರ 'ಯೂನಿವರ್ಸ್ ಬಾಸ್' ಕ್ರಿಸ್ ಗೇಲ್. ಚುಟುಕು ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಗೇಲ್, ಭಾರತದ ಭವಿಷ್ಯದ ಬ್ಯಾಟರ್‌ಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ. 15 ವರ್ಷದ ವೈಭವ್ ಸೂರ್ಯವಂಶಿ ಮತ್ತು ಟಿ20 ವಿಶ್ವಕಪ್ ವಿಜೇತ ಆಟಗಾರ ಅಭಿಷೇಕ್ ಶರ್ಮಾ ಅವರನ್ನು ಆಟವನ್ನು ಶ್ಲಾಘಿಸಿದ್ದಾರೆ. ಈ ಇಬ್ಬರು ಆಟಗಾರರು ಕ್ರಿಕೆಟ್ ಆಟವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲಿದ್ದಾರೆ ಎಂದು ಗೇಲ್ ಅಭಿಪ್ರಾಯಪಟ್ಟಿದ್ದಾರೆ.
ಕ್ರಿಸ್ ಗೇಲ್ ಅವರು ವೈಭವ್ ಸೂರ್ಯವಂಶಿ ಆಟಕ್ಕೆ ಮನಸೋತಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಅಮೋಘವಾಗಿ ಆಡಿದ್ದಾರೆ. ಅಲ್ಲದೆ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆ ಇವರದ್ದಾಗಿದೆ. ಅಲ್ಲದೆ ಈ ಬಾರಿಯ ಐಪಿಎಲ್‌ನಲ್ಲಿ ಯುವ ಆಟಗಾರನ ಬಗ್ಗೆ ಹೆಚ್ಚು ಚರ್ಚೆಗಳು ನಡೆದಿವೆ. ಇವರು 19ನೇ ಆವೃತ್ತಿಯಲ್ಲಿ ಆಡಿದ 16 ಪಂದ್ಯಗಳಲ್ಲಿ 776 ರನ್ ಸಿಡಿಸಿದ್ದಾರೆ.

ಭಾರತದಲ್ಲಿ ಪ್ರತಿಭಾನ್ವಿತ ಬ್ಯಾಟರ್‌ಗಳ ದಂಡೇ ಇದೆ. ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ಆಡಿದ ಧಾಟಿ ನಿಜಕ್ಕೂ ಶ್ಲಾಘನೀಯ. ಇವರು ಈ ಆವೃತ್ತಿಯಲ್ಲಿ ಸ್ಥಿರ ಪ್ರದರ್ಶನ ನೀಡಿ ಹಲವು ದಾಖಲೆಗಳನ್ನು ಬರೆದಿದ್ದಾರೆ ಎಂದು ಕ್ರಿಸ್ ಗೇಲ್ ತಿಳಿಸಿದ್ದಾರೆ.
ಗ್ರೇಟರ್ ನೋಯ್ಡಾದ ಶಹೀದ್ ವಿಜಯ್ ಸಿಂಗ್ ಪಥಿಕ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 'ಬಿಗ್ ಕ್ರಿಕೆಟ್ ಲೀಗ್ ಸೀಸನ್ 2' ರ ವೇಳೆ ಮಾಧ್ಯಮದೊಂದಿಗೆ ಮಾತನಾಡಿದರು. ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್‌ಗೆ ವಿಶ್ವ ಮನಸೋತಿದೆ. ಇವರು ಅಂಡರ್ 19 ವಿಶ್ವಕಪ್ ಹಾಗೂ ಐಪಿಎಲ್‌ನಲ್ಲಿ ಆಡಿದ ರೀತಿ ಅಮೋಘವಾಗಿದೆ. ಇವರನ್ನು ಟೀಮ್ ಇಂಡಿಯಾ ಜೆರ್ಸಿಯಲ್ಲಿ ಇದೇ ರೀತಿ ಆಟ ಆಡುವುದುನ್ನು ನೋಡಲು ಉತ್ಸುಕನಾಗಿದ್ದಾಗಿ ಗೇಲ್ ತಿಳಿಸಿದ್ದಾರೆ.
ಅಭಿಷೇಕ್ ಶರ್ಮಾ ಆಟಕ್ಕೆ ಮೆಚ್ಚುಗೆ
ಇನ್ನು ಟೀಮ್ ಇಂಡಿಯಾದ ಇನ್ನೋರ್ವ ಎಡಗೈ ಆಟಗಾರ ಅಭಿಷೇಕ್ ಶರ್ಮಾ ಅವರ ಬಗ್ಗೆಯೂ ಕ್ರಿಸ್ ಗೇಲ್ ಮಾತನಾಡಿದ್ದಾರೆ. ಅಭಿಷೇಕ್ ಶರ್ಮಾ ಅವರಂತಹ ಅದ್ಭುತ ಆಟಗಾರ ನಮ್ಮ ಮುಂದಿದ್ದಾನೆ. ಭಾರತದಲ್ಲಿ ಪ್ರತಿಭೆಗಳ ಪಟ್ಟಿ ದೊಡ್ಡದಿದೆ. ಇದರಿಂದಾಗಿ ಭಾರತೀಯ ಆಯ್ಕೆಗಾರರಿಗೆ ಸೂಕ್ತ ತಂಡವನ್ನು ಆಯ್ಕೆ ಮಾಡುವುದು ದೊಡ್ಡ ತಲೆನೋವಾಗಲಿದೆ ಎಂದು ಗೇಲ್ ಅಭಿಪ್ರಾಯ ಪಟ್ಟಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications