ಸಿಡ್ನಿ ಟೆಸ್ಟ್‌ನಲ್ಲಿ ವಾರ್ನರ್ ಕಣಕ್ಕಿಳಿಯುವ ಬಗ್ಗೆ ಸುಳಿವುಕೊಟ್ಟ ಆಸಿಸ್ ಕೋಚ್

ಏಕದಿನ ಸರಣಿಯ ಸಂದರ್ಭದಲ್ಲಿ ಗಾಯಗೊಂಡಿದ್ದ ಡೇವಿಡ್ ವಾರ್ನರ್ ಬಳಿಕ ತಂಡದಿಂದ ಹೊರಬಿದ್ದಿದ್ದರು. ಸದ್ಯ ಆಸಿಸ್ ಅನುಭವಿ ಆಟಗಾರ ಚೇತರಿಕೆಯನ್ನು ಕಂಡಿದ್ದು ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಬಹುದು ಎಂಬ ನಿರೀಕ್ಷೆಯಿದೆ. ಈ ಬಗ್ಗೆ ಆಸ್ಟ್ರೇಲಿಯಾ ತಂಡದ ಕೋಚ್ ಜಸ್ಟಿನ್ ಲ್ಯಾಂಗರ್ ಹೇಳಿಕೆಯನ್ನು ನೀಡಿದ್ದಾರೆ.
"ಮೂರನೇ ಟೆಸ್ಟ್‌ನಲ್ಲಿ ಆಡಲು ಡೇವಿಡ್ ವಾರ್ನರ್ ಸಂಪೂರ್ಣವಾಗಿ ಸಿದ್ಧರಾಗುತ್ತದೆ ಎಂಬ ಬಗ್ಗೆ ಬಹಳ ಭರವಸೆಯಿದೆ. ಆತನೋರ್ವ ಯೋಧನಂತೆ. ಆರಂಭದಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ, ವಾರ್ನರ್ ಮೂರನೇ ಟೆಸ್ಟ್‌ನಲ್ಲಿ ಕಣಕ್ಕಿಳಿಯಲು ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ" ಎಂದು ಆಸ್ಟ್ರೇಲಿಯಾ ತಂಡದ ಕೋಚ್ ಜಸ್ಟಿನ್ ಲ್ಯಾಂಗರ್ ಅಭಿಪ್ರಾಯಪಟ್ಟಿದ್ದಾರೆ.
"ಡೇವಿಡ್ ವಾರ್ನರ್ ಸ್ಪರ್ಧೆಯನ್ನು ಇಷ್ಟಪಡುತ್ತಾರೆ. ಟೆಸ್ಟ್ ಕ್ರಿಕೆಟ್ ಆಡಲು ಅವರು ಹೆಚ್ಚು ಉತ್ಸುಕರಾಗಿದ್ದಾರೆ. ಮಂಗಳವಾರದ ಮಧ್ಯಾಹ್ನದ ಬಳಿಕ ತರಭೇತಿ ಶಿಬಿರದ ನಂತರ ಅವರತ್ತ ಮತ್ತೆ ಚಿತ್ತ ಹರಿಸಲಿದ್ದು ಚರ್ಚಿಸಲಿದ್ದೇವೆ. ಮುಂದಿನ ಪಂದ್ಯದಲ್ಲಿ ಅವರು ಕಣಕ್ಕಿಳಿಯುವ ಹೆಚ್ಚಿನ ಸಾಧ್ಯತೆಯಿದೆ" ಎಂದು ಜಸ್ಟಿನ್ ಲ್ಯಾಂಗರ್ ಹೇಳಿದ್ದಾರೆ.
"ಡೇವಿಡ್ ವಾರ್ನರ್ ಇತ್ತೀಚೆಗೆ ಸಾಕಷ್ಟು ವೈಟ್‌ಬಾಲ್ ಕ್ರಿಕೆಟ್‌ಅನ್ನು ಆಡಿದ್ದಾರೆ. ಆದರೆ ಸ್ಟೀವ್ ಸ್ಮಿತ್ ರೀತಿಯಲ್ಲಿ ಹೆಚ್ಚಿನ ಟೆಸ್ಟ್ ಪಂದ್ಯಗಳಲ್ಲಿ ಅವರು ಕಣಕ್ಕಿಳಿದಿಲ್ಲ. ಆದರೆ ಆಟದಲ್ಲಿ ಅವರೋರ್ವ ಚಾಣಾಕ್ಷ. ಆವರಲ್ಲಿನ ಅನುಭವ ಅವರಿಗೆ ಟೆಸ್ಟ್ ಪಂದ್ಯದಲ್ಲಿ ಸಹಾಯ ಮಾಡಲಿದೆ" ಎಂದು ಜಸ್ಟಿನ್ ಲ್ಯಾಂಗರ್ ಅಭಿಪ್ರಾಯಪಟ್ಟಿದ್ದಾರೆ.
ಆಸ್ಟ್ರೇಲಿಯಾ ಹಾಗೂ ಭಾರತ ಮೂರನೇ ಟೆಸ್ಟ್ ಪಂದ್ಯ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಜನವರಿ 7 ಗುರುವಾರದಿಂದ ಆರಂಭವಾಗಲಿದೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಹಾಗೂ ಟೀಮ್ ಇಂಡಿಯಾ ತಲಾ ಒಂದೊಂದು ಗೆಲುವನ್ನು ಸಾಧಿಸಿದ್ದು ಸರಣಿ 1-1ರಿಂದ ಸಮಬಲಗೊಂಡಿದೆ. ವಾರ್ನರ್ ಆಸಿಸ್ ಪಡೆಯನ್ನು ಸೇರಿಕೊಂಡರೆ ಬ್ಯಾಟಿಂಗ್ ವಿಭಾಗಕ್ಕೆ ದೊಡ್ಡ ಬಲ ದೊರೆತಂತಾಗುತ್ತದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications