For Quick Alerts
ALLOW NOTIFICATIONS  
For Daily Alerts
 

ಕಾಮನ್‌ವೆಲ್ತ್ ಗೇಮ್ಸ್: ಹರ್ಮನ್‌ಪ್ರೀತ್‌ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಪ್ರಕಟ

Commonwealth Games 2022: Harmanpreet Kaur led India women cricket squad announced

ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಈ ಬಾರಿ ಮಹಿಳಾ ಟಿ20 ಕ್ರಿಕೆಟ್ ಪಂದ್ಯವನ್ನು ಸೇರ್ಪಡೆಗೊಳಿಸಲಾಗಿದೆ. ಈ ಟೂರ್ನಿಯಲ್ಲಿ ಕಣಕ್ಕಿಳಿಯಲಿರುವ ಭಾರತ ಮಹಿಳಾ ತಂಡವನ್ನು ಆಯ್ಕೆ ಮಾಡಲಾಗಿದ್ದು ಹರ್ಮನ್‌ಪ್ರೀತ್ ಕೌರ್ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಉಪ ನಾಯಕಿಯಾಗಿ ನೇಮಕಗೊಂಡಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಕ್ರಿಕೆಟ್‌ಅನ್ನು ಸೇರ್ಪಡೆಗೊಳಿಸಲಾಗಿದ್ದು ಟಿ20 ಮಾದರಿಯಲ್ಲಿ ಪಂದ್ಯ ನಡೆಯಲಿದೆ. 1998ರಲ್ಲಿ ಕೌಲಲಾಂಪುರದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪುರುಷರ ಕ್ರಿಕೆಟ್‌ಅನ್ನು ಸೇರ್ಪಡೆಗೊಳಿಸಿ ಏಕದಿನ ಮಾದರಿಯಲ್ಲಿ ಆಡಿಸಲಾಗಿತ್ತು.

ಕಾಮನ್‌ವೆಲ್ತ್ ಗೇಮ್ಸ್‌ನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಎರಡು ಗುಂಪುಗಳನ್ನಾಗಿ ವಿಂಗಡಿಸಿ ಪಂದ್ಯವನ್ನು ಆಯೋಜಿಸಲಾಗುತ್ತದೆ. ಭಾರತ ತಂಡ ಎ ಗುಂಪಿನಲ್ಲಿದ್ದು ಆಸ್ಟ್ರೇಲಿಯಾ, ಬಾರ್ಬಡೋಸ್ ಮತ್ತು ಪಾಕಿಸ್ತಾನ ಈ ಗುಂಪಿನಲ್ಲಿರುವ ಇತರ ತಂಡಗಳಾಗಿದೆ. ಇನ್ನು ಬಿ ಗುಂಪಿನಲ್ಲಿ ಶ್ರೀಲಂಕಾ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇರಲಿದೆ. ಭಾರತ ಜುಲೈ 29ರಂದು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.

ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್ ಜುಲೈ 28ರಂದು ಆರಂಭವಾಗಲಿದ್ದು ಆಗಸ್ಟ್ 8ರಂದು ಅಂತ್ಯವಾಗಲಿದೆ. 72 ದೇಶಗಳ 4500 ಕ್ರೀಡಾಪಟುಗಳು ಈ 11 ದಿನಗಳ ಕಾಲ ನಡೆಯುವ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಭಾಗಿಯಾಗಲಿದ್ದಾರೆ. ಪುರುಷರಿಗಿಂತ ಹೆಚ್ಚು ಮಹಿಳಾ ವಿಭಾಗಕ್ಕೆ ಪದಕಗಳನ್ನು ಮೀಸಲಿಟ್ಟಿರುವ ವಿಶ್ವದ ಪ್ರಧಾನ ಕ್ರೀಡಾಕೂಟ ಎನಿಸಿಕೊಳ್ಳಲಿದೆ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್.

ಟೀಮ್ ಇಂಡಿಯಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಶಫಾಲಿ ವರ್ಮಾ, ಎಸ್. ಮೇಘನಾ, ತನಿಯಾ ಸಪ್ನಾ ಭಾಟಿಯಾ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಠಾಕೂರ್, ಜೆಮಿಮಾ ರಾಡ್ರಿಗಸ್, ರಾಧಾ ಯಾದವ್, ಹರ್ಲೀನ್ ಡಿಯೋಲ್, ಸ್ನೇಹ ರಾಣಾ.

ಅಡ್ಡ ಬಂದ ಇಂಗ್ಲೆಂಡ್ ಬೌಲರ್ ಗೆ ಹೊಡಿತೀನಿ ಎಂದ‌ ಪಂತ್ ಗೆ ರೋಹಿತ್ ಶರ್ಮಾ ಹೇಳಿದ್ದೇನು? | *Cricket | OneIndia

Story first published: Tuesday, July 12, 2022, 0:09 [IST]
Other articles published on Jul 12, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+