
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಇದೇ ಮೊದಲ ಬಾರಿಗೆ ಮಹಿಳಾ ಟಿ20 ಕ್ರಿಕೆಟ್‌ಗೆ ಅವಕಾಶ ದೊರೆತಿದ್ದು ಈ ಟೂರ್ನಿಯಲ್ಲಿ ಭಾಗವಹಿಸಲು ಭಾರತ ಮಹಿಳಾ ತಂಡ ತೆರಳಿದೆ. ಆದರೆ ಈ ಪ್ರತಿಷ್ಠಿತ ಟೂರ್ನಿಗೆ ತೆರಳುವ ಮುನ್ನವೇ ಭಾರತ ತಂಡಕ್ಕೆ ಆಘಾತವೊಂದು ಉಂಟಾಗಿದೆ. ಭಾರತ ಮಹಿಳಾ ಕ್ರಿಕೆಟ್ ತಂಡದ ಒಬ್ಬರು ಆಟಗಾರ್ತಿಯರಿಗೆ ಕೊರೊನಾವೈರಸ್ ದೃಢಪಟ್ಟಿದ್ದು ಆ ಇಬ್ಬರ ಆಟಗಾರ್ತಿಯರು ಭಾರತದಲ್ಲಿಯೇ ಐಸೊಲೇಶನ್‌ಗೆ ಒಳಗಾಗಿದ್ದಾರೆ ಎಂದು ಮಾಹಿತಿ ದೊರೆತಿದೆ.
ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿದ್ದು ಕಳೆದ ಭಾನುವಾರ ಭಾರತೀಯ ಮಹಿಳಾ ತಂಡ ಬರ್ಮಿಂಗ್‌ಹ್ಯಾಮ್‌ಗೆ ಪ್ರಯಾಣ ಬೆಳೆಸಿದೆ. ಆದರೆ ಪ್ರಯಾಣಕ್ಕೂ ಮುನ್ನ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಆಟಗಾರ್ತಿಯರು ಕೋವಿಡ್‌ಗೆ ತುತ್ತಾಗಿರುವುದು ದೃಢಪಟ್ಟಿದೆ. ಹೀಗಾಗಿ ಆ ಇಬ್ಬರು ಆಟಗಾರ್ತಿಯರನ್ನು ಹೊರತುಪಡಿಸಿ ಭಾರತೀಯ ಮಹಿಳಾ ತಂಡ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಿದೆ.
ಇನ್ನು ಕೊರೊನಾವೈರಸ್ ದೃಢಪಟ್ಟಿರುವ ಆಟಗಾರ್ತಿಯರು ಯಾರು ಎಂಬುದರ ಕುರಿತಾಗಿ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೆ ಅವರಿಗೆ ಬದಲಿ ಆಟಗಾರರನ್ನು ಕೂಡ ಘೋಷಣೆ ಮಾಡಿಲ್ಲ. ಹೀಗಾಗಿ ಮತ್ತೊಮ್ಮೆ ಕೋವುಡ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿ ಬಂದ ಬಳಿಕ ಮತ್ತೆ ಆ ಆಟಗಾರ್ತಿಯರು ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ.
ಕಾಮನ್‌ವೆಲ್ತ್ ಗೇಮ್ಸ್‌ಗೆ ಮಹಿಳಾ ಕ್ರಿಕೆಟ್ ಪದಾರ್ಪಣೆ: ಈ ಬಾರಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್ ಮೂಲಕ ಈ ಪ್ರತಿಷ್ಠಿತ ಕ್ರೀಡಾಕೂಟಕ್ಕೆ ಮಹಿಳಾ ಕ್ರಿಕೆಟ್ ಪದಾರ್ಪಣೆ ಮಾಡುತ್ತಿದೆ. ಇನ್ನು ಒಟ್ಟಾರೆಯಾಗಿ ಕ್ರಿಕೆಟ್ ಇದಕ್ಕೂ ಮುನ್ನ ಕೇವಲ ಒಂದು ಬಾರಿ ಮಾತ್ರವೇ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಾಣಿಸಿಕೊಂಡಿತ್ತು. 1998ರಲ್ಲಿ ಕೌಲಲಾಂಪುರದಲ್ಲಿ ನಡೆದಿದ್ದ ಕ್ರೀಡಾಕೂಟದಲ್ಲಿ ಪುರುಷರ ಏಕದಿನ ಮಾದರಿಯ ಹಣಾಹಣಿ ನಡೆದಿತ್ತು.
322 ಸದಸ್ಯರ ಬೃಹತ್ ಪಡೆಯನ್ನು ಐಒಸಿ ಹೆಸರಿಸಿದ್ದು ಇದರಲ್ಲಿ 21 ಅಥ್ಲೀಟ್‌ಗಳು ಹಾಗೂ 107 ಅಧಿಕಾರಿಗಳು ಹಾಗೂ ಸಹಾಯಕ ಸಿಬ್ಬಂದಿಗಳು ಸೇರಿದ್ದಾರೆ. ಇನ್ನು ಭಾರತೀಯ ಕ್ರೀಡಾಪಟುಗಳ ತಂಡ ಈ ಬಾರಿ ಕಳೆದ ಕಾಮನ್‌ವೆಲ್ತ್ ಗೇಮ್ಸ್‌ಗಿಂತ ಉತ್ತಮ ಸ್ಆಧನೆ ಮಾಡುವ ನಿರೀಕ್ಷೆ ಮೂಡಿಸಿದೆ. 2018ರಲ್ಲಿ ನಡೆದಿದ್ದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತೀಯ ಆಟಗಾರರ ತಂಡ ಒಟ್ಟು ಪದಕಗಳನ್ನು ಗೆದ್ದುಕೊಂಡಿತ್ತು. ಇದರಲ್ಲಿ 2 ಚಿನ್ನ 9 ಬೆಳ್ಳಿ ಹಾಗೂ 20 ಕಂಚಿನ ಪದಕಗಳು ಸೇರಿತ್ತು. ಇನ್ನು ಕಾಮನ್‌ವೆಲ್ತ್ ಗೇಮ್ಸ್‌ನ ಇತಿಹಾಸದಲ್ಲಿ ಭಾರತ 2010ರಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದ ಸಾಧನೆ ಮಾಡಿತ್ತು. 39 ಚಿನ್ನ, 26 ಬೆಳ್ಳಿ ಹಾಗೂ 36 ಕಂಚಿನ ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತ್ತು.
ಬರ್ಮಿಂಹ್‌ಗ್ಯಾಮ್‌ಗೆ ಬಂದಿಳಿದಿದೆ ಭಾರತ ತಂಡ: ಇನ್ನು ಭಾರತ ಮಹಿಳಾ ತಂಡದ ಆಟಗಾರ್ತಿಯರ ಪಡೆ ಈಗಾಗಲೇ ಬರ್ಮಿಂಗ್‌ಹ್ಯಾಮ್‌ಗೆ ಬಂದಿಳಿದಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಮುಂದಿನ ಭಾನುವಾರ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡದ ವಿರುದ್ಧ ಆಡಲಿದೆ. ಅದಾದ ಬಳಿಕ ಪಾಕಿಸ್ತಾನದ ವಿರುದ್ಧ ಜುಲೈ 31ರಂದು ಎರಡನೇ ಪಂದ್ಯವನ್ನಾಡಲಿದೆ.
ಟೀಮ್ ಇಂಡಿಯಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಶಫಾಲಿ ವರ್ಮಾ, ಎಸ್. ಮೇಘನಾ, ತನಿಯಾ ಸಪ್ನಾ ಭಾಟಿಯಾ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಠಾಕೂರ್, ಜೆಮಿಮಾ ರಾಡ್ರಿಗಸ್, ರಾಧಾ ಯಾದವ್, ಹರ್ಲೀನ್ ಡಿಯೋಲ್, ಸ್ನೇಹ ರಾಣಾ.