Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs BAN: ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್‌ ಆಡಲು ಸರ್ಫರಾಜ್-ರಾಹುಲ್ ನಡುವೆ ಪೈಪೋಟಿ; ಯಾರಿಗೆ ಅವಕಾಶ?

ಭಾರತ ಮತ್ತು 0ಬಾಂಗ್ಲಾದೇಶ ನಡುವೆ ಸೆಪ್ಟೆಂಬರ್ 19 ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಟೀಮ್ ಇಂಡಿಯಾ ಸೆಪ್ಟೆಂಬರ್ 13 ರಿಂದ ಸೆಪ್ಟೆಂಬರ್ 18 ರವರೆಗೆ ಚಪಾಕ್‌ನಲ್ಲಿ 5 ದಿನಗಳ ಅಭ್ಯಾಸ ನಡೆಸಲಿದೆ.

ಈಗಾಗಲೇ ಬಾಂಗ್ಲಾದೇಶ ಕ್ರಿಕೆಟ್ ತಂಡ ಕೂಡ ಮೀರ್‌ಪುರದಲ್ಲಿ ಅಭ್ಯಾಸ ಆರಂಭಿಸಿದೆ. ಆದರೆ, ಬಾಂಗ್ಲಾದೇಶದ ಪ್ಲೇಯಿಂಗ್-11 ಇನ್ನೂ ಪ್ರಕಟವಾಗಿಲ್ಲ. ಟೀಮ್ ಇಂಡಿಯಾ ಸಹಾ ಕೇವಲ ಮೊದಲ ಟೆಸ್ಟ್ ಸರಣಿಗೆ 16 ಆಟಗಾರರ ತಂಡವನ್ನು ಪ್ರಕಟಿಸಿದೆ.

Competition between Sarfaraz Khan - KL Rahul to play the first Test against Bangladesh

ಟೀಮ್ ಇಂಡಿಯಾದ ಸ್ಟಾರ್ ಆಟಗಾರರಿಂದ ಕಂಗೊಳಿಸುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ಲೇಯಿಂಗ್- 11 ಆಯ್ಕೆ ಮಾಡುವುದು ನಾಯಕ ರೋಹಿತ್ ಶರ್ಮಾ ಮತ್ತು ಹೆಡ್ ಕೋಚ್ ಗೌತಮ್ ಗಂಭೀರ್ ಅವರಿಗೆ ಸವಾಲಾಗಿದೆ.

ರಿಷಬ್ ಪಂತ್ ನಂತರ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದು ಯಾರು ಎಂಬುದು ಪ್ರಶ್ನೆ ಆಗಿದೆ. ಈ ಸ್ಥಾನಕ್ಕೆ ಸರ್ಫರಾಜ್ ಖಾನ್ ಮತ್ತು ಕೆಎಲ್ ರಾಹುಲ್ ಇಬ್ಬರ ನಡುವೆ ಪೈಪೋಟಿ ಇದೆ. ಆದರೆ, ಪಿಟಿಐ ವರದಿಯ ಪ್ರಕಾರ, ಸರ್ಫರಾಜ್ ಖಾನ್ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್-11 ರಲ್ಲಿ ಸ್ಥಾನ ಪಡೆಯುವುದು ಕಷ್ಟ ಎನ್ನಲಾಗುತ್ತಿದೆ.

ಸರ್ಫರಾಜ್ ಖಾನ್ ಬದಲಿಗೆ ಪ್ಲೇಯಿಂಗ್-11ರಲ್ಲಿ ಕೆಎಲ್ ರಾಹುಲ್‌ಗೆ ಟೀಮ್ ಮ್ಯಾನೇಜ್‌ಮೆಂಟ್ ಅವಕಾಶ ನೀಡುವ ನಿರೀಕ್ಷೆಯಿದೆ. ಏಕೆಂದರೆ ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ಬಲಿಷ್ಠ ಟೀಮ್ ಇಂಡಿಯಾವನ್ನು ಕಳುಹಿಸಬೇಕಿದೆ.

ಅದಕ್ಕೂ ಮೊದಲು ಬಿಸಿಸಿಐ ಆಯ್ಕೆ ಸಮಿತಿ ಕೆಎಲ್ ರಾಹುಲ್‌ ಅವರಿಗೆ ಹೆಚ್ಚಿನ ಟೆಸ್ಟ್ ಪಂದ್ಯಗಳನ್ನು ಆಡಲು ಅವಕಾಶ ನೀಡಲು ಮುಂದಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಯುವ ಸ್ಟಾರ್ ಬ್ಯಾಟರ್ ಸರ್ಫರಾಜ್ ಅವರಿಗೆ ಅವಕಾಶ ಕೈ ತಪ್ಪಿದೆ.

ಇಂಗ್ಲೆಂಡ್ ವಿರುದ್ಧದ ತವರಿ ಟೆಸ್ಟ್ ಸರಣಿಯಲ್ಲಿ ಸರ್ಫರಾಜ್ ಖಾನ್ ಅವರು ಸ್ಪೋಟಕ ಬ್ಯಾಟಿಂಗ್ ಮಾಡುವ ಮೂಲಕ ಸೈ ಎನಿಸಿಕೊಂಡಿದ್ದರು. ಆದರೆ ಬಾಂಗ್ಲಾದೇಶದ ವಿರುದ್ಧ ಭಾರತದ ಮೊದಲ ಟೆಸ್ಟ್‌ಗೆ ಆಡುವ ಹನ್ನೊಂದರ ಬಳಗವನ್ನು ಆಯ್ಕೆ ಮಾಡುವಾಗ ಕೆಎಲ್ ರಾಹುಲ್ ಅವರ ಅನುಭವವು ಅವರಿಗೆ ಪ್ರಯೋಜನಕಾರಿಯಾಗಲಿದೆ. ಸದ್ಯ ರಾಹುಲ್ ಫಿಟ್ ಆಗಿದ್ದು, ದುಲೀಪ್‌ನಲ್ಲಿ ಅರ್ಧಶತಕ ಗಳಿಸಿದ್ದರು.

Story first published: Monday, September 9, 2024, 23:41 [IST]
Other articles published on Sep 9, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+