Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Champions Trophy: ಅನ್ರಿಕ್ ನಾರ್ಟ್ಜೆ ಬದಲಿಗೆ ದಕ್ಷಿಣ ಆಫ್ರಿಕಾ ತಂಡ ಸೇರಿದ ಸ್ಟಾರ್ ವೇಗಿ

ಫೆಬ್ರವರಿ 19 ರಿಂದ ಪ್ರಾರಂಭವಾಗಲಿರುವ ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿಗಾಗಿ ದಕ್ಷಿಣ ಆಫ್ರಿಕಾ ತನ್ನ 15 ಸದಸ್ಯರ ತಂಡದಲ್ಲಿ ಬದಲಾವಣೆ ಮಾಡಿದೆ. ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿರುವ ಅನ್ರಿಚ್ ನಾರ್ಟ್ಜೆ ಬದಲಿಗೆ ದಕ್ಷಿಣ ಆಫ್ರಿಕಾ ಸ್ಟಾರ್ ವೇಗದ ಬೌಲರ್ ಅನ್ನು ತಂಡಕ್ಕೆ ಸೇರಿಸಿಕೊಂಡಿದೆ. ಅನ್ರಿಚ್ ನಾರ್ಟ್ಜೆ ಬದಲಿಗೆ ಸ್ಟಾರ್ ಬಲಗೈ ವೇಗಿ ಕಾರ್ಬಿನ್ ಬಾಷ್ ಅವರು ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

30 ವರ್ಷದ ಕಾರ್ಬಿನ್ ಬಾಷ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ಪಾಕಿಸ್ತಾನ ವಿರುದ್ಧ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಬೆನ್ನಿನ ಗಾಯದಿಂದಾಗಿ ನಾರ್ಟ್ಜೆ ಮುಂಬರುವ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಆದ್ದರಿಂದ ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ) ಭಾನುವಾರ ಅವರ ಸ್ಥಾನದಲ್ಲಿ ಬಾಷ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ.

Corbin Bosch replaces Anrich Nortje in South Africa squad

ಸಿಎಸ್ಎ ಹೊರಡಿಸಿರುವ ತನ್ನ ಅಧಿಕೃತ ಹೇಳಿಕೆಯಲ್ಲಿ 'ವೇಗದ ಬೌಲರ್ ಕ್ವೆನಾ ಎಂಫಕಾ ಅವರನ್ನು ಪ್ರಯಾಣ ಮೀಸಲು ಆಟಗಾರರಾಗಿ ತಂಡದಲ್ಲಿ ಸೇರಿಸಲಾಗಿದೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಗಾಗಿ ದಕ್ಷಿಣ ಆಫ್ರಿಕಾ ತಂಡವನ್ನು ಸೇರಲು ಬಾಷ್ ಮತ್ತು ಎಂಫಾಕಾ, ಟೋನಿ ಡಿ ಜೋರ್ಜಿ ಅವರೊಂದಿಗೆ ಭಾನುವಾರ ಕರಾಚಿಗೆ ತೆರಳಿದ್ದಾರೆ. ಇದು ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ಮೊದಲು ಅವರಿಗೆ ನಿರ್ಣಾಯಕ ತಯಾರಿಯಾಗಿದೆ ಎಂದು ತಿಳಿಸಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ದಕ್ಷಿಣ ಆಫ್ರಿಕಾ ತಂಡವು ಅಫ್ಘಾನಿಸ್ತಾನ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳೊಂದಿಗೆ ಬಿ ಗುಂಪಿನಲ್ಲಿದೆ. ಫೆಬ್ರವರಿ 21 ರಂದು ಕರಾಚಿಯಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದೊಂದಿಗೆ ದಕ್ಷಿಣ ಆಫ್ರಿಕಾ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದಾದ ನಂತರ, ಫೆಬ್ರವರಿ 15 ರಂದು ಆಸ್ಟ್ರೇಲಿಯಾವನ್ನು ಎದುರಿಸಲು ರಾವಲ್ಪಿಂಡಿಗೆ ಪ್ರಯಾಣ ಬೆಳೆಸಲಿದೆ. ನಂತರ ಮಾರ್ಚ್ 1 ರಂದು ಕರಾಚಿಯಲ್ಲಿ ಇಂಗ್ಲೆಂಡ್ ವಿರುದ್ಧ ತನ್ನ ಕೊನೆಯ ಗುಂಪು ಹಂತದ ಪಂದ್ಯವನ್ನು ಆಡಲಿದೆ.

ಚಾಂಪಿಯನ್ಸ್ ಟ್ರೋಫಿ 2025 ಗಾಗಿ ದಕ್ಷಿಣ ಆಫ್ರಿಕಾ ತಂಡಟೆಂಬಾ ಬವುಮಾ (ನಾಯಕ), ಕಾರ್ಬಿನ್ ಬಾಷ್, ಟೋನಿ ಡಿ ಜೋರ್ಜಿ, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕಗಿಸೊ ರಬಾಡ, ರಯಾನ್ ರಿಕಲ್ಟನ್, ತಬ್ರೆಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ರಾಸ್ಸಿ ವ್ಯಾನ್ ಡೆರ್ ಡಸ್ಸೆನ್.

ಚಾಂಪಿಯನ್ಸ್ ಟ್ರೋಫಿ ದಕ್ಷಿಣ ಆಫ್ರಿಕಾ ತಂಡ

ಟೆಂಬಾ ಬವುಮಾ (ನಾಯಕ), ಕಾರ್ಬಿನ್ ಬಾಷ್, ಟೋನಿ ಡಿ ಜೋರ್ಜಿ, ಮಾರ್ಕೊ ಜಾನ್ಸೆನ್, ಹೆನ್ರಿಕ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಲುಂಗಿ ಎನ್‌ಗಿಡಿ, ಕಗಿಸೊ ರಬಾಡ, ರಯಾನ್ ರಿಕಲ್ಟನ್, ತಬ್ರೆಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ರಾಸ್ಸಿ ವ್ಯಾನ್ ಡೆರ್ ಡಸ್ಸೆನ್.

ಮೀಸಲು ಆಟಗಾರ: ಕ್ವೇನಾ ಎಂಫಾಕಾ

Story first published: Sunday, February 9, 2025, 23:16 [IST]
Other articles published on Feb 9, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+