ಕೊರೊನಾ ಭೀತಿ: ಭಾರತ vs ದಕ್ಷಿಣ ಆಫ್ರಿಕಾ ಏಕದಿನ ಸರಣಿ ರದ್ದು

ಐಪಿಎಲ್ ನಂತರ ಮತ್ತೊಂದು ಮಹತ್ವದ ಸರಣಿ ರದ್ದಾಗಿದೆ. ದಕ್ಷಿಣ ಆಫ್ರಿಕಾ ವಿರುದ್ದ ನಡೆಯಬೇಕಾಗಿದ್ದ ಮುಂದಿನ ಎರಡೂ ಪಂದ್ಯಗಳನ್ನು ರದ್ದುಗೊಳಿಸಲಾಗಿದೆ. ಹೀಗಾಗಿ ಒಂದೂ ಪಂದ್ಯ ನಡೆಯದೆ ಆಫ್ರಿಕಾ ವಿರುದ್ಧದ ಸರಣಿ ರದ್ದಾಗಿದೆ.
ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಧರ್ಮಶಾಲೆಯಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯ ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಇದೀಗ ಎರಡನೇ ಮತ್ತು ಮೂರನೇ ಪಂದ್ಯವನ್ನು ರದ್ದುಗೊಳಿಸುವ ನಿರ್ಧಾರಕ್ಕೆ ಬಿಸಿಸಿಐ ಬಂದಿರುವುದನ್ನು ಬಿಸಿಸಿಐ ಖಚಿತಪಡಿಸಿದೆ.
ಎರಡನೇ ಪಂದ್ಯ ಲಕ್ನೋದಲ್ಲಿ ಮತ್ತು ಮೂರನೇ ಪಂದ್ಯ ಈಡನ್ ಗಾರ್ಡನ್‌ನಲ್ಲಿ ನಡೆಯಬೇಕಾಗಿತ್ತು. ಆದರೆ ಆದರೆ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸರಣಿಯನ್ನು ಸಂಪೂರ್ಣವಾಗಿ ರದ್ದುಗೊಳಿಸುವ ನಿರ್ಧಾರಕ್ಕೆ ಬರಲಾಗಿದೆ.
ಇಂದು ಮಧ್ಯಾಹ್ನವಷ್ಟೇ ಐಪಿಎಲ್ ಟೂರ್ನಿಯನ್ನು ಮುಂದೂಡುವ ನಿರ್ಧಾರವನ್ನು ಬಿಸಿಸಿಐ ತೆಗೆದುಕೊಂಡಿತ್ತು. ಅದಾದ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯನ್ನೂ ರದ್ದುಗೊಳಿಸುವ ನಿರ್ಧಾರಕ್ಕೆ ಬಿಸಿಸಿಐ ಬಂದಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಒಂದೂ ಪಂದ್ಯ ನಡೆಯದೆ ರದ್ದಾಗಿದೆ.
ಈ ಮೊದಲು ಟೀಮ್ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯನ್ನು ಪ್ರೇಕ್ಷಕರಿಲ್ಲದೆ ನಡೆಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಈಗ ಸಂಪೂರ್ಣವಾಗಿ ಈ ಸರಣಿಯನ್ನೇ ರದ್ದುಗೊಳಿಸಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications