IND vs WI ODI Schedule: ಏಕದಿನ ಸರಣಿ ಆರಂಭಕ್ಕೆ ಕ್ಷಣಗಣನೆ: ಯಾವಾಗ ಆರಂಭ? ಸಮಯ, ನೇರಪ್ರಸಾರದ ಮಾಹಿತಿ
ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ ಅಂತಿಮವಾಗಿದ್ದು ಭಾರತ 1-0 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಾಗಿದೆ. ಇದೀಗ ಎಲ್ಲರ ಚಿತ್ತ ವೈಟ್‌ಬಾಲ್ ಸರಣಿಯ ಮೇಲೆ ಬಿದ್ದಿದ್ದು ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಈ ಸರಣಿ ಗುರುವಾರದಿಂದಲೇ ಆರಂಭವಾಗಲಿದ್ದು ಎರಡು ಪಂದ್ಯಗಳು ಬಲಿಷ್ಠ ತಂಡಗಳೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ.
ಏಕದಿನ ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲಿ ಈ ಏಕದಿನ ಸರಣಿ ಭಾರತ ತಂಡಕ್ಕೆ ಅತ್ಯಂತ ಮಹತ್ವದ್ದಾಗಿರಲಿದೆ. ವಿಂಡೀಸ್ ತಂಡ ಇದೇ ಮೊದಲ ಬಾರಿಗೆ ಏಕದಿನ ವಿರ್ಶವಕಪ್ ಟೂರ್ನಿಗೆ ಅರ್ಹತೆ ಪಡೆಯದ ನೋವಿನಲ್ಲಿ ಕಣಕ್ಕಿಳಿಯುತ್ತಿರುವುದು ಮತ್ತೊಂದು ಗಮನಾರ್ಹ ಅಂಶ. ಟೀಮ್ ಇಂಡಿಯಾ ಪಡೆಗೆ ಆಟಗಾರರ ಪ್ರದರ್ಶನ, ಫಾರ್ಮ್ ಹಾಗೂ ಆತ್ಮವಿಶ್ವಾಸ ಹೆಚ್ಚಲು ಈ ಸರಣಿ ಮಹತ್ವದ ಪಾತ್ರವಹಿಸಲಿದೆ. ಏಕದಿನ ಸರಣಿಯಲ್ಲಿಯೂ ಟೀಮ್ ಇಂಡಿಯಾ ಗೆಲ್ಲುವ ನೆಚ್ಚಿನ ತಂಡವಾಗಿದ್ದರೂ ವೆಸ್ಟ್ ಇಂಡೀಸ್ ಪಡೆ ಕೂಡ ಸಾಕಷ್ಟು ಪ್ರತಿಭಾನ್ವಿತ ಆಟಗಾರರ ಬಳಗವನ್ನು ಹೊಂದಿದೆ ಎಂಬುದು ಕೂಡ ಗಮನಾರ್ಹ ಅಂಶ

ಶುಕ್ರವಾರದಿಂದಲೇ ಸರಣಿ ಆರಂಭ
ಮೂರು ಪಂದ್ಯಗಳ ಏಕದಿನ ಸರಣಿ ನಾಳೆ(ಜುಲೈ 27 ಶುಕ್ರವಾರ)ಯಿಂದಲೇ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಆಯೋಜನೆಯಾಗಲಿದೆ. ಎರಡನೇ ಪಂದ್ಯ ಜುಲೈ 29ರಂದು ನಡೆಯಲಿದ್ದು ಈ ಪಂದ್ಯವೂ ಬಾರ್ಡೋಸ್‌ನಲ್ಲಿಯೇ ನಡೆಯಲಿದೆ. ಇನ್ನು ಸರಣಿಯ ಕೊನೆಯ ಪಂದ್ಯ ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಆಯೋಜನೆಯಾಗಲಿದ್ದು ಆಗಸ್ಟ್ 1ರಂದು ಈ ಪಂದ್ಯ ನಡೆಯಲಿದೆ.
ಭಾರತದಲ್ಲಿ ಪಂದ್ಯದ ಆರಂಭದ ಸಮಯ ಹಾಗೂ ವೀಕ್ಷಣೆ ಹೇಗೆ?
ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಿನ ಏಕದಿನ ಸರಣಿಯ ಪಂದ್ಯಗಳು ಭಾರತೀಯ ಕಾಲಮಾನ ಸಂಜೆ 7 ಗಂಟೆಯಿಂದ ಆರಂಭವಾಗಲಿದ್ದು 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಭಾರತದಲ್ಲಿ ಈ ಪಂದ್ಯವನ್ನು ಟಿವಿಯಲ್ಲಿ ಡಿಡಿ ಸ್ಪೋರ್ಟ್ಸ್ ನೇರಪ್ರಸಾರ ಮಾಡಲಿದೆ. ಹಿಂದಿ ಹಾಗೂ ಇಂಗ್ಲಿಶ್‌ನಲ್ಲಿ ವೀಕ್ಷಕ ವಿವರಣೆಯಿರಲಿದೆ. ಇನ್ನು ಲೈವ್‌ಸ್ಟ್ರೀಮಿಂಗ್ ಕೂಡ ಲಭ್ಯವಿದ್ದು ಫ್ಯಾನ್ ಕೋಡ್ ಚಂದಾದಾರರು ಹಾಗೂ ಜಿಯೋ ಸಿನಿಮಾದಲ್ಲಿ ಪಂದ್ಯವನ್ನು ವೀಕ್ಷಿಸಬಹುದು.
ಟೀಮ್ ಇಂಡಿಯಾ ಏಕದಿನ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಶುಬ್ಮನ್ ಗಿಲ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಸೂರ್ಯ ಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್-ಕೀಪರ್), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ (ಉಪ ನಾಯಕ), ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.
ವೆಸ್ಟ್ ಇಂಡೀಸ್ ಏಕದಿನ ಸ್ಕ್ವಾಡ್: ಶಾಯ್ ಹೋಪ್ (ನಾಯಕ), ರೋವ್ಮನ್ ಪೊವೆಲ್ (ಉಪನಾಯಕ), ಅಲಿಕ್ ಅಥಾನಾಜೆ, ಯಾನಿಕ್ ಕ್ಯಾರಿಯಾ, ಕೀಸಿ ಕಾರ್ಟಿ, ಡೊಮಿನಿಕ್ ಡ್ರೇಕ್ಸ್, ಶಿಮ್ರಾನ್ ಹೆಟ್ಮೆಯರ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಾಕೇಶ್ ಮೋಟಿ, ಜೇಡನ್ ಸೀಲ್ಸ್, ರೊಮಾರಿಯೊ ಶೆಫರ್ಡ್, ಕೆವಿನ್ ಸಿಂಕ್ಲೇರ್, ಓಶೇನ್ ಥಾಮಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications