Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ವಿಂಡೀಸ್ ವಿರುದ್ಧದ ಟಿ20 ಸರಣಿ ಮುಂದೂಡಿರುವ ನಿರ್ಧಾರ ಪ್ರಕಟಿಸಿದ ಕ್ರಿಕೆಟ್ ಆಸ್ಟ್ರೇಲಿಯಾ

Cricket Australia Announces Postponement Of T20i Series Against Windies

ಮಂಗಳವಾರ ಕ್ರಿಕೆಟ್ ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ ಮುಂದೂಡಲಾಗಿದೆ ಎಂಬುದನ್ನು ಖಚಿತಪಡಿಸಿದೆ. ಈ ಸರಣಿ ಈ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಎರಡು ಮಂಡಳಿಗಳು ಈ ಬಗ್ಗೆ ಚರ್ಚಿಸಿ ಮುಂದೂಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದೆ.

ಮೂರು ಟಿ20 ಪಂದ್ಯಗಳ ಸರಣಿಯನ್ನು ಟೌನ್ಸ್‌ವಿಲ್ಲೆ, ಕೈರ್ನ್ಸ್ ಹಾಗೂ ಗೋಲ್ಡ್ ಕೋಸ್ಟ್‌ನಲ್ಲಿ ಕ್ರಮವಾಗಿ ಆಯೊಜಿಸಲು ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಅಕ್ಟೋಬರ್ 4, 6 ಹಾಗೂ 9ಕ್ಕೆ ಈ ಪಂದ್ಯಗಳನ್ನು ನಿಗದಿಗೊಳಿಸಲಾಗಿತ್ತು. ಆದರೆ ಈ ಚುಟುಕು ಸರಣಿಯನ್ನು ಮುಂದೂಡಲಾಗಿದೆ.

ಆಸ್ಟ್ರೇಲಿಯಾದಲ್ಲಿ ಆಯೋಜನೆಯಾಗಿದ್ದ ಟಿ20 ಸರಣಿಯ ಪೂರ್ವಭಾವಿಯಾಗಿ ಈ ಸರಣಿಯನ್ನು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಕೊರೊನಾ ವೈರಸ್‌ನ ಕಾರಣದಿಂದಾಗಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ವಿಶ್ವಕಪ್ ಟೂರ್ನಿಯೇ ಮುಂದೂಡಲ್ಪಟ್ಟಿದೆ. ಹೀಗಾಗಿ ಈ ಸರಣಿಯನ್ನು ಕೂಡ ಮುಂದೂಡುವುದು ಸೂಕ್ತವೆಂಬ ನಿರ್ಧಾರಕ್ಕೆ ಎರಡೂ ಮಂಡಳಿಗಳು ಬಂದಿದೆ.

ಕೊರೊನಾ ವೈರಸ್‌ನ ಭೀತಿಯ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವಕಪ್‌ ಮುಮದೂಡುವ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಇತ್ತೀಚೆಗೆ ಐಸಿಸಿ ಖಚಿತಪಡಿಸಿತ್ತು. ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಟೂರ್ನಿಯನ್ನು 2021 ಅಥವಾ 2022ಕ್ಕೆ ನಡೆಸುವ ಸಾಧ್ಯತೆಯಿದೆ.

ಈ ಮಧ್ಯೆ ಆಸ್ಟ್ರೇಲಿಯಾ ಇಂಗ್ಲೆಂಡ್ ವಿರುದ್ಧ ಸೀಮಿತ ಓವರ್‌ಗಳ ಸರಣಿಯನ್ನು ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳ ಸರಣಿ ಇದಾಗಿದೆ. ಮತ್ತೊಂದೆಡೆ ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ಇಂಗ್ಲೆಂಡ್ ವಿರುದ್ಧ ಜೈವಿಕ ಸುರಕ್ಷಿತ ವಾತಾವರಣದಲ್ಲಿ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿತ್ತು.

Story first published: Tuesday, August 4, 2020, 11:43 [IST]
Other articles published on Aug 4, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+