For Quick Alerts
ALLOW NOTIFICATIONS  
For Daily Alerts
 

Best Playing 11: ಕ್ರಿಕೆಟ್ ಆಸ್ಟ್ರೇಲಿಯಾದ ಅತ್ಯುತ್ತಮ ಟೆಸ್ಟ್ ಪ್ಲೇಯಿಂಗ್-11; ಬುಮ್ರಾಗೆ ನಾಯಕನ ಪಟ್ಟ

ಕ್ರಿಕೆಟ್ ಆಸ್ಟ್ರೇಲಿಯಾವು 2024ರ ಅಂತ್ಯಕ್ಕೆ ಒಂದು ದಿನದ ಮೊದಲು ವರ್ಷದ ಅತ್ಯುತ್ತಮ ಟೆಸ್ಟ್ ತಂಡವನ್ನು ಆಯ್ಕೆ ಮಾಡಿದೆ. ಎಲ್ಲರನ್ನೂ ಅಚ್ಚರಿಗೊಳಿಸಿರುವ ಕ್ರಿಕೆಟ್ ಆಸ್ಟ್ರೇಲಿಯಾ ಭಾರತ ತಂಡದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು ನಾಯಕನನ್ನಾಗಿ ಮಾಡಿದೆ. ಪ್ರಸಕ್ತ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬುಮ್ರಾ ಅದ್ಭುತ ಬೌಲಿಂಗ್ ಮಾಡಿದ್ದು, ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. 4 ಟೆಸ್ಟ್ ಪಂದ್ಯಗಳಲ್ಲಿ 30 ವಿಕೆಟ್ ಕಬಳಿಸಿದ್ದಾರೆ. ಈ ವೇಳೆ ಅವರು ಮೂರು ಬಾರಿ 5 ವಿಕೆಟ್‌ಗಳನ್ನು ಪಡೆದಿದ್ದಾರೆ.

ಆಸ್ಟ್ರೇಲಿಯಾದ ಭಯಾನಕ ವೇಗದ ಬೌಲರ್ ಪ್ಯಾಟ್ ಕಮ್ಮಿನ್ಸ್ ಪ್ರಸ್ತುತ ವಿಶ್ವದ ಅತ್ಯುತ್ತಮ ನಾಯಕರಾಗಿದ್ದಾರೆ. ತಮ್ಮ ನಾಯಕತ್ವದಲ್ಲಿ ಅವರು ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಮಾತ್ರವಲ್ಲದೆ ಏಕದಿನದಲ್ಲಿಯೂ ಅವರು ತಮ್ಮ ದೇಶಕ್ಕಾಗಿ ಟ್ರೋಫಿಗಳನ್ನು ಗೆದ್ದು ಕೊಟ್ಟಿದ್ದಾರೆ. ಕಮ್ಮಿನ್ಸ್ ನಾಯಕತ್ವದಲ್ಲಿ, ಆಸ್ಟ್ರೇಲಿಯಾ ತಂಡವು 2023 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಏಕದಿನ ವಿಶ್ವಕಪ್ ಗೆದ್ದಿತು. ಅವರು ಅತ್ಯುತ್ತಮ ನಾಯಕರಾಗಿರಬಹುದು ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ಆಯ್ಕೆ ಮಾಡಿದ 2024ರ ಅತ್ಯುತ್ತಮ ಟೆಸ್ಟ್ ಪ್ಲೇಯಿಂಗ್-11 ರಲ್ಲಿ ಅವರು ಸ್ಥಾನ ಪಡೆದಿಲ್ಲ. ಅವರ ಬದಲಿಗೆ ಜಸ್ಪ್ರೀತ್ ಬುಮ್ರಾ ಸ್ಥಾನ ಪಡೆದಿದ್ದಾರೆ.

Cricket Australia picks best Test playing XI

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ (ಡಬ್ಲ್ಯುಟಿಸಿ) 2025ರ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ಇಂಗ್ಲೆಂಡ್ ವಿಫಲವಾಗಿದ್ದರೂ, ಆಟಗಾರರ ಮಾತ್ರ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ರಿಕೆಟ್ ಆಸ್ಟ್ರೇಲಿಯಾ ಆಯ್ಕೆ ಮಾಡಿದ 2024ರ ಅತ್ಯುತ್ತಮ ಟೆಸ್ಟ್ ಪ್ಲೇಯಿಂಗ್-11 ರಲ್ಲಿ ಆರಂಭಿಕ ಬ್ಯಾಟರ್ ಬೆನ್ ಡಕೆಟ್, ಅನುಭವಿ ಜೋ ರೂಟ್ ಮತ್ತು ಯುವ ಆಟಗಾರ ಹ್ಯಾರಿ ಬ್ರೂಕ್ ಸ್ಥಾನ ಪಡೆದಿದ್ದಾರೆ. ಬುಮ್ರಾ ಹೊರತುಪಡಿಸಿ, ಪ್ಲೇಯಿಂಗ್-11 ರಲ್ಲಿರುವ ಇನ್ನೊಬ್ಬ ಭಾರತೀಯ ಆಟಗಾರ ಯಶಸ್ವಿ ಜೈಸ್ವಾಲ್.

ಜಸ್ಪ್ರೀತ್ ಬುಮ್ರಾ ಈ ವರ್ಷ 13 ಪಂದ್ಯಗಳಲ್ಲಿ 14.92 ಸರಾಸರಿಯಲ್ಲಿ 71 ವಿಕೆಟ್ ಪಡೆದಿದ್ದಾರೆ. ಇದರೊಂದಿಗೆ ಈ ವರ್ಷ ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಯಶಸ್ವಿ ಜೈಸ್ವಾಲ್ ಕೂಡ 15 ಪಂದ್ಯಗಳಲ್ಲಿ 1478 ರನ್ ಗಳಿಸಿದ್ದಾರೆ. ಜೈಸ್ವಾಲ್ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಪರ ಅತಿಹೆಚ್ಚು ರನ್ ಗಳಿಸಿದ ಎರಡನೇ ಅತ್ಯುತ್ತಮ ಬ್ಯಾಟರ್ ಆಗಿದ್ದಾರೆ. ಸಚಿನ್ ತೆಂಡೂಲ್ಕರ್ 2010ರಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದರು.

ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್ ಮತ್ತು ಅಲೆಕ್ಸ್ ಕ್ಯಾರಿ ಕೂಡ ವರ್ಷದ ಅತ್ಯುತ್ತಮ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಿರುವ ದಕ್ಷಿಣ ಆಫ್ರಿಕಾ ತಂಡದಿಂದ ಸ್ಪಿನ್ನರ್ ಕೇಶವ್ ಮಹಾರಾಜ್ ಮಾತ್ರ ಸ್ಥಾನ ಪಡೆದಿದ್ದಾರೆ. ಶ್ರೀಲಂಕಾದ ಕಮಿಂದು ಮೆಂಡಿಸ್ ಕೂಡ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ನ್ಯೂಜಿಲೆಂಡ್ ಜೋಡಿ ರಚಿನ್ ರವೀಂದ್ರ ಮತ್ತು ಮ್ಯಾಟ್ ಹೆನ್ರಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

2024ರ ಕ್ರಿಕೆಟ್ ಆಸ್ಟ್ರೇಲಿಯಾದ ಬೆಸ್ಟ್ ಪ್ಲೇಯಿಂಗ್-11

ಯಶಸ್ವಿ ಜೈಸ್ವಾಲ್, ಬೆನ್ ಡಕೆಟ್, ಜೋ ರೂಟ್, ರಚಿನ್ ರವೀಂದ್ರ, ಹ್ಯಾರಿ ಬ್ರೂಕ್, ಕಮಿಂದು ಮೆಂಡಿಸ್, ಅಲೆಕ್ಸ್ ಕ್ಯಾರಿ (ವಿಕೆಟ್-ಕೀಪರ್), ಕೇಶವ್ ಮಹಾರಾಜ್, ಮ್ಯಾಟ್ ಹೆನ್ರಿ, ಜಸ್ಪ್ರೀತ್ ಬುಮ್ರಾ (ನಾಯಕ), ಜೋಶ್ ಹ್ಯಾಜಲ್‌ವುಡ್.

Story first published: Tuesday, December 31, 2024, 16:27 [IST]
Other articles published on Dec 31, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+