ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಂದೂಡಿದ ಕ್ರಿಕೆಟ್ ಆಸ್ಟ್ರೇಲಿಯಾ

Cricket Australia postpone tour of South Africa over Covid 19 concerns in host country

ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಂದೂಡುವ ನಿರ್ಧಾರವನ್ನು ಕ್ರಿಕೆಟ್ ಆಸ್ಟ್ರೇಲಿಯಾ ಅಧಿಕೃತವಾಗಿ ಪ್ರಕಟಿಸಿದೆ. ಮುಂದೆ ಯಾವಾಗ ಸರಣಿ ನಡೆಯಲಿದೆ ಎಂಬ ಬಗ್ಗೆ ಇನ್ನಷ್ಟೇ ಸ್ಪಷ್ಟನೆಗಳು ಲಭ್ಯವಾಗಬೇಕಿದೆ.

"ಎರಡನೇ ಅಲೆ ಹಾಗೂ ಹೊಸ ಮಾದರಿಯ ಕೊರೊನಾ ವೈರಸ್ ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚಾಗುತ್ತಿದೆ. ಹೀಗಾಗಿ ಸಾರ್ವಜನಿಕ ಆರೋಗ್ಯ ಪರಿಸ್ಥಿತಿಯ ಕಾರಣದಿಂದಾಗಿ ತಜ್ಞ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ಇಂತಾ ಸಮಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾಗೆ ಪ್ರವಾಸವನ್ನು ಕೈಗೊಳ್ಳುವುದನ್ನು ಸೂಕ್ತವಲ್ಲ ಎಂದು ನಿರ್ಧರಿಸಲಾಗಿದೆ" ಎಂದು ಕ್ರಿಕೆಟ್ ಆಸ್ಟ್ರೇಲಿಯಾದ ಹಂಗಾಮಿ ಅಧ್ಯಕ್ಷ ನಿಕ್ ಹಾಕ್ಲೇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಬಗೆಗಿನ ಎಲ್ಲಾ ಚರ್ಚೆಗಳು ಅನಗತ್ಯ: ಸಬಾ ಕರೀಮ್ವಿರಾಟ್ ಕೊಹ್ಲಿ ನಾಯಕತ್ವದ ಬಗೆಗಿನ ಎಲ್ಲಾ ಚರ್ಚೆಗಳು ಅನಗತ್ಯ: ಸಬಾ ಕರೀಮ್

"ಈ ಸರಣಿಯ ಆಯೋಜನೆಗಾಗಿ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ನಡೆಸಿದ ಹೆಚ್ಚವರಿ ಯೋಜನೆಗಳನ್ನು ನಾವು ಪರಿಗಣಿಸಿದ್ದೇವೆ. ಹೆಚ್ಚುವರಿ ವೆಚ್ಚ ಹಾಗೂ ಸರಣಿಯನ್ನು ಆಯೋಜನೆಗೆ ಪ್ರಯತ್ನಿಸಲು ನಾವು ಸಿದ್ಧರಾಗಿದ್ದೇವೆ ಎಂದು ನಾವು ಸ್ಪಷ್ಟ ಪಡಿಸಿದ್ದೇವೆ" ಎಂದು ಈ ಪ್ರಕಟನೆಯಲ್ಲಿ ತಿಳಿಸಲಾಗಿದೆ.

"ಈ ನಿರ್ಧಾರವನ್ನು ನಾವು ಸುಲಭವಾಗಿ ತೆಗೆದುಕೊಂಡಿಲ್ಲ. ಅದರಲ್ಲೂ ಕ್ರಿಕೆಟ್ ಅಂತಾರಾಷ್ಟ್ರೀಯ ಕ್ರಿಕೆಟ್‌ಅನ್ನು ಪುನಾರಾಂಬಿಸುತ್ತಿರುವ ಈ ಸಂದರ್ಭದಲ್ಲಿ ನಾವು ಕೂಡ ಅಸಮಾಧಾನಗೊಂಡಿದ್ದೇವೆ.ಕ್ರಿಕೆಟ್ ದಕ್ಷಿಣ ಆಫ್ರಿಕಾ ಜೊತೆಗಿನ ನಮ್ಮ ಮೌಲ್ಯಯುತ ಸಂಬಂಧ ಮುಂದುವರಿಯುತ್ತದೆ. ಜೊತೆಗೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ ನಮ್ಮ ಸ್ಪರ್ಧೆ ಮುಂದುವರಿಯಲು ಬಯಸುತ್ತೇವೆ" ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.

ನಟರಾಜನ್ ಬಗ್ಗೆ ಸಿನಿಮಾ ನಿರ್ಮಾಣಕ್ಕೆ ಮುಂದಾದ ನಿರ್ದೇಶಕರು: ಮೃದು ಮಾತುಗಳಲ್ಲಿ ನಟ್ಟು ಹೇಳಿದ್ದಿಷ್ಟು !ನಟರಾಜನ್ ಬಗ್ಗೆ ಸಿನಿಮಾ ನಿರ್ಮಾಣಕ್ಕೆ ಮುಂದಾದ ನಿರ್ದೇಶಕರು: ಮೃದು ಮಾತುಗಳಲ್ಲಿ ನಟ್ಟು ಹೇಳಿದ್ದಿಷ್ಟು !

ಇನ್ನು ಇದೇ ಸಂದರ್ಭದಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರರ ಆರೋಗ್ಯ ನಮ್ಮ ಮೊದಲ ಆದ್ಯತೆ ಎಂದಿರುವ ಕ್ರಿಕೆಟ್ ಆಸ್ಟ್ರೇಲಿಯಾ ಮುಖ್ಯಸ್ಥ ನಿಕ್ ಹಾಕ್ಲೆ, ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ದಕ್ಷಿಣ ಆಫ್ರಿಕಾ ಮಂಡಳಿಯ ಜೊತೆಗೆ ಚರ್ಚಿಸಿ ನಿರ್ಧರಿಸಲಾಗುತ್ತದೆ, ದಕ್ಷಿಣ ಆಫ್ರಿಕಾದ ಜನತೆ ಶೀಘ್ರಚಾಗಿ ಕೊರೊನಾ ವೈರಸ್‌ನಿಂದ ಹೊರ ಬಂದು ಸಾಮಾನ್ಯ ಸ್ಥಿತಿಗೆ ಶೀಘ್ರವಾಗಿ ಮರಳಲಿ ಎಂದು ಪ್ರಕಟಣೆಯಲ್ಲಿ ತಿಳಸಿದ್ದಾರೆ.

Story first published: Wednesday, February 3, 2021, 10:06 [IST]
Other articles published on Feb 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X