For Quick Alerts
ALLOW NOTIFICATIONS  
For Daily Alerts
 

ಆರ್ಥಿಕ ಸಂಕಷ್ಟದಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ: 40ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಗೇಟ್‌ಪಾಸ್

Cricket Australia To Cut Jobs, Pause A Teams’ International Tours In Cost Reduction Plan

ಕೊರೊನಾ ವೈರಸ್‌ನ ಕಾರಣದಿಂದಾಗಿ ಆಸ್ಟ್ರೇಲಿಯಾದ ಕ್ರಿಕೆಟ್ ಮಂಡಳಿಯಾದ ಕ್ರಿಕೆಟ್ ಆಸ್ಟ್ರೇಲಿಯಾ ಭಾರೀ ಹಣಕಾಸಿನ ಮುಗ್ಗಟ್ಟನ್ನು ಎದುರಿಸುತ್ತಿದೆ. ಇದನ್ನು ನಿರ್ವಹಿಸಲು ಕಷ್ಟಪಡುತ್ತಿರುವ ಕ್ರಿಕೆಟ್ ಆಸ್ಟ್ರೇಲಿಯಾ ಕೆಲ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಈ ಮೂಲಕ ತನ್ನ ವೆಚ್ಚ ಕಡಿತಕ್ಕೆ ಮುಂದಾಗಿದೆ.

40ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ತೆಗೆದು ಹಾಕುವ ಪ್ರಮುಖ ನಿರ್ಧಾರವನ್ನು ಕ್ರಿಕೆಟ್ ಆಸ್ಟ್ರೇಲಿಯಾ ತೆಗೆದುಕೊಂಡಿದೆ. ಜೊತೆಗೆ ಆಸ್ಟ್ರೇಲಿಯಾ ಎ ತಂಡದ ಪ್ರವಾಸಕ್ಕೆ ಕೊಕ್ಕೆ ಹಾಕಿದೆ. ಈ ಮೂಲಕ ತನ್ನ ಖರ್ಚುಗಳನ್ನು ಕಡಿಮೆ ಮಾಡಲು ಕ್ರಿಕೆಟ್ ಆಸ್ಟ್ರೇಲಿಯಾ ಕ್ರಮಗಳನ್ನು ಕೈಗೊಂಡಿದೆ. ಕೊರೊನಾ ವೈರಸ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಮಂಡಳಿ ಸುದೀರ್ಘ ಕಾಲದ ಆರ್ಥಿಕ ಸ್ಥಿರತೆಗಾಗಿ ಮತ್ತು ಕ್ರಿಕೆಟ್‌ನ ಬೆಳವಣಿಗೆಗೆ ಈ ಕ್ರಮ ಅನಿವಾರ್ಯ ಎಂದಿದೆ.

ಮಂಗಳವಾರ ಕ್ರಿಕೆಟ್‌ ಆಸ್ಟ್ರೇಲಿಯಾದಲ್ಲಿ ಮಹತ್ವದ ಬೆಳವಣಿಗೆ ನಡೆದಿತ್ತು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಕೆವಿನ್ ರೋಬರ್ಟ್ಸ್ ತನ್ನ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದರು. ಬಳಿಕ ಆ ಸ್ಥಾನಕ್ಕೆ ಮಧ್ಯಂತರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ನಿಕ್ ಹಾಕ್ಲೆ ಆಯ್ಕೆಯಾಗಿದ್ದರು. ಕ್ರಿಕೆಟ್‌ ಆಸ್ಟ್ರೇಲಿಯಾದ ಆರ್ಥಿಕ ಮುಗ್ಗಟ್ಟಿನ ಪರಿಹಾರಕ್ಕಾಗಿ ತಕ್ಷಣವೇ ಕೆಲ ಕ್ರಮಗಳನ್ನು ನಿಕ್ ಕೈಗೊಂಡಿದ್ದಾರೆ.

ಬಳಿಕ ಮಾತನಾಡಿದ ನಿಕ್ ಹಾಕ್ಲೆ ಕ್ರಿಕೆಟ್‌ಗೆ ಇದು ಅತ್ಯಂತ ಸಂಕಷ್ಟದ ಸಂದರ್ಭ ಎಂದು ಹೇಳಿದ್ದಾರೆ. ಈ ಸಂಕಷ್ಟದಿಂದ ಕ್ರಿಕೆಟ್ ಆಸ್ಟ್ರೇಲಿಯಾ ಆದಷ್ಟು ಶೀಘ್ರದಲ್ಲಿ ಬಲಿಷ್ಠವಾಗಿ ಹೊರಬರಲಿದೆ ಎಂದು ಅವರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಮುಖ್ಯ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 80% ಸಿಬ್ಬಂದಿಯ 20 ಪ್ರತಿಶತದಷ್ಟು ಸಂಬಳವನ್ನು ಕಡಿಮೆ ಮಾಡುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಆದರೆ ಈಗ ಅದಕ್ಕೂ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದು 40ಕ್ಕೂ ಹೆಚ್ಚು ಸಿಬ್ಬಂದಿಗಳು ಕೆಲಸವನ್ನು ಕಳೆದುಕೊಂಡಿದ್ದಾರೆ.

Story first published: Wednesday, June 17, 2020, 17:49 [IST]
Other articles published on Jun 17, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+