ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

50ರ ಹರೆಯಕ್ಕೆ ಕಾಲಿಟ್ಟ ದಿಗ್ಗಜ ಕ್ರಿಕೆಟಿಗ ಅನಿಲ್ ಕುಂಬ್ಳೆ: ಶುಭಾಶಯಗಳ ಮಹಾಪೂರ

Cricket fraternity wishes Anil Kumble on his 50th birthday

ವಿಶ್ವ ಕ್ರಿಕೆಟ್‌ನ ಶ್ರೇಷ್ಠ ಲೆಗ್‌ಸ್ಪಿನ್ನರ್‌ಗಳಲ್ಲಿ ಒಬ್ಬರಾಗಿರುವ ಅನಿಲ್ ಕುಂಬ್ಳೆ ಜೀವನದ ಪ್ರಮುಖ ಹಂತವೊಂದನ್ನು ತಲುಪಿದ್ದಾರೆ. ಅನಿಲ್ ಕುಂಬ್ಳೆ ಇಂದು ಐವತ್ತೇ ಹರೆಯಕ್ಕೆ ಕಾಲಿಟ್ಟಿದ್ದಾರೆ. ಭಾರತೀಯ ಕ್ರಿಕೆಟ್‌ನಲ್ಲಿ ಜಂಬೋ ಎಂದೇ ಖ್ಯಾತರಾಗಿದ್ದ ಅನಿಲ್ ಕುಂಬ್ಳೆ ಸದ್ಯ ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮುಖ್ಯ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಭಾರತ ರಾಷ್ಟ್ರೀಯ ತಂಡಕ್ಕೆ ಅನಿಲ್ ಕುಂಬ್ಳೆ 1990ರಲ್ಲಿ ಪದಾರ್ಪಣೆಯನ್ನು ಮಾಡಿದ್ದರು. 18 ವರ್ಷದ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನದಲ್ಲಿ ಅನಿಲ್ ಕುಂಬ್ಳೆ 132 ಟೆಸ್ಟ್ ಪಂದ್ಯ ಹಾಗೂ 271 ಅಂತಾರಾಷ್ಟ್ರೀಯ ಎಕದಿನ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.

ಐಪಿಎಲ್‌ನಲ್ಲಿ ಕ್ವಿಂಟನ್ ಡಿ ಕಾಕ್ ಬಾರಿಸಿರುವ ಅತ್ಯಧಿಕ ರನ್ ದಾಖಲೆಗಳುಐಪಿಎಲ್‌ನಲ್ಲಿ ಕ್ವಿಂಟನ್ ಡಿ ಕಾಕ್ ಬಾರಿಸಿರುವ ಅತ್ಯಧಿಕ ರನ್ ದಾಖಲೆಗಳು

ಭಾರತೀಯ ಕ್ರಿಕೆಟ್ ತಂಡದಲ್ಲಿ ಸಾಕಷ್ಟು ದಾಖಲೆಗಳನ್ನು ಬರೆದಿದ್ದಾರೆ ಅನಿಲ್ ಕುಂಬ್ಳೆ. ಭಾರತೀಯ ಕ್ರಿಕೆಟ್‌ನಲ್ಲಿ ಟೆಸ್ಟ್ ಮಾದರಿಯಲ್ಲಿ 600 ವಿಕೆಟ್ ಪಡೆದ ಏಕೈಕ ಬೌಲರ್ ಎಂಬ ಖ್ಯಾತಿ ಅನಿಲ್ ಕುಂಬ್ಳೆಗಿದೆ. ಕ್ರಿಕೆಟ್ ಇತಿಹಾಸದಲ್ಲಿ ಇನ್ನಿಂಗ್ಸ್‌ವೊಂದರಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಪಡೆದ ಎರಡನೇ ಬೌಲರ್ ಎಂಬ ಖ್ಯಾತಿಯೂ ಅನಿಲ್ ಕುಂಬ್ಳೆ ಹೆಸರಿನಲ್ಲಿದೆ. 1999ರಲ್ಲಿ ಡೆಲ್ಲಿಯ ಫಿರೋಜ್ ಶಾ ಕೋಟ್ಲಾ ಅಂಗಳದಲ್ಲಿ ಪಾಕ್ ವಿರುದ್ದದ ಪಂದ್ಯದಲ್ಲಿ ಕುಂಬ್ಳೆ ಈ ಸಾಧನೆಯನ್ನು ಮಾಡಿದ್ದರು.

ನಿವೃತ್ತಿಯ ನಂತರ ಅನಿಲ್ ಕುಂಬ್ಳೆ ಟೀಮ್ ಇಂಡಿಯಾದ ಕೋಚ್ ಆಗಿಯೂ ಕರ್ತವ್ಯ ಸಿರ್ವಹಿಸಿದ್ದಾರೆ. ಸದ್ಯ ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಕೋಚ್ ಆಗಿ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ. ಈ ಬಾರಿಯ ಆವೃತ್ತಿಯಲ್ಲಿ ಮುಖ್ಯ ಕೋಚ್ ಆಗಿರುವ ಏಕೈಕ ಭಾರತೀಯ ಆಗಿದ್ದಾರೆ ಅನಿಲ್ ಕುಂಬ್ಳೆ. ಆದರೆ ಕಿಂಗ್ಸ್ ಇಲೆವೆನ್ ಪಂಜಾಬ್ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು ನಿರಾಸೆ ಮೂಡಿಸಿದೆ.

ಇನ್ನು ಅನಿಲ್ ಕುಂಬ್ಳೆ ಐವತ್ತರ ಹರೆಯಕ್ಕೆ ಕಾಲಿಟ್ಟ ಈ ಸಂದರ್ಭದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್ ಸೇರಿದಂತೆ ಹಲವಾರು ದಿಗ್ಗಜರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

Story first published: Saturday, October 17, 2020, 15:22 [IST]
Other articles published on Oct 17, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X