ವಿರಾಟ್ ಕೊಹ್ಲಿಯದ್ದು ಅದ್ಭುತ ವ್ಯಕ್ತಿತ್ವ ಎಂದು ಹಾಡಿ ಹೊಗಳಿದ ಮೈಕಲ್ ವಾನ್

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯವನ್ನು ಭಾರತ ಓವಲ್ ಮೈದಾನದಲ್ಲಿ ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಮೂಲಕ ಸರಣಿಯಲ್ಲಿ 2-1 ಅಂತರದ ಮುನ್ನಡೆಯನ್ನು ಸಾಧಿಸಿದೆ. ಓವಲ್ ಅಂಗಳದಲ್ಲಿ ನಡೆದ ಈ ನಾಲ್ಕನೇ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿದ ಪ್ರದರ್ಶನಕ್ಕೆ ಕ್ರಿಕೆಟ್‌ನ ಅಭಿಮಾನಿಗಳು ಹಾಗೂ ಪಂಡಿತರು ಅಪಾರ ಮೆಚ್ಚುಗೆ ಸೂಚಿಸಿದ್ದಾರೆ. ಇದಕ್ಕೆ ಇಂಗ್ಲೆಂಡ್ ತಂಡದ ಮಾಜಿ ಆಟಗಾರರು ಹೊರತಾಗಿಲ್ಲ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯ ಬಗ್ಗೆ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ ಭಾರೀ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಇಂಗ್ಲೆಂಡ್ ತಮಡದ ಮಾಜಿ ನಾಯಕ ಮೈಕಲ್ ವಾನ್ ಅದ್ಭುತ ನಾಯಕ ಎಂದು ಬಣ್ಣಿಸಿದ್ದಾರೆ. ಟೆಸ್ಟ್ ಪಂದ್ಯವನ್ನು ಗೆಲ್ಲುವುದು ಹೇಗೆ ಎಂಬುದಕ್ಕೆ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಓವಲ್ ಮೈದಾನದಲ್ಲಿ ಅದ್ಭುತವಾದ ರಣತಂತ್ರದ ಪಾಠ ಕಲಿಸಿದರು ಎಂದಿದ್ದಾರೆ ಮೈಕಲ್ ವಾನ್. ಓವಲ್ ಅಂಗಳದಲ್ಲಿ ಟೀಮ್ ಇಂಡಿಯಾ 157 ರನ್‌ಗಳ ಅಂತರದಿಂದ ಅದ್ಭುತ ಗೆಲುವು ಸಾಧಿಸಿತು. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಸಾಧಿಸಿತು.

ಇಂಗ್ಲೆಂಡ್‌ಗೆ ಡ್ರಾ ಮಾಡಿಕೊಳ್ಳುವ ಯೋಗ್ಯತೆಯೂ ಇಲ್ಲ ಎಂಬುದು ನಾಚಿಕೆಗೇಡು; ಕಿಡಿಕಾರಿದ ಆಂಗ್ಲ ಕ್ರಿಕೆಟಿಗ!ಇಂಗ್ಲೆಂಡ್‌ಗೆ ಡ್ರಾ ಮಾಡಿಕೊಳ್ಳುವ ಯೋಗ್ಯತೆಯೂ ಇಲ್ಲ ಎಂಬುದು ನಾಚಿಕೆಗೇಡು; ಕಿಡಿಕಾರಿದ ಆಂಗ್ಲ ಕ್ರಿಕೆಟಿಗ!

"ವಿರಾಟ್ ಕೊಹ್ಲಿ ಓರ್ವ ಅದ್ಭುತವಾದ ನಾಯಕ. ಆತನ ಬಳಿ ಅದ್ಭುತವಾದ ಶಕ್ತಿಯಿದೆ. ಪಂದ್ಯದ ಸಂದರ್ಣದಲ್ಲಿ ಆತ ಕಹಳೆಯ ಶೈಲಿಯಲ್ಲಿ ಸರ್ಭರಮಾಚರಣೆ ಮಾಡಿ 'ಬಾಮಿ ಆರ್ಮಿ'ಗೆ ಕೆಣಕಿದ್ದ. ನನಗದು ಇಷ್ಟವಾಗಿತ್ತು. ಈ ರೀತಿಯ ವ್ಯಕ್ತಿತ್ವಗಳನ್ನು ನಾವು ಕ್ರಿಕೆಟ್‌ನಲ್ಲಿ ಹೊಂದಿಲ್ಲ. ಈ ಮೂಲಕ ವಿರಾಟ್ ತನ್ನ ತಂಡದ ಅಭಿಮಾನಿಗಳ ಪರವಾಗಿ ನಿಲ್ಲುತ್ತಾರೆ" ಎಂದು ಮೈಕಲ್ ವಾನ್ ಹೇಳಿದ್ದಾರೆ.

"ವಿರಾಟ್ ಕೊಹ್ಲಿಯದ್ದು ಅದ್ಭುತವಾದ ವ್ಯಕ್ತಿತ್ವ. ಓವಲ್ ಪಂದ್ಯದಲ್ಲಿ ಕೊಹ್ಲಿ ಟೆಸ್ಟ್ ಪಂದ್ಯವನ್ನು ಹೇಗೆ ಗೆಲ್ಲಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ವಿರಾಟ್ ಕೊಹ್ಲಿಯ ಸಂಭ್ರಮಾಚರಣೆಯ ಬಗ್ಗೆ ಕೆಲವರು ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ಅವರಿಗೆ ಮನರಂಜನೆಯ ಬಗ್ಗೆ ತಿಳಿದಿಲ್ಲ. ನಾವು ಮನೋರಂಜನಾ ಉದ್ಯಮದಲ್ಲಿದ್ದೇವೆ. ವಿರಾಟ್ ಕೊಹ್ಲಿಯಂತಾ ಆಟಗಾರರ ಅಗತ್ಯ ನಮಗಿದೆ". ಅಂತಾ ವ್ಯಕ್ತಿತ್ವಗಳು ಇರಬೇಕು ಎಂದು ಮೈಕಲ್ ವಾನ್ ಹೇಳಿಕೆ ನೀಡಿದ್ದಾರೆ.

ಓವಲ್ ಟೆಸ್ಟ್‌ನ ಅಂತಿಮ ದಿನದಾಟದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತುತ್ತೂರು ಊದುವ ಶೈಲಿಯಲ್ಲಿ ಸಂಭ್ರಮಾಚರಣೆ ಮಾಡಿದ್ದರು. ಈ ಮೂಲಕ ಇಂಗ್ಲೆಂಡ್ ತಂಡದ ಅಭಿಮಾನಿಗಳ ಬಳಗವಾದ 'ಬಾಮಿ ಆರ್ಮಿ'ಯನ್ನು ಅಣಕಿಸಿದ್ದರು. ಜಸ್ಪ್ರೀತ್ ಬೂಮ್ರಾ ಎಸೆತದಲ್ಲಿ ಇಂಗ್ಲೆಂಡ್ ದಾಂಡಿಗ ಒಲ್ಲಿ ಪೋಪ್ ಬೌಲ್ಡ್ ಆಗಿ ವಿಕೆಟ್ ಕಳೆದುಕೊಂಡ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಈ ರೀತಿಯಾಗಿ ಅಣಕಿಸಿದ್ದರು. ವಿರಾಟ್ ಕೊಹ್ಲಿಯ ಈ ಸಂಭ್ರಮಾಚರಣೆಯ ಶೈಲಿಗೆ ಇಂಗ್ಲೆಂಡ್‌ ಅಭಿಮಾನಿಗಳು ವಿರೋಧವನ್ನು ವ್ಯಕ್ತಪಡಿಸಿದ್ದರು. ಆದರೆ ಮೈಕಲ್ ವಾನ್ ಮಾತ್ರ ಟೀಮ್ ಇಂಡಿಯಾ ನಾಯಕನಿಗೆ ಬೆಂಬಲವನ್ನು ನೀಡಿದರು.

ಹೆಡಿಂಗ್ಲೆ ಪಂದ್ಯವನ್ನು ಗೆದ್ದು ಸಂಭ್ರಮದಲ್ಲಿದ್ದ ಇಂಗ್ಲೆಂಡ್ ತಂಡ ಅದೇ ಉತ್ಸಾಹದಲ್ಲಿ ಲಂಡನ್‌ನ ಓವಲ್ ಕ್ರೀಡಾಂಗಣಕ್ಕೆ ಇಳಿದಿತ್ತು. ಐವತ್ತು ವರ್ಷಗಳಿಂದ ಭಾರತ ಗೆಲುವನ್ನೇ ಕಾಣದ ಓವಲ್ ಅಂಗಳದಲ್ಲಿಯೂ ಇಂಗ್ಲೆಂಡ್ ತಂಡ ಗೆದ್ದು ಬೀಗುವ ಹುಮ್ಮಸ್ಸಿನಲ್ಲಿತ್ತು. ಇದಕ್ಕೆ ಪೂರಕವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡ ಬೌಲಿಂಗ್‌ನಲ್ಲಿ ಭಾರತ ತಂಡಕ್ಕೆ ಆಘಾತ ನೀಡಿತ್ತು. ಭಾರತ ತಂಡವನ್ನು 191 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಇಂಗ್ಲೆಂಡ್ ತಮಡ ಸಫಲವಾಗಿತ್ತು. ನಂತರ ಮೊದಲ ಇನ್ನಿಂಗ್ಸ್‌ನ ಬ್ಯಾಟಿಂಗ್‌ನಲ್ಲಿ ಆರಂಭಿಕ ಆಘಾತ ಅನುಭವಿಸಿದ ನಂತರ ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಹೋರಾಟದ ಪರಿಣಾಮವಾಗಿ ಇಂಗ್ಲೆಂಡ್ 99 ರನ್‌ಗಳ ಮುನ್ನಡೆ ಪಡೆಯಲು ಸಾಧ್ಯವಾಗಿತ್ತು.

ಭಾರತ vs ಇಂಗ್ಲೆಂಡ್: ಅಂತಿಮ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ 3 ಪ್ರಮುಖ ಬದಲಾವಣೆ ಸಂಭವಭಾರತ vs ಇಂಗ್ಲೆಂಡ್: ಅಂತಿಮ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ 3 ಪ್ರಮುಖ ಬದಲಾವಣೆ ಸಂಭವ

ಟೀಮ್ ಇಂಡಿಯಾ ನಾಯಕತ್ವದಿಂದ ವಿರಾಟ್ ಔಟ್ | Oneindia Kannada

ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ 99 ರನ್‌ಗಳ ಹಿನ್ನಡೆ ಅನುಭವಿಸಿದ ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿತು. ಆರಂಭಿಕ ಆಟಗಾರರಿಂದ ಹಿಡಿದು ಟೀಮ್ ಇಂಡಿಯಾದ ಬಹುತೇಕ ಎಲ್ಲಾ ಆಟಗಾರರು ಕೂಡ ಉತ್ತಮ ಕೊಡುಗೆ ನೀಡಲು ಸಾಧ್ಯವಾಗಿತ್ತು. ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿ ತಂಡದ ಬೃಹತ್ ಮೊತ್ತಕ್ಕೆ ಉತ್ತಮ ವೇದಿಕೆ ಸೃಷ್ಟಿಸಿದರು. ಬಳಿಕ ಶಾರ್ದೂಲ್ ಠಾಕೂರ್ ಹಾಗೂ ರಿಷಭ್ ಪಂತ್ ಕೂಡ ಉತ್ತಮ ಪ್ರದರ್ಶನ ನೀಡಿ ಅರ್ಧ ಶತಕದ ಪ್ರದರ್ಶನ ನೀಡಿದರು. ಈ ಮೂಲಕ ಭಾರತ 466 ರನ್‌ಗಳನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಗಳಿಸಲು ಶಕ್ತವಾಯಿತು. ಈ ಮೂಲಕ ಎದುರಾಳಿ ಇಂಗ್ಲೆಂಡ್‌ಗೆ ಎರಡನೇ ಇನ್ನಿಂಗ್ಸ್‌ನಲ್ಲಿ 367 ರನ್‌ಗಳ ದಾಖಲೆಯ ಗುರಿಯನ್ನು ನೀಡಿತ್ತು. ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಬೌಲಿಂಗ್‌ನಲ್ಲಿಯೂ ಅಮೋಘ ಯಶಸ್ಸು ಸಾಧಿಸಲು ಸಾಧ್ಯವಾಯಿತು. ಮೊದಲ ವಿಕೆಟ್‌ಗೆ ಭರ್ಜರಿ 100 ರನ್‌ಗಳ ಜೊತೆಯಾಟ ನೀಡಿದ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ಬಳಿಕ ಕುಸಿಯುತ್ತಾ ಸಾಗಿತು. ಟೀಮ್ ಇಂಡಿಯಾದ ಒಟ್ಟಾರೆ ನೀಡಿದ ಪ್ರದರ್ಶನದಿಂದಾಗಿ ಕೇವಲ 210 ರನ್‌ಗಳಿಗೆ ಇಂಗ್ಲೆಂಡ್ ಆಲೌಟ್ ಆಗಿತ್ತು. ಈ ಮೂಲಕ ಭಾರತ ತಂಡ 157 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, September 8, 2021, 19:44 [IST]
Other articles published on Sep 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X