ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಶ್ವಕಪ್‌: ಮಳೆಗೆ ಕೊಚ್ಚಿಹೋದ ಭಾರತ vs ನ್ಯೂಜಿಲೆಂಡ್ ಪಂದ್ಯ

Cricket World Cup: India vs New Zealand, Match 18 - Live Updates

ನಾಟಿಂಗ್‌ಹ್ಯಾಮ್, ಜೂನ್ 13: ಪ್ರಸಕ್ತ ವಿಶ್ವಕಪ್ ಟೂನರ್ನಿಯಲ್ಲಿ ಅಜೇಯ ತಂಡಗಳಾದ ನ್ಯೂಜಿಲೆಂಡ್ ಮತ್ತು ಭಾರತ ತಂಡಗಳ ನಡುವೆ ಗುರುವಾರ ನಡೆಯಬೇಕಿದ್ದ ಪಂದ್ಯ ಮಳೆಯಿಂದಾಗಿ ಟಾಸ್‌ ಕೂಡ ಕಾಣದೆ ರದ್ದಾಗಿದೆ.

ಇಲ್ಲಿನ ಟ್ರೆಂಟ್‌ ಬ್ರಿಜ್‌ ಕ್ರೀಡಾಂಗಣದಲ್ಲಿ ಗುರುವಾರ ನಡೆಯಬೇಕಿದ್ದ ಭಾರತ ಮತ್ತು ನ್ಯೂಜಿಲೆಂಡ್‌ ನಡುವಣ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆದರೆ, ಮುಂಜಾನೆಯಿಂದಲೂ ಎಡೆ ಬಿಡದೆ ಸುರಿಯುತ್ತಿದ್ದ ಮಳೆ ಪಂದ್ಯದ ಟಾಸ್‌ ಕೂಡ ನಡೆಯಲು ಬಿಡಲಿಲ್ಲ.

ಮಳೆ ನಿಂತರ ಓವರ್‌ಗಳನ್ನು ಕಡಿತ ಗೊಳಿಸಿ ಪಂದ್ಯ ನಡೆಸಲು ಗಂಟೆಗಳ ಕಾಲ ಕಾಯ್ದರೂ, ಮಳೆರಾಯನ ಆರ್ಭಟ ಕಡಿಮೆಯಾಗದ ಕಾರಣ ಅಂತಿಮವಾಗಿ ಪಂದ್ಯವನ್ನು ರದ್ದು ಪಡಿಸಲಾಯಿತು. ಇದರೊಂದಿಗೆ ಅಜೇಯ ತಂಡಗಳಾದ ಭಾರತ ಮತ್ತು ನ್ಯೂಜಿಲೆಂಡ್ ತಲಾ ಒಂದು ಅಂಕಗಳನ್ನು ತಮ್ಮದಾಗಿಸಿಕೊಂಡಿವೆ.

ಟೂರ್ನಿಯಲ್ಲಿ ಮೆಯಿಂದಾಗಿ ರದ್ದಾದ ನಾಲ್ಕನೇ ಪಂದ್ಯ ಇದಾಗಿದ್ದು, ಇಂಗ್ಲೆಂಡ್‌ನಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ಮತ್ತಷ್ಟು ಪಂದ್ಯಗಳು ರದ್ದಾಗುವ ಸಾಧ್ಯತೆ ಇದೆ. ಕೇವಲ ಸೆಮಿಫೈನಲ್‌ ಮತ್ತು ಫೈನಲ್‌ ಪಂದ್ಯಗಳಿಗಷ್ಟೇ ಬದಲಿ ದಿನವನ್ನು ನಿಯೋಜಿಸಲಾಗಿದೆ. ಹೀಗಾಗಿ ಲೀಗ್‌ ಹಂತದಲ್ಲಿ ಪಂದ್ಯ ರದ್ದಾದರೆ ತಂಡಗಳಿಗೆ ಅಂಕ ಹಂಚಿಕೊಳ್ಳದೆ ಬೇರೆ ಮಾರ್ಗವಿಲ್ಲ.

ಭಾರತ vs ನ್ಯೂಜಿಲ್ಯಾಂಡ್, ಜೂನ್ 13, Live ಸ್ಕೋರ್‌ಕಾರ್ಡ್

1
43661

ಭಾರತ ತಂಡ: ರೋಹಿತ್ ಶರ್ಮಾ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ವಿಜಯ್ ಶಂಕರ್ / ದಿನೇಶ್ ಕಾರ್ತಿಕ್, ಎಂಎಸ್ ಧೋನಿ, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ ಕುಮಾರ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಜಸ್‌ಪ್ರೀತ್ ಬುಮ್ರಾ.

ನ್ಯೂಜಿಲ್ಯಾಂಡ್ ತಂಡ: ಮಾರ್ಟಿನ್ ಗಪ್ಟಿಲ್, ಕಾಲಿನ್ ಮನ್ರೊ, ಕೇನ್ ವಿಲಿಯಮ್ಸನ್, ರಾಸ್ ಟೇಲರ್, ಟಾಮ್ ಲೇಥಮ್‌, ಜಿಮ್ಮಿ ನೀಶಮ್, ಕಾಲಿನ್ ಡೆ'ಗ್ರ್ಯಾಂಡ್‌ಹೋಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯುಸನ್, ಟ್ರೆಂಟ್ ಬೌಲ್ಟ್.

Story first published: Thursday, June 13, 2019, 20:37 [IST]
Other articles published on Jun 13, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X