ದಂತಕತೆ ಕಪಿಲ್ ದೇವ್‌ಗೆ ಹೃದಯಾಘಾತ, ದೆಹಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ನವದೆಹಲಿ: ಭಾರತದ ಕ್ರಿಕೆಟ್ ದಂತಕತೆ, ಭಾರತಕ್ಕೆ ಚೊಚ್ಚಲ ವಿಶ್ವಕಪ್ ಗೆಲ್ಲಿಸಿಕೊಟ್ಟಿದ್ದ ಮಾಜಿ ನಾಯಕ ಕಪಿಲ್ ದೇವ್‌ಗೆ ಹೃದಯಾಘಾತವಾಗಿದೆ. ಅವರಿಗೆ ದೆಹಲಿಯ ಆಸ್ಪತ್ರೆಯಲ್ಲಿ ಆ್ಯಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
61 ವರ್ಷ ಹರೆಯದವರಾಗಿರುವ ಕಪಿಲ್ ದೇವ್, 1983ರಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಗೆದ್ದಾಗ ತಂಡದ ನಾಯಕರಾಗಿದ್ದರು. ಕಪಿಲ್ ದೇವ್‌ಗೆ ಹೃದಯಾಘಾತವಾಗಿರುವ ವಿಚಾರವನ್ನು ಪತ್ರಕರ್ತೆ ಟೀನಾ ಠಾಕರ್ ಟ್ವಿಟರ್‌ನಲ್ಲಿ ಹಾಕಿಕೊಂಡಿದ್ದಾರೆ.
ಸದ್ಯ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಸಂಬಂಧಿಸಿ ದೇವ್ ತನ್ನ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತ ಸಕ್ರಿಯವಾಗಿದ್ದರು. ಕಪಿಲ್‌ಗೆ ಸಕ್ಕರೆ ಖಾಯಿಲೆಗೆ ಸಂಬಂಧಿಸಿ ಆರೋಗ್ಯ ಸಮಸ್ಯೆಯೂ ಇತ್ತು.
ಟೀಮ್ ಇಂಡಿಯಾ ಪರ 131 ಟೆಸ್ಟ್ ಪಂದ್ಯಗಳನ್ನಾಡಿರುವ ಆಲ್ ರೌಂಡರ್ ಕಪಿಲ್ ದೇವ್, 5248 ರನ್, 434 ವಿಕೆಟ್ ದಾಖಲೆ ಹೊಂದಿದ್ದಾರೆ. ಇನ್ನು 225 ಏಕದಿನ ಪಂದ್ಯಗಳಲ್ಲಿ 3783 ರನ್ ಗಳಿಸಿದ್ದಾರೆ, 253 ವಿಕೆಟ್‌ಗಳನ್ನು ಉರುಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications