ತಂದೆ - ತಾಯಿ ಆಗುತ್ತಿರುವ ಖುಷಿ ಹಂಚಿಕೊಂಡ ಕೃಷ್ಣಪ್ಪ ಗೌತಮ್ - ಅರ್ಚನಾ ದಂಪತಿ

ಟೀಮ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ ರೌಂಡರ್ ಆಟಗಾರ ಕೃಷ್ಣಪ್ಪ ಗೌತಮ್ ಇತ್ತೀಚೆಗಷ್ಟೇ ತಮ್ಮ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಕುಟುಂಬಕ್ಕೆ ನೂತನ ಸದಸ್ಯನ ಆಗಮನವಾಗುತ್ತಿರುವುದರ ಕುರಿತು ಪೋಸ್ಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಹೌದು, ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ಮತ್ತು ಅವರ ಪತ್ನಿ ಅರ್ಚನಾ ಸುಂದರ್ ತಂದೆ ತಾಯಿ ಆಗುತ್ತಿರುವ ಖುಷಿಯ ವಿಚಾರವನ್ನು ಕೃಷ್ಣಪ್ಪ ಗೌತಮ್ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಕೆಲವೊಂದಷ್ಟು ಫೋಟೋಗಳನ್ನು ಅಪ್ ಲೋಡ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಜೆರ್ಸಿಯನ್ನು ಧರಿಸಿ ಕೃಷ್ಣಪ್ಪ ಗೌತಮ್ ಮತ್ತು ಅರ್ಚನಾ ಸುಂದರ್ ಫೋಟೋಗೆ ಪೋಸ್ ನೀಡಿದ್ದಾರೆ.

ಹೀಗೆ ಖುಷಿಯ ವಿಚಾರವನ್ನು ಹಂಚಿಕೊಳ್ಳುತ್ತಾ ಫೋಟೋಗಳನ್ನು ಅಪ್ಲೋಡ್ ಮಾಡಿರುವ ಕೃಷ್ಣಪ್ಪ ಗೌತಮ್ ತಮ್ಮ ಕುಟುಂಬಕ್ಕೆ ನೂತನ ಸದಸ್ಯರ ಆಗಮನವಾಗುತ್ತಿದ್ದು 2022ರ ಜನವರಿ ವೇಳೆಗೆ ತಮ್ಮ ಮಗುವಿನ ಆಗಮನವಾಗಲಿದೆ ಎಂಬ ವಿಚಾರವನ್ನು ಕೂಡ ಬರೆದುಕೊಂಡಿದ್ದಾರೆ. ಇನ್ನು ಇತ್ತೀಚಿಗಷ್ಟೆ ಶ್ರೀಲಂಕಾ ವಿರುದ್ಧ ನಡೆದ ಸೀಮಿತ ಓವರ್‌ಗಳ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಕೃಷ್ಣಪ್ಪ ಗೌತಮ್ ಕೇವಲ ಒಂದೇ ಒಂದು ವಿಕೆಟ್‌ನ್ನು ಪಡೆದಿದ್ದರು.

ಇನ್ನು ಈ ವರ್ಷ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ ಕೃಷ್ಣಪ್ಪ ಗೌತಮ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ 9.25 ಕೋಟಿ ರೂಪಾಯಿಗಳನ್ನು ನೀಡಿ ಖರೀದಿಸುವುದರ ಮೂಲಕ ಎಲ್ಲರಲ್ಲಿಯೂ ಆಶ್ಚರ್ಯವನ್ನುಂಟು ಮಾಡಿತ್ತು. ಆದರೆ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 7 ಪಂದ್ಯಗಳನ್ನಾಡಿದ್ದು ಯಾವುದೇ ಪಂದ್ಯದಲ್ಲಿಯೂ ಕೂಡ ಕೃಷ್ಣಪ್ಪ ಗೌತಮ್ ಅವರಿಗೆ ಆಡುವ ಬಳಗದಲ್ಲಿ ಸ್ಥಾನವನ್ನು ನೀಡದೆ ತಂಡದಿಂದ ಹೊರಗಿಟ್ಟಿದೆ. ಹೀಗೆ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲರ್ಧದಲ್ಲಿ ಸಂಪೂರ್ಣವಾಗಿ ಬೆಂಚ್ ಕಾದಿರುವ ಕೃಷ್ಣಪ್ಪ ಗೌತಮ್ ಐಪಿಎಲ್ ದ್ವಿತೀಯ ಭಾಗದಲ್ಲಾದರೂ ಕಣಕ್ಕಿಳಿಯುವ ಅವಕಾಶವನ್ನು ಪಡೆದುಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಐಪಿಎಲ್ ಪುನಾರಂಭ ಯಾವಾಗ?

ಇದೇ ವರ್ಷದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ 29 ಪಂದ್ಯಗಳು ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿದ್ದವು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಕೂಡಲೇ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ತೀರ್ಮಾನವನ್ನು ಕೈಗೊಂಡಿತ್ತು.

ಹೀಗೆ ಮಧ್ಯಂತರದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಯುಎಇಯಲ್ಲಿ ನಡೆಸಲು ಬಿಸಿಸಿಐ ನಿರ್ಧಾರವನ್ನು ಮಾಡಿತ್ತು. ಬಿಸಿಸಿಐ ನಿರ್ಧರಿಸಿದಂತೆಯೇ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಬಾಕಿ ಉಳಿದಿರುವ 31 ಪಂದ್ಯಗಳು ಇದೇ ಸೆಪ್ಟೆಂಬರ್ 19ರಿಂದ ಮುಂದುವರೆಯಲಿವೆ.

ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಥಾನ

ಹಸರಂಗನಿಗೆ ವಾಟ್ಸ್ ಆಪ್ ಮೆಸೇಜ್ ಮಾಡಿದ ವಿರಾಟ್ ! | Oneindia Kannada

ಕಳೆದ ಆವೃತ್ತಿಯಲ್ಲಿ ಲೀಗ್ ಹಂತದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಉತ್ತಮ ಪ್ರದರ್ಶನವನ್ನು ನೀಡುವುದರ ಮೂಲಕ ಒಳ್ಳೆಯ ಆರಂಭವನ್ನು ಪಡೆದುಕೊಂಡಿದೆ. ಈ ಬಾರಿಯ ಐಪಿಎಲ್ ಟೂರ್ನಿಯ ಪ್ರಥಮಾರ್ಧದಲ್ಲಿ 7 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ಪಂದ್ಯಗಳಲ್ಲಿ ಜಯಗಳಿಸಿ 2 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಉತ್ತಮ ಸ್ಥಾನದಲ್ಲಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, September 15, 2021, 11:48 [IST]
Other articles published on Sep 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X