ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಸಹೋದರಿ ಕೋವಿಡ್-19ಗೆ ಬಲಿ

ಕಡೂರು: ಭಾರತದ ಕ್ರಿಕೆಟ್ ತಾರೆ ವೇದಾಕೃಷ್ಣಮೂರ್ತಿ ಅವರ ಸಹೋದರಿ ವತ್ಸಲಾ ಕೃಷ್ಣಮೂರ್ತಿ ಅವರು ಕೋವಿಡ್-19 ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ಮೇ 5) ತಡರಾತ್ರಿ ವತ್ಸಲಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ವೇದಾಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ (63) ಕೂಡ ಕೋವಿಡ್-19ಗೆ ತುತ್ತಾಗಿ ಸಾವನ್ನಪ್ಪಿದ್ದರು. ಅವರ ಕುಟುಂಬಸ್ಥರಲ್ಲಿ ಕೆಲವರಿಗೆ ಸೋಂಕು ತಗುಲಿತ್ತು ಎನ್ನಲಾಗಿದೆ. ಮೃತ ವತ್ಸಲಾ ಅವರನ್ನು ಕಡೂರಿನ ಜಮೀನಿನಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೊರೊನಾವೈರಸ್ ದ್ವಿತೀಯ ಅಲೆ ಭಾರತದಲ್ಲಿ ಭೀತಿ ಸೃಷ್ಠಿಸಿದೆ. ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಜನ ಸಾವನ್ನಪ್ಪುತ್ತಿರುವುದು ವರದಿಯಾಗುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ ಸೌಲಭ್ಯದ ಕೊರತೆಯೂ ಕಾಣಿಸುತ್ತಿದೆ. ಭಾರತದಲ್ಲಿ ಸದ್ಯ ಜನರ ಪರಿಸ್ಥಿತಿ ಸಂಕಷ್ಟಕ್ಕೀಡಾಗಿದೆ.
ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿರುವ ಕನ್ನಡತಿ ವೇದಾ ಕೃಷ್ಣಮೂರ್ತಿ 48 ಏಕದಿನ ಪಂದ್ಯಗಳಲ್ಲಿ ಮತ್ತು 76 ಟಿ20ಐ ಪಂದ್ಯಗಳಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications