ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್, ಏಕದಿನ ಸರಣಿ: ಪರಿಷ್ಕೃತ ವೇಳಾಪಟ್ಟಿ ಪ್ರಕಟ

ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಮತ್ತು ಟೆಸ್ಟ್ ಸರಣಿಗಳಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ, ಸದ್ಯದಲ್ಲೇ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, ಈ ಕುರಿತಾಗಿ ಪರಿಷ್ಕೃತ ವೇಳಾಪಟ್ಟಿಯನ್ನ ಕ್ರಿಕೆಟ್ ಸೌತ್ ಆಫ್ರಿಕಾಬ ಬಿಡುಗಡೆ ಮಾಡಿದೆ.
ಭಾರತ ತಂಡ ಮೂರು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಕೋವಿಡ್-19 ಹೊಸ ರೂಪಾಂತರ ಒಮಿಕ್ರೋನ್ ವೈರಸ್ ಹಿನ್ನಲೆಯಲ್ಲಿ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಸರಣಿಗಳ ವೇಳಾಪಟ್ಟಿ ಬದಲಾಗಿದೆ.

ಭಾರತ-ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿ 9 ದಿನ ಮುಂದೂಡಿಕೆ
ಭಾರತದ ದಕ್ಷಿಣ ಆಫ್ರಿಕಾ ಪ್ರವಾಸವು ಈಗ ಪರಿಷ್ಕೃತ ದಿನಾಂಕಗಳೊಂದಿಗೆ ಪ್ರಾರಂಭವಾಗುತ್ತದೆ, ಮೊದಲ ಟೆಸ್ಟ್ ಡಿಸೆಂಬರ್ 26 ರಂದು ಪ್ರಾರಂಭವಾಗುತ್ತದೆ. ಈ ಮೊದಲು ವೇಳಾಪಟ್ಟಿಯ ಪ್ರಕಾರ ಮೂರು ಪಂದ್ಯಗಳ ಸರಣಿಯ ಮೊದಲ ಟೆಸ್ಟ್ 9 ದಿನಗಳ ಮೊದಲು (ಡಿಸೆಂಬರ್ 17) ಪ್ರಾರಂಭವಾಗಬೇಕಿತ್ತು.
ಭಾರತವು ಮೂಲತಃ ನಿಗದಿತ ಸಮಯಕ್ಕಿಂತ ಒಂದು ವಾರದ ನಂತರ ದಕ್ಷಿಣ ಆಫ್ರಿಕಾಗೆ ತೆರಳಿದೆ. ಜೊತೆಗೆ ಬಾಕ್ಸಿಂಗ್ ಡೇ ಟೆಸ್ಟ್‌ನೊಂದಿಗೆ ಸರಣಿ ಪ್ರಾರಂಭವಾಗುತ್ತದೆ, ಜನವರಿಯಲ್ಲಿ ಇನ್ನೂ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಾಗುತ್ತದೆ.

ಸೆಂಚುರಿಯನ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ
ಈ ಮೊದಲು ಸರಣಿಯ ಮೊದಲ ಎರಡು ಟೆಸ್ಟ್‌ಗಳನ್ನು ಜೋಹಾನ್ಸ್‌ಬರ್ಗ್ ಮತ್ತು ಪ್ರಿಟೋರಿಯಾದಲ್ಲಿ ನಿಗದಿಪಡಿಸಲಾಗಿತ್ತು. ಆದ್ರೆ ಈ ವೆನ್ಯೂಗಳನ್ನ ಮತ್ತೆ ಪರಿಷ್ಕರಿಸಿದ್ದು, ಸೆಂಚುರಿಯನ್ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26ರಂದು ನಡೆಯಲಿದೆ. ಇನ್ನು ಎರಡನೇ ಪಂದ್ಯವು ಹೊಸ ವರ್ಷದಲ್ಲಿ, ಅಂದರೆ 2022 ರಿಂದ ಆರಂಭವಾಗಲಿದೆ.
ನ್ಯೂಜಿಲೆಂಡ್ ವಿರುದ್ಧ ಬೃಹತ್ ಗೆಲುವು ದಾಖಲಿಸಿದ ಟೀಮ್ ಇಂಡಿಯಾ ಕುರಿತು ನೆಟ್ಟಿಗರು ಪ್ರತಿಕ್ರಿಯಿಸಿದ್ದು ಹೀಗೆ

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ
ಮೊದಲ ಟೆಸ್ಟ್: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್, ಸೆಂಚುರಿಯನ್
ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್
ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್ ಟೌನ್

ಏಕದಿನ ಸರಣಿ ವೇಳಾಪಟ್ಟಿ
ಭಾರತವು ಮೂರು ಏಕದಿನ ಪಂದ್ಯಗಳನ್ನು ಸಹ ಆಡುತ್ತದೆ. ಆದರೆ ಬಿಸಿಸಿಐ ಮೊದಲೇ ಘೋಷಿಸಿದಂತೆ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಮತ್ತೆ ನಿಗದಿಪಡಿಸಲಾಗುತ್ತದೆ.
ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM
ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM
ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್ ಟೌನ್, ಸಮಯ - 2.00 PM
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications