ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ CSK: ಪ್ಲೇಯಿಂಗ್ 11ನಲ್ಲಿ ಯಾರಿಗೆಲ್ಲಾ ಸ್ಥಾನ?

ಐಪಿಎಲ್ 13ನೇ ಆವೃತ್ತಿಯ 29ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್‌ರೈಸರ್ಸ್ ಹೈದ್ರಾಬಾದ್ ತಂಡಗಳು ದುಬೈ ಇಂಟರ್‌ನ್ಯಾಷ್‌ನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಸಿಎಸ್‌ಕೆ ಈ ಸೀಸನ್‌ನಲ್ಲಿ ಮೊದಲ ಬಾರಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ.
ಆಡಿರುವ ಏಳು ಪಂದ್ಯಗಳಲ್ಲಿ ಕೇವಲ ಎರಡು ಜಯಗಳಿಸಿರುವ ಚೆನ್ನೈ ಸೂಪರ್‌ಕಿಂಗ್ಸ್‌ಗೆ ಪ್ಲೇ ಆಫ್ ತಲುಪಲು ಪ್ರತಿ ಪಂದ್ಯವನ್ನೂ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈಗಾಗಲೇ ಅಂಕ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ಚೆನ್ನೈ , ಎಸ್‌ಆರ್‌ಹೆಚ್ ವಿರುದ್ಧ ಕೇವಲ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.
ಕಳೆದ ಪಂದ್ಯದಲ್ಲಿ ಸ್ಥಾನ ಪಡೆದಿದ್ದ ಬ್ಯಾಟ್ಸ್‌ಮನ್ ಜಗದೀಶನ್ ಬದಲು, ಸ್ಪಿನ್ನರ್ ಪಿಯೂಷ್ ಚಾವ್ಲಾಗೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಒದಗಿಸಲಾಗಿದೆ.
ಇನ್ನು ಆಡಿರುವ ಏಳು ಪಂದ್ಯಗಳಲ್ಲಿ ಮೂರು ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ಸನ್‌ರೈಸರ್ಸ್ ಹೈದ್ರಾಬಾದ್ ತಂಡವೂ ತನ್ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಒಂದು ಬದಲಾವಣೆ ಮಾಡಿದೆ. ಅಭಿಷೇಕ್ ಶರ್ಮಾ ಬದಲು ಎಡಗೈ ಸ್ಪಿನ್ನರ್ ಶಬಾಜ್ ನದೀಮ್ ಸ್ಥಾನ ಪಡೆದಿದ್ದಾರೆ.
ಸಿಎಸ್‌ಕೆ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಯಾರೆಲ್ಲಾ ಇದ್ದಾರೆ ಎಂಬುದರ ಮಾಹಿತಿ ಈ ಕೆಳಗಿದೆ.
ಚೆನ್ನೈ ಸೂಪರ್ ಕಿಂಗ್ಸ್:
ಶೇನ್ ವ್ಯಾಟ್ಸನ್, ಫಾಫ್ ಡುಪ್ಲೆಸಿಸ್, ಅಂಬಟಿ ರಾಯುಡು, ಎಂ.ಎಸ್. ಧೋನಿ, ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡ್ವೇನ್ ಬ್ರಾವೋ, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಪಿಯೂಷ್ ಚಾವ್ಲಾ, ಕರಣ್ ಶರ್ಮಾ
ಸನ್‌ರೈಸರ್ಸ್ ಹೈದ್ರಾಬಾದ್:
ಡೇವಿಡ್ ವಾರ್ನರ್, ಜಾನಿ ಬೈಸ್ಟ್ರೋವ್, ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಾಮ್ ಗರ್ಗ್, ವಿಜಯ್ ಶಂಕರ್, ರಶೀದ್ ಖಾನ್, ಶಬಾಜ್ ನದೀಮ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್, ಟಿ. ನಟರಾಜನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications