For Quick Alerts
ALLOW NOTIFICATIONS  
For Daily Alerts
 

CSK IPL 2023 Schedule : ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ ಹಾಗೂ ಪ್ರಮುಖ ಮಾಹಿತಿ

CSK IPL 2023 Schedule: Chennai Super Kings Matches Dates, Timings, Time Table and Venue Details

ಐಪಿಎಲ್ ಇತಿಹಾಸದ ಯಶಸ್ವಿ ತಂಡಗಳಲ್ಲಿ ಒಂದೆನಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿತ್ತು. ಕಳೆದ ಆವೃತ್ತಿಯಲ್ಲಿ ಸಾಕಷ್ಟು ಗೊಂದಲಕಾರಿಯಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರದರ್ಶನದಲ್ಲಿಯೂ ಕಳೆಗುಂದಿತ್ತು ಇದರ ಪರಿಣಾಮವಾಗಿ 9ನೇ ಸ್ಥಾನಿಯಾಗಿ ಗ್ರೂಪ್ ಹಂತದಿಂದ ಹೊರಬಿದ್ದುತ್ತು.

ಈ ಬಾರಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿಯೇ ಆಡಲಿದ್ದು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಆಡುವ ಮೂಲಕಅಭಿಯಾನ ಆರಂಭಿಸಲಿದೆ. ಎರಡನೇ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಆಡಿದರೆ ಅದಾದ ಬಳಿಕ ಬದ್ಧ ಎದುರಾಳಿಯಾದ ಮುಂಬೈ ಇಂಡಿಯನ್ಸ್ ತಂಡವನ್ನು ಏಪ್ರಿಲ್ 8ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ.

ಬಿ ಗುಂಪಿನಲ್ಲಿದೆ ಚೆನ್ನೈ ಸೂಪರ್ ಕಿಂಗ್ಸ್
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಗ್ರೂಪ್ 'ಬಿ'ನಲ್ಲಿ ಇದ್ದು ಇದರ ಜೊತೆಗೆ ಗ್ರೂಪ್ 'ಬಿ'ಯಲ್ಲಿ ಪಂಜಾಬ್ ಕಿಂಗ್ಸ್, ಸನ್‌ರೈಸರ್ಸರ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಇದೆ. ಈ ತಂಡಗಳ ಜೊತೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ತಲಾ ಒಂದು ಪಂದ್ಯವನ್ನು ಆಡಲಿದೆ.

ಗ್ರೂಪ್ ಎನಲ್ಲಿರುವ ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿದ್ದು ಇವುಗಳ ವಿರುದ್ಧ ತಲಾ ಎರಡು ಪಂದ್ಯಗಳನ್ನು ಸಿಎಸ್‌ಕೆ ಆಡಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಳಾಪಟ್ಟಿ

ಪಂದ್ಯ 1: ಮಾರ್ಚ್ 31, 2023 - ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಅಹಮದಾಬಾದ್ (ಸಂಜೆ 7:30)
ಪಂದ್ಯ 2: ಏಪ್ರಿಲ್ 3, 2023 - ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್, ಚೆನ್ನೈ (7:30PM)
ಪಂದ್ಯ 3: ಏಪ್ರಿಲ್ 8, 2023 - ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ (7:30PM)
ಪಂದ್ಯ 4: ಏಪ್ರಿಲ್ 12, 2023 - ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್, ಚೆನ್ನೈ (ಸಂಜೆ 7:30)
ಪಂದ್ಯ 5: ಏಪ್ರಿಲ್ 17, 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಚೆನ್ನೈ ಸೂಪರ್ ಕಿಂಗ್ಸ್, ಬೆಂಗಳೂರು (ಸಂಜೆ 7:30)
ಪಂದ್ಯ 6: ಏಪ್ರಿಲ್ 21, 2023: ಚೆನ್ನೈ ಸೂಪರ್ ಕಿಂಗ್ಸ್ vs ಸನ್‌ರೈಸರ್ಸ್ ಹೈದರಾಬಾದ್, ಚೆನ್ನೈ (ಸಂಜೆ 7:30)
ಪಂದ್ಯ 7: ಏಪ್ರಿಲ್ 23, 2023: ಕೋಲ್ಕತ್ತಾ ನೈಟ್ ರೈಡರ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ (ಸಂಜೆ 7:30)
ಪಂದ್ಯ 8: ಏಪ್ರಿಲ್ 27, 2023 - ರಾಜಸ್ಥಾನ ರಾಯಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಜೈಪುರ (ಸಂಜೆ 7:30)
ಪಂದ್ಯ 9: ಏಪ್ರಿಲ್ 30, 2023 - ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್, ಚೆನ್ನೈ (3:30PM)
ಪಂದ್ಯ 10: ಮೇ 4, 2023 - ಲಕ್ನೋ ಸೂಪರ್ ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ (ಮಧ್ಯಾಹ್ನ 3:30)
ಪಂದ್ಯ 11: ಮೇ 6, 2023 - ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್, ಚೆನ್ನೈ (3:30PM)
ಪಂದ್ಯ 12: ಮೇ 10, 2023: ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, ಚೆನ್ನೈ (ಸಂಜೆ 7:30)
ಪಂದ್ಯ 13: ಮೇ 14, 2023: ಚೆನ್ನೈ ಸೂಪರ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್, ಚೆನ್ನೈ (ಸಂಜೆ 7:30)
ಪಂದ್ಯ 14: ಮೇ 20, 2023: ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ (3:30PM)

ಚೆನ್ನೈ ಸೂಪರ್ ಕಿಂಗ್ಸ್ ಸ್ಕ್ವಾಡ್: ಎಂಎಸ್ ಧೋನಿ (ನಾಯಕ), ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈಯ್ನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಖೇಶ್ ಚೌಧರಿ, ಮತೀಶ ಚೌಧರಿ, ಮತೀಶ ಚೌಧರಿ ಸಿಂಗ್ , ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್, ಶೇಕ್ ರಶೀದ್, ನಿಶಾಂತ್ ಸಿಂಧು, ಕೈಲ್ ಜೇಮಿಸನ್, ಅಜಯ್ ಮಂಡಲ್, ಭಗತ್ ವರ್ಮಾ

Story first published: Friday, February 17, 2023, 19:37 [IST]
Other articles published on Feb 17, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+