For Quick Alerts
ALLOW NOTIFICATIONS  
For Daily Alerts
 

ಐಪಿಎಲ್‌ನಲ್ಲಿ 25ನೇ ಅರ್ಧ ಶತಕ ಬಾರಿಸಿದ ಕನ್ನಡಿಗ ರಾಬಿನ್ ಉತ್ತಪ್ಪ

CSKs Robin Uthappa completes 25th half century in IPL
Dhoni ಪಂದ್ಯ ಮುಗಿದ ನಂತರ ಮಾಡಿದ್ದೇನು | Oneindia Kannada

ದುಬೈ: ಕನ್ನಡಿಗ ರಾಬಿನ್ ಉತ್ತಮ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 25ನೇ ಅರ್ಧ ಶತಕ ಬಾರಿಸಿದ್ದಾರೆ. ಭಾನುವಾರ (ಅಕ್ಟೋಬರ್ 10) ನಡೆದ ಐಪಿಎಲ್ ಕ್ವಾಲಿಫೈಯರ್ 1 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ಪರ ಮೈದಾನಕ್ಕಿಳಿದಿದ್ದ ಉತ್ತಪ್ಪ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಈ ಸಾಧನೆ ಮಾಡಿದ್ದಾರೆ.

ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೂರನೇ ಬ್ಯಾಟಿಂಗ್‌ ಕ್ರಮಾಂಕದಲ್ಲಿ ಬಂದಿದ್ದ ರಾಬಿನ್ ಉತ್ತಪ್ಪ 44 ಎಸೆತಗಳಲ್ಲಿ 63 ರನ್ ಗಳಿಸಿದ್ದರು. ಇದರಲ್ಲಿ 7 ಫೋರ್ಸ್, 2 ಸಿಕ್ಸರ್ ಕೂಡ ಸೇರಿತ್ತು. ಈ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಉತ್ತಪ್ಪ ಮೈಲಿಗಲ್ಲು ಸ್ಥಾಪಿಸಿದ್ದಾರೆ.

ಕರ್ನಾಕಟದ ಮಡಿಕೇರಿಯವರಾದ ಉತ್ತಪ್ಪಗೀಗ 35ರ ಹರೆಯ. 192 ಐಪಿಎಲ್ ಪಂದ್ಯಗಳಲ್ಲಿ 4691 ರನ್ ಬಾರಿಸಿದ್ದಾರೆ. ಅಲ್ಲದೆ, 46 ಏಕದಿನ ಪಂದ್ಯಗಳಲ್ಲಿ 934 ರನ್, 13 ಟಿ20ಐ ಪಂದ್ಯಗಳಲ್ಲಿ 249 ರನ್ ದಾಖಲೆ ಹೊಂದಿದ್ದಾರೆ. ಅಂದ್ಹಾಗೆ ಭಾನುವಾರದ ಪಂದ್ಯದಲ್ಲಿ 63 ರನ್ ಬಾರಿಸಿದ ಉತ್ತಪ್ಪ ಟಾಮ್ ಕರನ್ ಓವರ್‌ನಲ್ಲಿ ಶ್ರೇಯಸ್ ಐಯ್ಯರ್‌ಗೆ ಕ್ಯಾಚಿತ್ತು ನಿರ್ಗಮಿಸಿದರು.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್, ಶಿಖರ್ ಧವನ್ 7, ಪೃಥ್ವಿ ಶಾ 60 (34), ರಿಷಭ್ ಪಂತ್ 51 (35), ಶ್ರೇಯಸ್ ಅಯ್ಯರ್ 1, ಶಿಮ್ರಾನ್ ಹೆಟ್ಮೈರ್ 37 (24), ಅಕ್ಸರ್ ಪಟೇಲ್ 10 ರನ್‌ನೊಂದಿಗೆ 20 ಓವರ್‌ಗೆ 5 ವಿಕೆಟ್‌ ಕಳೆದು 172 ರನ್ ಗಳಿಸಿತು. ಜೋಶ್ ಹ್ಯಾಝಲ್ವುಡ್ 2, ರವಿಂದ್ರ ಜಡೇಜಾ 1, ಮೊಯೀನ್ ಅಲಿ 1, ಡ್ವೇನ್ ಬ್ರಾವೋ 1 ವಿಕೆಟ್ ಪಡೆದರು.

ಐಪಿಎಲ್ 2021: ಚೆನ್ನೈ ಸೂಪರ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್, Live ಸ್ಕೋರ್‌

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ಋತುರಾಜ್ ಗಾಯಕವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಎಂಎಸ್ ಧೋನಿ (ಡಬ್ಲ್ಯೂ/ಸಿ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹೇಝಲ್ವುಡ್.
ಬೆಂಚ್: ಸುರೇಶ್ ರೈನಾ, ಇಮ್ರಾನ್ ತಾಹಿರ್, ಜೇಸನ್ ಬೆಹ್ರೆಂಡೋರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ಎನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಕೆಎಂ ಆಸಿಫ್, ಹರಿಶಂಕರ್ ರೆಡ್ಡಿ, ಡೊಮಿನಿಕ್ ಡ್ರೇಕ್ಸ್, ಭಗತ್ ವರ್ಮ, ಕರ್ತನ್ ಶರ್ಮ, ಚೇತೇಶ್ವರ ಪೂಜಾರ

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI
ಶಿಖರ್ ಧವನ್, ಪೃಥ್ವಿ ಶಾ, ರಿಷಭ್ ಪಂತ್ (w/c), ಶ್ರೇಯಸ್ ಅಯ್ಯರ್, ಶಿಮ್ರಾನ್ ಹೆಟ್ಮೈರ್, ಟಾಮ್ ಕರನ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಾಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನಾರ್ಟ್ಜೆ
ಬೆಂಚ್: ವಿಷ್ಣು ವಿನೋದ್, ಕುಲ್ವಂತ್ ಖೆಜ್ರೋಲಿಯಾ, ಲಲಿತ್ ಯಾದವ್, ಪ್ರವೀಣ್ ದೂಬೆ, ಬೆನ್ ದ್ವಾರಶುಯಿಸ್, ಲುಕ್ಮಾನ್ ಮೇರಿವಾಲಾ, ಮಾರ್ಕಸ್ ಸ್ಟೊಯಿನಿಸ್, ಸ್ಯಾಮ್ ಬಿಲ್ಲಿಂಗ್ಸ್, ಸ್ಟೀವನ್ ಸ್ಮಿತ್, ಉಮೇಶ್ ಯಾದವ್, ಅಮಿತ್ ಮಿಶ್ರಾ, ಅಜಿಂಕ್ಯ ರಹಾನೆ, ಇಶಾಂತ್ ಶರ್ಮಾ, ರಿಪಾಲ್ ಪಟೇಲ್.

Story first published: Monday, October 11, 2021, 10:38 [IST]
Other articles published on Oct 11, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+