ಧೋನಿ ಕಣಕ್ಕೆ ಇಳಿಯುವುದು ಯಾವಾಗ? CSKಗೆ ಕಾಡುತ್ತಿದೆ ಅನುಪಸ್ಥಿತಿ
ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಈ ಆವೃತ್ತಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಶನಿವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯವನ್ನು ಕೈ ಚೆಲ್ಲಿದ ಬಳಿಕ ಹಲವು ಪ್ರಶ್ನೆಗಳು ಎದ್ದಿವೆ. ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಗಾಯದ ಸಮಸ್ಯೆಯಿಂದ ಲೀಗ್‌ನಲ್ಲಿ ಪಂದ್ಯಗಳನ್ನು ಆಡದೇ ಇರುವುದು ನಿಜಕ್ಕೂ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಸಿಎಸ್‌ಕೆಗೆ ಧೋನಿ ಅವರ ಅನುಪಸ್ಥಿತಿ ಬಹುವಾಗಿ ಕಾಡುತ್ತಿದೆ.
ಎಸ್‌ಆರ್‌ಎಚ್ ಪಂದ್ಯಕ್ಕೂ ಮುನ್ನ ಸಿಎಸ್‌ಕೆ ಫ್ರಾಂಚೈಸಿ ಧೋನಿ ಹೈದರಾಬಾದ್‌ಗೆ ಬಂದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿತ್ತು. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ತಂಡದ ತರಬೇತಿ ಅವಧಿಯಲ್ಲಿ, 44 ವರ್ಷ ವಯಸ್ಸಿನ ಧೋನಿ ತಂಡದೊಂದಿಗೆ ಅಭ್ಯಾಸ ಶಿಬಿರದಲ್ಲಿ ಕಾಣಿಸಿಕೊಂಡರು. ಅಲ್ಲದೆ ಕೆಲವು ಕ್ರೀಡೆಗಳನ್ನು ಆಡಿ ಗಮನ ಸೆಳೆದರು.

ಮಾಹಿ ಗಾಯದ ಬಗ್ಗೆ ಸಿಎಸ್‌ಕೆ ತಂಡದ ಕೋಚ್ ಸ್ಟೀಫನ್ ಫ್ಲೇಮಿಂಗ್ ದೊಡ್ಡ ಹೇಳಿಕೆ ನೀಡಿದ್ದರು. ಧೋನಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಫ್ಲೇಮಿಂಗ್ ತಿಳಿಸಿದ್ದರು. ಧೋನಿ ಮೊಣಕಾಲಿನ ಸಮಸ್ಯೆಯಿಂದಾಗಿ ಐಪಿಎಲ್‌ನ ಆರಂಭಿಕ ಪಂದ್ಯಗಳಲ್ಲಿ ಕಣಕ್ಕೆ ಇಳಿಯಲಿಲ್ಲ. ಆದರೆ ಇವರು ಎಸ್‌ಆರ್‌ಎಚ್ ವಿರುದ್ಧ ಪಂದ್ಯದಲ್ಲಿ ಕಣಕ್ಕೆ ಇಳಿಯುತ್ತಾರೆ ಎಂದೇ ಎಲ್ಲರೂ ಅಂದಾಜಿಸಿದ್ದರು. ಆದರೆ ಟಾಸ್ ಸಮಯದಲ್ಲಿ ರುತುರಾಜ್ ಗಾಯಕ್ವಾಡ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತು.
ಚೆನ್ನೈಗೆ 7ನೇ ಸ್ಥಾನ
ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ಆಡಿದ 6 ಪಂದ್ಯಗಳಲ್ಲಿ 2 ಜಯ, 4 ಸೋಲು ಕಂಡಿದ್ದು 4 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಉಳಿದ ಪಂದ್ಯಗಳಲ್ಲಿ ಚೆನ್ನೈ ತಂಡ ಸ್ಥಿರ ಪ್ರದರ್ಶನವನ್ನು ನೀಡಿ ಪುಟಿದೇಳುವ ಅನಿವಾರ್ಯತೆ ಇದೆ. ಇಲ್ಲದಿದ್ದರೆ ಚೆನ್ನೈ ಈ ಬಾರಿ ಲೀಗ್ ಹಂತದಲ್ಲೇ ಲೀಗ್‌ಗೆ ಗುಡ್ ಬೈ ಹೇಳುವ ಭೀತಿ ಅನುಭವಿಸುತ್ತಿದೆ.
ಧೋನಿ ಸಾಧನೆ
ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ. ಇವರು ಈಗಾಗಲೇ ಐಪಿಎಲ್‌ನಲ್ಲಿ 278 ಪಂದ್ಯಗಳನ್ನು ಆಡಿದ್ದು, 38ರ ಸರಾಸರಿಯಲ್ಲಿ 5439 ರನ್ ಬಾರಿಸಿದ್ದು, ಇದರಲ್ಲಿ 24 ಅರ್ಧಶತಕಗಳು ಸೇರಿವೆ. ಈ ವೇಳೆ ಧೋನಿ 375 ಬೌಂಡರಿ ಬಾರಿಸಿದ್ದು, 264 ಸಿಕ್ಸರ್ ಸಿಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications