CSK vs DC: ಮೊದಲ ಗೆಲುವಿನ ಹುಡುಕಾಟದಲ್ಲಿ ಚೆನ್ನೈ
ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ಲ್ಯಾನ್ ಮಾಡಿಕೊಂಡಿದೆ. ಶನಿವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಚೆನ್ನೈ ತಂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕಾದಾಟ ನಡೆಸಲಿದೆ. ಉಭಯ ತಂಡಗಳಲ್ಲಿ ಯುವ ಹಾಗೂ ಅನುಭವಿ ಆಟಗಾರರ ದಂಡೇ ಇದೆ. ಆದರೆ ಸಿಎಸ್‌ಕೆ ಸೋಲುಗಳಿಂದ ಹತಾಶವಾಗಿದೆ. ಇನ್ನು ಡೆಲ್ಲಿ ಮತ್ತೊಂದು ಗೆಲುವು ದಾಖಲಿಸಿ ಅಂಕ ಪಟ್ಟಿಯಲ್ಲಿ ಭರ್ಜರಿ ಬಡ್ತಿ ಪಡೆಯುವ ಕನಸು ಕಾಣುತ್ತಿದೆ.
ಡೆಲ್ಲಿ ಕ್ಯಾಪಿಟಲ್ ಆಡಿದ ಮೂರು ಪಂದ್ಯಗಳಲ್ಲಿ 2 ಜಯ, 1 ಸೋಲು ಕಂಡಿದ್ದು, 4 ಅಂಕವನ್ನು ಕಲೆ ಹಾಕಿದೆ. ಇನ್ನು ಚೆನ್ನೈ ತಂಡ ಆಡಿದ ಮೂರು ಪಂದ್ಯಗಳನ್ನು ಸೋಲು ಕಂಡಿದ್ದು, ನಿರಾಸೆ ಅನುಭವಿಸಿದೆ. ಈ ಹಿಂದೆ ಈ ಎರಡೂ ತಂಡಗಳು ಐಪಿಎಲ್‌ನಲ್ಲಿ 31 ಬಾರಿ ಮುಖಾಮುಖಿಯಾಗಿದ್ದು, 19 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು ಡೆಲ್ಲಿ 12 ಪಂದ್ಯಗಳನ್ನು ಗೆದ್ದು ಬೀಗಿದೆ. ಈ ಆವೃತ್ತಿಯಲ್ಲಿ ಮೊದಲ ಜಯ ಸಿಎಸ್‌ಕೆ ದಾಖಲಿಸುತ್ತದಾ ಎಂಬ ಪ್ರಶ್ನೆ ಮೂಡಿದೆ.

ಚೆನ್ನೈ ತಂಡದ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿರುವುದು ತಂಡದ ಚಿಂತೆಯನ್ನು ದ್ವಿಗುಣ ಮಾಡಿದೆ. ನಾಯಕ ರುತುರಾಜ್ ಗಾಯಕ್ವಾಡ್ ಲಯಕ್ಕೆ ಮರಳುವ ಅನಿವಾರ್ಯತೆ ಇದೆ. ಯುವ ಆಟಗಾರ ಆಯುಷ್ ಮಾತ್ರೆ ತಮ್ಮ ಮೇಲೆ ತಂಡ ಇಟ್ಟ ನಂಬಿಕೆಯನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಇದೆ. ಈ ಆಟಗಾರರು ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿದ್ದರು. ಹೀಗಾಗಿ ಇವರ ಮೇಲೆ ಒತ್ತಡ ಹೆಚ್ಚಿದೆ.
ಅಬ್ಬರಿಸಬೇಕಿದೆ ಸ್ಟಾರ್ಸ್
ಮಧ್ಯಮ ಕ್ರಮಾಂಕದಲ್ಲಿ ಸರ್ಫರಾಜ್ ಖಾನ್ ಭರವಸೆ ಮೂಡಿಸಿದ್ದಾರೆ. ಕಾರ್ತಿಕ್ ಶರ್ಮಾ, ಶಿವಂ ದುಬೆ, ಪ್ರಶಾಂತ್ ವೀರ್ ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡಬೇಕಿದೆ. ಕಳೆದ ಪಂದ್ಯದಲ್ಲಿ ಪ್ರಶಾಂತ್ ವೀರ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಇವರ ಮೇಲೆ ಭರವಸೆ ಹೆಚ್ಚಿದೆ. ಜೇಮಿ ಓವರ್‌ಟನ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲ ಪ್ಲೇಯರ್.
ಇಂಪ್ಯಾಕ್ಟ್ ಪ್ಲೇಯರ್ ರೂಪದಲ್ಲಿ ಬೌಲ್ ಮಾಡುವ ಖಲೀಲ್ ಅಹ್ಮದ್, ಮ್ಯಾಟ್ ಹೆನ್ರಿ ಸರಿಯಾದ ಸ್ಥಳದಲ್ಲಿ ಬೌಲಿಂಗ್ ನಡೆಸಬೇಕಿದೆ. ಅಂಶುಲ್ ಕಂಬೋಜ್, ನೂರ್ ಅಹ್ಮದ್ ಸಹ ಬಿಗುವಿನ ದಾಳಿಯನ್ನು ನಡೆಸಿದಲ್ಲಿ ಗೆಲುವಿನ ನಗೆ ಬೀರಬಹುದಾಗಿದೆ.

ರಾಹುಲ್ ಆಕರ್ಷಣೆ
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭರವಸೆಯ ಆಟಗಾರ ಕೆಎಲ್ ರಾಹುಲ್ ಕಳೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಹೀಗಾಗಿ ಇವರು ಚೆನ್ನೈ ವಿರುದ್ಧವೂ ದೊಡ್ಡ ಇನಿಂಗ್ಸ್ ಕಟ್ಟುವ ಲೆಕ್ಕಾಚಾರದಲ್ಲಿದ್ದಾರೆ. ಇನ್ನು ಪತುಮ್ ನಿಸ್ಸಂಕಾ, ನಿತೀಶ್ ರಾಣಾ, ಸಮೀರ್ ರಿಜ್ವಿ ಸ್ಥಿರ ಪ್ರದರ್ಶನ ನೀಡಬೇಕಿದೆ. ಕಳೆದ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ ಮಾಡಿದ ತಪ್ಪನ್ನು ಮರೆತು ಬ್ಯಾಟ್ ಮಾಡುವ ಅನಿವಾರ್ಯತೆ ಇದೆ.
ಬೌಲಿಂಗ್ ವಿಭಾಗದಲ್ಲಿ ಮುಕೇಶ್ ಕುಮಾರ್, ಲುಂಗಿ ಎನ್‌ಗಿಡಿ, ಟಿ ನಟರಾಜನ್ ವೇಗದ ಬೌಲಿಂಗ್ ಮೂಲಕ ಚೆನ್ನೈ ಬ್ಯಾಟರ್‌ಗಳನ್ನು ಕಾಡಬೇಕಿದೆ. ಇನ್ನು ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್ ಬಿಗುವಿನ ಸ್ಪಿನ್ ದಾಳಿ ನಡೆಸಬೇಕಿದೆ. ಚೆನ್ನೈನಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಸ್ಪಿನ್ ಬೌಲರ್‌ಗಳು ಪ್ರಮುಖ ಆಕರ್ಷಣೆ ಆಗಲಿದ್ದಾರೆ.
ಪಂದ್ಯದ ಸಮಯ: ಸಂಜೆ 7.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ ನೆಟ್ ವರ್ಕ್, ಜಿಯೋ ಹಾಟ್ ಸ್ಟಾರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications