Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK vs GT: ಗುಜರಾತ್ ಗೆಲುವಿನಲ್ಲಿ ಮಿಂಚಿದ ರಬಾಡ, ಸಾಯಿ ಸುದರ್ಶನ್‌

ಚೆನ್ನೈ: ವೇಗದ ಬೌಲರ್‌ ಕಗಿಸೊ ರಬಾಡ (25ಕ್ಕೆ 3) ಹಾಗೂ ಆರಂಭಿಕ ಆಟಗಾರ ಸಾಯಿ ಸುದರ್ಶನ್‌ ಅವರ ಭರ್ಜರಿ ಆಟದ ನೆರವಿನಿಂದ ಗುಜರಾತ್ ಟೈಟಾನ್ಸ್‌ 19ನೇ ಆವೃತ್ತಿ ಐಪಿಎಲ್‌ನ 37ನೇ ಪಂದ್ಯದಲ್ಲಿ 8 ವಿಕೆಟ್‌ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಜಯ ಸಾಧಿಸಿದೆ. ಟೈಟಾನ್ಸ್ ತಂಡ ಲೀಗ್‌ನಲ್ಲಿ 4 ಜಯ ಸಾಧಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.

159 ರನ್‌ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟಾನ್ಸ್‌ ತಂಡದ ಆರಂಭ ಉತ್ತಮವಾಗಿತ್ತು. ಆರಂಭಿಕ ಸಾಯಿ ಸುದರ್ಶನ್ ಹಾಗೂ ಶುಭಮನ್‌ ಗಿಲ್‌ ಜೋಡಿ ಮೊದಲ ವಿಕೆಟ್‌ಗೆ 58 ರನ್‌ ಜೊತೆಯಾಟದ ಕಾಣಿಕೆ ನೀಡಿದರು. ಈ ಹಂತದಲ್ಲಿ ಶುಭಮನ್‌ ಗಿಲ್‌ 1 ಬೌಂಡರಿ, 3 ಸಿಕ್ಸರ್ ಸಹಾಯದಿಂದ 33 ರನ್‌ ಬಾರಿಸಿ ನೂರ್ ಅಹ್ಮದ್‌ ತೋಡಿದ ಖೆಡ್ಡಾಗೆ ಬಲಿಯಾದರು.

CSK vs GT

ಎರಡನೇ ವಿಕೆಟ್‌ಗೆ ಸಾಯಿ ಸುದರ್ಶನ್‌ ಹಾಗೂ ಮಧ್ಯಮ ಕ್ರಮಾಂಕದ ಜೋಸ್ ಬಟ್ಲರ್ ಜೋಡಿ ತಂಡಕ್ಕೆ ಆಧಾರವಾಯಿತು. ಈ ಜೋಡಿ 60 ಎಸೆತಗಳಲ್ಲಿ 97 ರನ್‌ ಸೇರಿಸಿತು. ಈ ಜೋಡಿಯ ಆಟಕ್ಕೆ ಬ್ರೇಕ್ ಹಾಕುವಲ್ಲಿ ಚೆನ್ನೈ ಬೌಲರ್‌ಗಳು ವಿಫಲರಾದರು. ಆರಂಭಿಕ ಆಟಗಾರ ಸಾಯಿ ಸುದರ್ಶನ್‌ 4 ಬೌಂಡರಿ, 7 ಸಿಕ್ಸರ್‌ ಸಹಾಯದಿಂದ 87 ರನ್‌ ಸಿಡಿಸಿದರು. ಮಧ್ಯಮ ಕ್ರಮಾಂಕದ ಆಟಗಾರ ಬಟ್ಲರ್ 4 ಬೌಂಡರಿ, 1 ಸಿಕ್ಸರ್ ನೆರವಿನಿಂದ ಅಜೇಯ 39 ರನ್‌ ಬಾರಿಸಿದರು. ಅಂತಿಮವಾಗಿ ಗುಜರಾತ್ ಟೈಟಾನ್ಸ್‌ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 162 ರನ್‌ ಸಿಡಿಸಿ ಜಯ ಸಾಧಿಸಿತು.

ನಾಯಕನ ಆಟವಾಡಿದ ರುತುರಾಜ್

ಟಾಸ್‌ ಸೋತರೂ ಮೊದಲು ಬ್ಯಾಟ್‌ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭ ಕಳಪೆಯಾಗಿತ್ತು. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್‌ 11 ರನ್‌ ಬಾರಿಸಿ ಔಟ್ ಆದರು. ಉರ್ವಿಲ್ ಪಟೇಲ್‌ (4), ಸರ್ಫರಾಜ್‌ ಖಾನ್ (0), ಡೆವಾಲ್ಡ್ ಬ್ರೆವಿಸ್‌ (2) ರನ್‌ ಕಲೆ ಹಾಕುವಲ್ಲಿ ವಿಫಲರಾದರು. ಐದನೇ ವಿಕೆಟ್‌ಗೆ ಶಿವಂ ದುಬೆ ಹಾಗೂ ರುತುರಾಜ್ ಗಾಯಕ್ವಾಡ್ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 43 ಎಸೆತಗಳಲ್ಲಿ 59 ರನ್‌ ಸೇರಿಸಿತು. ಈ ಹಂತದಲ್ಲಿ ಶಿವಂ ದುಬೆ 22 ರನ್‌ ಬಾರಿಸಿ ಔಟ್ ಆದರು. ಕಾರ್ತಿಕ್ ಶರ್ಮಾ 15, ಜೇಮಿ ಓವರ್‌ಟನ್‌ 18 ತಂಡದ ಮೊತ್ತ ಹಿಗ್ಗಿಸಿದರು.

ನಾಯಕ ರುತುರಾಜ್ ಗಾಯಕ್ವಾಡ್‌ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 60 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 74 ರನ್ ಬಾರಿಸಿದರು. ಅಂತಿಮವಾಗಿ ಸಿಎಸ್‌ಕೆ 20 ಓವರ್‌ಗಳಲ್ಲಿ 7 ವಿಕೆಟ್‌ಗೆ 158 ರನ್‌ ಸೇರಿಸಿತು.

Story first published: Sunday, April 26, 2026, 20:20 [IST]
Other articles published on Apr 26, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+