Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

CSK vs KKR IPL 2024: ಜಡೇಜಾ, ತುಷಾರ್ ಮಾರಕ ಬೌಲಿಂಗ್; ಸಿಎಸ್‌ಕೆಗೆ ಸಾಧಾರಣ ಗುರಿ ನೀಡಿದ ಕೆಕೆಆರ್

ಸೋಮವಾರ, ಏಪ್ರಿಲ್ 8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡ ಸಾಧಾರಣ ಮೊತ್ತ ಕಲೆಹಾಕಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟರ್‌ಗಳು ಇಲ್ಲಿ ಅಬ್ಬರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 137 ರನ್ ಗಳಿಸಿದ್ದು, ಸಿಎಸ್‌ಕೆ ತಂಡಕ್ಕೆ 138 ರನ್‌ಗಳ ಸಾಧಾರಣ ಗುರಿ ನೀಡಿದೆ.

CSK vs KKR IPL 2024 Chennai Super Kings Need 138 Runs To Win Against Kolkata Knight Riders

ಕೆಕೆಆರ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಫಿಲ್ ಸಾಲ್ಟ್ ಮತ್ತು ಸುನಿಲ್ ನರೈನ್ ಉತ್ತಮ ಆರಂಭ ನೀಡಲು ಸಾಧ್ಯವಾಗಲಿಲ್ಲ. ಫಿಲ್ ಸಾಲ್ಟ್ ಮೊದಲ ಓವರ್‌ನ ಮೊದಲ ಎಸೆತದಲ್ಲೇ ತುಷಾರ್ ದೇಶಪಾಂಡೆಗೆ ವಿಕೆಟ್ ಒಪ್ಪಿಸಿದರು. ಇನ್ನು ಸುನಿಲ್ ನರೈನ್ 20 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 27 ರನ್ ಗಳಿಸಿ ಔಟಾದರು.

ಬಳಿಕ ಬಂದ ಆಂಗ್‌ಕ್ರಿಸ್ ರಘುವಂಶಿ 18 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 24 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 32 ಎಸೆತಗಳಲ್ಲಿ 3 ಬೌಂಡರಿ ನೆರವಿನಿಂದ 34 ರನ್ ಗಳಿಸಿದರು.

ಬಳಿಕ ಬಂದ ಆಂಗ್‌ಕ್ರಿಸ್ ರಘುವಂಶಿ 18 ಎಸೆತಗಳನ್ನು ಎದುರಿಸಿ 3 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 24 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 32 ಎಸೆತಗಳಲ್ಲಿ 3 ಬೌಂಡರಿ ನೆರವಿನಿಂದ 34 ರನ್ ಗಳಿಸಿದರು.

CSK vs KKR IPL 2024 Chennai Super Kings Need 138 Runs To Win Against Kolkata Knight Riders

ಉಳಿದಂತೆ ವೆಂಕಟೇಶ್ ಅಯ್ಯರ್ 3 ರನ್, ರಮಣದೀಪ್ ಸಿಂಗ್ 13 ರನ್, ರಿಂಕು ಸಿಂಗ್ 9 ರನ್, ಆಂಡ್ರೆ ರಸೆಲ್ 10 ರನ್, ಅನುಕೂಲ್ ರಾಯ್ 3 ರನ್ ಮಾತ್ರ ಗಳಿಸಿ ತಂಡದ ಮೊತ್ತವನ್ನು 130ರ ಗಡಿ ದಾಟಿಸಿದರು.

ಇನ್ನು ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ರವೀಂದ್ರ ಜಡೇಜಾ 4 ಓವರ್‌ಗಳಲ್ಲಿ 18 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ತುಷಾರ್ ದೇಶಪಾಂಡೆ 4 ಓವರ್‌ಗಳಲ್ಲಿ 33 ರನ್ ನೀಡಿ 3 ವಿಕೆಟ್ ಪಡೆದರು. ಮುಸ್ತಾಫಿಜುರ್ ರಹಮಾನ್ 4 ಓವರ್‌ಗಳಲ್ಲಿ 22 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಉಳಿದಂತೆ ಮಹೀಶ್ ತೀಕ್ಷಣ ಒಂದು ವಿಕೆಟ್ ಪಡೆದರು.

Story first published: Monday, April 8, 2024, 21:23 [IST]
Other articles published on Apr 8, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+